)
IBPS PO salary: ಸರ್ಕಾರಿ ಬ್ಯಾಂಕ್ ಕೆಲಸಕ್ಕೆ ತಯಾರಿ ನಡೆಸುತ್ತಿರುವ ಬಹುತೇಕ ಪ್ರತಿಯೊಬ್ಬ ಅಭ್ಯರ್ಥಿಯ ಮೊದಲ ಆದ್ಯತೆಯೆಂದರೆ ಪಿಒ ಆಗುವುದು. ಇದಕ್ಕಾಗಿ ಅವರು ಹಗಲಿರುಳು ಶ್ರಮಿಸುತ್ತಾರೆ. ಆದರೆ ಎಲ್ಲರೂ ಇದರಲ್ಲಿ ಯಶಸ್ಸನ್ನು ಪಡೆಯುವುದಿಲ್ಲ, ಆಯ್ದ ಕೆಲವರು ಮಾತ್ರ ಖಾಲಿ ಹುದ್ದೆಗೆ ಅನುಗುಣವಾಗಿ ತಮ್ಮ ಗುರಿ ಸಾಧಿಸಲು ಸಾಧ್ಯವಾಗುತ್ತದೆ. ನೀವು ಸಹ ಇದಕ್ಕಾಗಿ ತಯಾರಿ ನಡೆಸುತ್ತಿದ್ದರೆ, ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಂದರೆ ಐಬಿಪಿಎಸ್ ಪ್ರೊಬೇಷನರಿ ಆಫೀಸರ್ / ಮ್ಯಾನೇಜ್ಮೆಂಟ್ ಟ್ರೈನಿ (PO / MT) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಇದಕ್ಕಾಗಿ ಅರ್ಜಿ ಸಲ್ಲಿಸಬಹುದು. ಐಬಿಪಿಎಸ್ ಪಿಒ ಪ್ರತಿ ತಿಂಗಳು ಎಷ್ಟು ಸಂಬಳ ಪಡೆಯುತ್ತಾರೆ ಎಂದು ನಿಮಗೆ ತಿಳಿದಿದೆಯೇ? ಈ ವಿವರ ನಿಮಗೆ ತಿಳಿದಿಲ್ಲದಿದ್ದರೆ ಟೆನ್ಶನ್ ಬೇಡ.. ಇಂದು ಇದರ ಬಗ್ಗೆ ನಾವು ನಿಮಗೆ ಮಾಹಿತಿ ನೀಡಲಿದ್ದೇವೆ...
ವೇತನ ಎಷ್ಟು ಸಿಗುತ್ತದೆ..?
ಮೂಲ ವೇತನ: ₹48,480
ವೇತನ ಶ್ರೇಣಿ: ₹48,480–2000/7–62480–2340/2–67160–2680/7–85920
ಭತ್ಯೆಗಳು: ತುಟ್ಟಿಭತ್ಯೆ (DA), ಮನೆ ಬಾಡಿಗೆ ಭತ್ಯೆ (HRA), ವಿಶೇಷ ಭತ್ಯೆ, ನಗರ ಪರಿಹಾರ ಭತ್ಯೆ (CCA) ಮತ್ತು ಇತರ ಪ್ರಯೋಜನಗಳು.
ಒಟ್ಟು ಸಂಬಳ: ಸುಮಾರು ₹90,732.77
ಕೈಗೆ ಸಿಗುವ ಸಂಬಳ: ಸುಮಾರು ₹76,430.77
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
IBPS ಪ್ರೊಬೇಷನರಿ ಆಫೀಸರ್/ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ವಿಂಡೋ ಜುಲೈ 21, 2025ರವರೆಗೆ ತೆರೆದಿರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಈ ದಿನಾಂಕದ ಮೊದಲು ತಮ್ಮ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಎಷ್ಟು ಶುಲ್ಕ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ SC/ST/PwBD ಅಭ್ಯರ್ಥಿಗಳು 175 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅದೇ ರೀತಿ SC/ST/PwBD ಅಭ್ಯರ್ಥಿಗಳನ್ನು ಹೊರತುಪಡಿಸಿ ಎಲ್ಲಾ ಅಭ್ಯರ್ಥಿಗಳು 850 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಪೂರ್ವಭಾವಿ ಪರೀಕ್ಷೆಯ ಮಾದರಿ
ಈ ನೇಮಕಾತಿಗಾಗಿ ನಡೆಸಲಾಗುವ ಪ್ರಾಥಮಿಕ ಪರೀಕ್ಷೆಯು ಒಟ್ಟು ಮೂರು ವಿಭಾಗಗಳನ್ನು ಹೊಂದಿರುತ್ತದೆ. ಇಂಗ್ಲಿಷ್ ಭಾಷೆ, ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ರೀಸನಿಂಗ್ ಎಬಿಲಿಟಿ. ಮೂರು ವಿಭಾಗಗಳ ಅವಧಿ ತಲಾ 20 ನಿಮಿಷಗಳು. ಇಂಗ್ಲಿಷ್ ಭಾಷೆಯ 30 ಪ್ರಶ್ನೆಗಳು 30 ಅಂಕಗಳಿರುತ್ತವೆ. ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ನ 35 ಪ್ರಶ್ನೆಗಳು 30 ಅಂಕಗಳಿರುತ್ತವೆ. ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳು 40 ಅಂಕಗಳಿರುತ್ತವೆ. ಈ ನೇಮಕಾತಿಯ ಮೂಲಕ ಒಟ್ಟು 5208 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ