ನ್ಯಾಷನಲ್ ಇ-ಸ್ಕಾಲರ್‌ಶಿಪ್‌ಗೆ ಯಾರೆಲ್ಲಾ ಅರ್ಹರು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಪ್ರಸಕ್ತ ಸಾಲಿಗೆ ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎನ್‌ಎಸ್‌ಪಿ ಪೋರ್ಟಲ್) ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Aug 20, 2024, 01:45 PM IST
  • ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದ ಎನ್‌ಎಸ್‌ಪಿ ಪೋರ್ಟಲ್‌ನ www.scholarships.gov.in ನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿದೆ
 ನ್ಯಾಷನಲ್ ಇ-ಸ್ಕಾಲರ್‌ಶಿಪ್‌ಗೆ ಯಾರೆಲ್ಲಾ ಅರ್ಹರು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ title=
ಸಾಂಧರ್ಭಿಕ ಚಿತ್ರ

ಬಳ್ಳಾರಿ: ಪ್ರಸಕ್ತ ಸಾಲಿಗೆ ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎನ್‌ಎಸ್‌ಪಿ ಪೋರ್ಟಲ್) ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡುತ್ತಿರುವ ಶಾಲಾ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳ ಮುಖಾಂತರ ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದ ಎನ್‌ಎಸ್‌ಪಿ ಪೋರ್ಟಲ್‌ನ www.scholarships.gov.in ನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಭೂಕುಸಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿ-ಸಚಿವ ಕೃಷ್ಣ ಬೈರೇಗೌಡ

ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿದೆ.

ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದ ನಂತರ ಅರ್ಜಿಯ ಒಂದು ಪ್ರತಿಯನ್ನು ತಮ್ಮ ವ್ಯಾಪ್ತಿಗೊಳಪಡುವ ಗ್ರಾ.ಪಂ. ವಿಆರ್‌ಡಬ್ಲೂ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ಯುಆರ್‌ಡಬ್ಲೂ, ತಾ.ಪಂ. ಎಂಆರ್‌ಡಬ್ಲೂ ಇವರಿಗೆ ಒಂದು ಪ್ರತಿ ಸಲ್ಲಿಸಬೇಕು.
ವಿವರಗಳಿಗಾಗಿ ಬಳ್ಳಾರಿ ಮತ್ತು ಕಂಪ್ಲಿಯ ವಿವಿದ್ದೊದ್ದೇಶ ಪುನರ್ವಸತಿ ಕಾರ್ಯಕರ್ತರ ಮೊ.8880875620, ಕುರುಗೋಡು ಮೊ.9538000887, ಸಿರುಗುಪ್ಪ ಮೊ.9743509698, ಸಂಡೂರು ಮೊ.9632052270 ಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-267886 ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು ಎಂದು ವಿಕಲಚೇತನರ ಹಾಗೂ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News