ರಾಜ್ಯದಲ್ಲಿ ವೈಎಸ್‍ಟಿ ತೆರಿಗೆ ಜಾರಿಗೆ ಬಂದಿದೆ: ಮಾಜಿ ಸಿಎಂ ಎಚ್‍.ಡಿ.ಕುಮಾರಸ್ವಾಮಿ ನೇರ ಆರೋಪ

ಕಾಂಗ್ರೆಸ್ ಸರ್ಕಾರದಲ್ಲಿ ಈಗಾಗಲೇ ಆಡಳಿತ ಹಳಿತಪ್ಪಿದೆ. ‘ಒಂದು ಸರ್ಕಾರ, ಹತ್ತಾರು ಮುಖ್ಯಮಂತ್ರಿಗಳು' ಎನ್ನುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಸಿದ್ದರಾಮಯ್ಯನವರು ಒಬ್ಬರೇ ಮುಖ್ಯಮಂತ್ರಿ ಅಲ್ಲ. ಇಲಾಖೆಗೊಬ್ಬ ಮುಖ್ಯಮಂತ್ರಿ ಇದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

Written by - Prashobh Devanahalli | Edited by - Puttaraj K Alur | Last Updated : Jul 2, 2023, 02:30 PM IST
  • ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹೊಸದಾಗಿ ವೈಎಸ್‍ಟಿ (YST) ತೆರಿಗೆ ಆರಂಭವಾಗಿದೆ
  • ವರ್ಗಾವಣೆ ದಂಧೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಳುಗೇಳುತ್ತಿದೆ
  • ಒಂದು ಸರ್ಕಾರ, ಹತ್ತಾರು ಮುಖ್ಯಮಂತ್ರಿಗಳು ಎಂದು ಕುಟುಕಿದ ಮಾಜಿ ಸಿಎಂ ಕುಮಾರಸ್ವಾಮಿ
ರಾಜ್ಯದಲ್ಲಿ ವೈಎಸ್‍ಟಿ ತೆರಿಗೆ ಜಾರಿಗೆ ಬಂದಿದೆ: ಮಾಜಿ ಸಿಎಂ ಎಚ್‍.ಡಿ.ಕುಮಾರಸ್ವಾಮಿ ನೇರ ಆರೋಪ title=
ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಕಿಡಿ!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹೊಸದಾಗಿ ವೈಎಸ್‍ಟಿ (YST) ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ಸುದ್ದಿಗಾರರ ಜೊತೆಗೆ ಎಚ್‍ಡಿಕೆ ಮಾತನಾಡಿದರು.

ವೈಎಸ್‍ಟಿ ಎಂದರೆ ಏನು? ಸ್ವಲ್ಪ ಬಿಡಿಸಿ ಹೇಳಿ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮಧ್ಯರಾತ್ರಿವರೆಗೂ ತಮ್ಮ ಮನೆಗಳಲ್ಲಿ ಅಧಿಕಾರಿಗಳ ಸಭೆ ಮಾಡುವ ಘನಂದಾರಿ ವ್ಯಕ್ತಿಗಳನ್ನು ಕೇಳಿ? ಈಗಾಗಲೇ ವರ್ಗಾವಣೆ ದಂಧೆಗಾಗಿ ಯಾರನ್ನೆಲ್ಲ ಫೀಲ್ಡಿಗೆ ಇಳಿಸಿ ಗುಪ್ತ ಸಭೆಗಳನ್ನು ಮಾಡುತ್ತಿದ್ದಾರೋ ಅವರನ್ನೇ ಕೇಳಿ? ನೀವೂ ಪತ್ತೆ ಹಚ್ಚಿ’ ಎಂದು ಹೇಳಿದರು.

ವರ್ಗಾವಣೆ ದಂಧೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಟ್ಟಿರುವ ಹೇಳಿಕೆ ಬಗ್ಗೆ ಕಿಡಿಕಿಡಿಯಾದ ಎಚ್‍ಡಿಕೆ, ‘ನಾನು ಸಿದ್ದರಾಮಯ್ಯರನ್ನು ಕೇಳಲು ಬಯಸುತ್ತೇನೆ. ನಾನು ನಿಮ್ಮ ಪಕ್ಷದ ಜೊತೆ ಸರ್ಕಾರ ರಚನೆ ಮಾಡಿದ್ದಾಗ ನೀವೆಲ್ಲಾ ಏನೇನು ಮಾಡಿದ್ದೀರಿ ಎನ್ನುವುದು ಗೊತ್ತಿದೆ. ಪೊಗದಸ್ತಾದ ಇಲಾಖೆಗಳನ್ನು ಇಟ್ಟುಕೊಂಡಿದ್ದ ನಿಮ್ಮ ಮಂತ್ರಿಗಳು ಏನು ಮಾಡಿದರು? ಮುಖ್ಯಮಂತ್ರಿಯಾಗಿ ನಾನು ಯಾವೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆಯೇ ಇರಲಿಲ್ಲ. ಎಲ್ಲಾ ದಂಧೆಗಳು ಯಾರ ಮೂಗಿನಡಿ ನಡೆಯುತ್ತಿದ್ದವು ಎನ್ನುವುದು ಎಲ್ಲರಿಗೂ ಗೊತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಳ್ಳಾರಿ ನಗರದಲ್ಲಿ ವಿವಿಧೆಡೆ ದಾಳಿ: 04 ಬಾಲಕಾರ್ಮಿಕರ ರಕ್ಷಣೆ

‘ಹಣ ಕೊಟ್ಟು ಪೋಸ್ಟ್ ಪಡೆಯಲು ಬಂದವರನ್ನು ನಾನು ದೂರ ಇಟ್ಟಿದ್ದೆ. ಬಿಡಿಎ ಮೇಲೆ ಬಂದು ಕೊರಲು ಬಂದ ಅಧಿಕಾರಿಗೆ ಹೊರಗಟ್ಟಿದ್ದೆ. ಯಲಹಂಕ ತಹಶೀಲ್ದಾರ್ ಹುದ್ದೆಗೆ ಒಂದೂವರೆ ಕೋಟಿ ಕೊಡ್ತೀವಿ ಅಂದವರನ್ನು ಆಚೆ ಇಟ್ಟಿದ್ದೆ. ಇದು ನಾನು ನಡೆಸಿದ ಆಡಳಿತ. ಈಗ ನೋಡಿದರೆ ವೈಎಸ್‍ಟಿ ತೆರಿಗೆ ಅಂತ ಇವರ ಶುರು ಮಾಡಿಕೊಂಡಿದ್ದಾರೆ’ ಎಂದು ಕಟುವಾಗಿ ಟೀಕಿಸಿದರು. ‘ವಸೂಲಿ ಮಾಡಿ ವರ್ಗಾವಣೆ ಮಾಡುವ ದಂಧೆ ಮಾಡದೇ ವಸೂಲಿ ಶುರುವಾಗಿದೆ. ಅಧಿಕಾರಿಗಳನ್ನು ಮನೆಯಲ್ಲಿ ಕೂರಿಸಿಕೊಂಡು ರಾತ್ರಿ ಒಂದು ಗಂಟೆಯವರೆಗೆ ಸಭೆ ಮಾಡ್ತಾ ಇದ್ದಾರಲ್ಲಾ.. ಅದು ಏತಕ್ಕೆ? ಸರ್ಕಾರಿ ಕಚೇರಿ ಏಕೆ ಸಭೆಗಳನ್ನು ನಡೆಸಲ್ಲ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಒಂದು ಸರ್ಕಾರ, ಹತ್ತಾರು ಮುಖ್ಯಮಂತ್ರಿಗಳು

ಕಾಂಗ್ರೆಸ್ ಸರಕಾರದಲ್ಲಿ ಈಗಾಗಲೇ ಆಡಳಿತ ಹಳಿತಪ್ಪಿದೆ. ‘ಒಂದು ಸರ್ಕಾರ, ಹತ್ತಾರು ಮುಖ್ಯಮಂತ್ರಿಗಳು' ಎನ್ನುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಸಿದ್ದರಾಮಯ್ಯನವರು ಒಬ್ಬರೇ ಮುಖ್ಯಮಂತ್ರಿ ಅಲ್ಲ. ಇಲಾಖೆಗೊಬ್ಬ ಮುಖ್ಯಮಂತ್ರಿ ಇದ್ದಾರೆ. ಒಬ್ಬೊಬ್ಬರು ಮುಖ್ಯಮಂತ್ರಿಯಂತೆ ಹೇಳಿಕೆ ನೀಡುತ್ತಾರೆ. ಇಲ್ಲಿ ಸಿದ್ದರಾಮಯ್ಯ ಒಂದು ಹೇಳ್ತಾರೆ, ಸತೀಶ್ ಜಾರಕಿಹೊಳಿ ಇನ್ನೊಂದು ಹೇಳ್ತಾರೆ. ಹಾಗಾದರೆ ಇಲ್ಲಿ ಎಷ್ಟು ಜನ ಸಿಎಂಗಳಿದ್ದಾರೆ? ಎಂದು ಪ್ರಶ್ನಿಸಿದ ಅವರು, ಇದನ್ನು ಸರ್ಕಾರ ಅಂತ ಕರೀತೀರಾ? ಇಲ್ಲೇನಾದರೂ ಪಾರದರ್ಶಕತೆ ಅನ್ನೋದು ಇದೆಯಾ?’ ಎಂದು ಪ್ರಶ್ನಿಸಿದರು.

ಬಿಜಿಪಿ ವಿರೋಧಿ ಸಭೆಗೆ ಕರೆದಿಲ್ಲ, ನಾವು ಹೋಗಲ್ಲ

ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ವಿರೋಧಿ ಪಕ್ಷಗಳ ಸಭೆಗೆ ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟಿಲ್ಲ, ನಮ್ಮನ್ನು ಯಾರೂ ಕರೆದಿಲ್ಲ. ಹೀಗಾಗಿ ಆ ಸಭೆಗೆ ಹೋಗುವುದಿಲ್ಲ. ನಮ್ಮದು ಸಣ್ಣ ಪಕ್ಷ. ಅದನ್ನು ಬೆಳೆಸುತ್ತೇವೆ, ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಅದಕ್ಕಾಗಿ ಸರಣಿ ಸಭೆಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಇದನ್ನೂ ಓದಿ:  ಕಾಂತಿ ಕಣ್ಮುಚ್ಚಿ ಕಣ್ಣೀರು ತರಿಸಿದಳು...!  ಇದು ಗ್ಯಾಂಗ್ ಲೀಡರ್ ಕಾಂತಿಯ ಇನ್‌ಸೈಡ್ ಕಹಾನಿ..

ಮಹತ್ವದ ಸಭೆ

ಪಕ್ಷದ ಕಚೇರಿಯಲ್ಲಿ ಮಹತ್ವದ ಸಭೆ ಕರೆದಿದ್ದೇವೆ. ಈ ಸರ್ಕಾರ ರಚನೆಯಾಗಿ 50 ದಿನ ಆಗಿದೆ. ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು, ಸರ್ಕಾರದ ವಿರುದ್ಧ ಹೋರಾಟಗಳನ್ನು ಹೇಗೆಲ್ಲಾ ಹಮ್ಮಿಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಕಡಿಮೆ ಶಾಸಕರಿದ್ದಾರೆ ಎಂದು ನಾವು ಎದೆಗುಂದುವುದಿಲ್ಲ. ಸದನದ ಒಳಗೆ, ಹೊರಗೆ ಹೋರಾಟ ನಡೆಸುತ್ತೇವೆ. ಯಾವ ವಿಷಯಗಳನ್ನು ಕೈಗೆತ್ತಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ. ಗ್ಯಾರಂಟಿ ಬಗ್ಗೆ ನಾನು ಸದನದಲ್ಲಿ ಚರ್ಚೆ ಮಾಡಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಆಗಿದೆ. ಜನರನ್ನು ಇನ್ನೂ ಎಷ್ಟು ವರ್ಷ ಕೈ ಚಾಚುವಂತೆ ಮಾಡ್ತೀರಾ? ಎಂದು ಕೇಳುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು. ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಶಾಸಕಿ ಕರೆಮ್ಮ ನಾಯಕ ಮುಂತಾದವರು ಹಾಜರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News