ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿಂದ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಮತ್ತು ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Thalapathy Vijay: ಏನೇ ಆದ್ರೂ ನಾನು ವಿಜಯ್’ಗೆ ಓಟು ಹಾಕಲ್ಲ! ಮುಲಾಜಿಲ್ಲದೆ ಬಹಿರಂಗ ಹೇಳಿಕೆ ಕೊಟ್ಟ ಆ ಸ್ಟಾರ್ ನಟ ಯಾರು?


18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಫೆಬ್ರವರಿ ಮಾಹೆಯ ಅಂತ್ಯದಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಗಳನ್ನು ನೀಡಲಾಗುತ್ತದೆ. ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.


ಇದನ್ನೂ ಓದಿ: “ನಾನು ಬಿಗ್ ಬಾಸ್’ಗೆ ಹೋಗೋಕೆ ಕಾರಣ ಅವರು”- ಕಡೆಗೂ ‘ಆ’ ವ್ಯಕ್ತಿ ಯಾರೆಂದು ಸತ್ಯ ಬಾಯ್ಬಿಟ್ಟ ಸಂಗೀತ


ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ ಮೊ.ಸಂ: 9980510717, 9483485489 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ