ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಇಂದು ಬೆಳ್ಳಂಬೆಳಗ್ಗೆ ಟ್ರಕ್‍ಗೆ ಬಸ್‌ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 11 ಜನರು ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ 38ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ನಾಸಿಕ್‌ನ ಔರಂಗಾಬಾದ್ ರಸ್ತೆಯಲ್ಲಿ ಮುಂಜಾನೆ 5.15ರ ವೇಳೆಗೆ ಡೀಸೆಲ್ ಸಾಗಿಸುತ್ತಿದ್ದ ಟ್ರಕ್‌ಗೆ ಬಸ್‍ ಡಿಕ್ಕಿ ಹೊಡೆದ ನಂತರ  ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಥಳದಲ್ಲೇ 11 ಮಂದಿ ಮೃತಪಟ್ಟಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಸ್ಲೀಪರ್ ಕೋಚ್‍ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಾಗಿದ್ದಾರೆ. ಸದ್ಯ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ನಾಸಿಕ್‍ನ ಉಪ ಪೊಲೀಸ್ ಆಯುಕ್ತ ಅಮೋಲ್ ತಾಂಬೆ ತಿಳಿಸಿದ್ದಾರೆ.


ಇದನ್ನೂ ಓದಿ: ಭಾರತದ ಮೊದಲ 'ಸಾತ್ವಿಕ' ರೈಲು : ಶುದ್ಧ ಸಸ್ಯಾಹಾರ ಮಾತ್ರ ಲಭ್ಯ.. ಯಾವ ಮಾರ್ಗದಲ್ಲಿ ಚಲಿಸುತ್ತೆ ತಿಳಿಯಿರಿ


ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುವುದರ ಬಗ್ಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಹೀಗಾಗಿ ತನಿಖೆ ನಡೆಸಲಾಗುತ್ತಿದೆ ಅಂತಾ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಸ್‍ಗೆ ಬೆಂಕಿ ಹೊತ್ತಿ ಉರಿಯುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.


ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಅಪಘಾತವು ಮುಂಜಾನೆ 5.15 ರ ಸುಮಾರಿಗೆ ಸಂಭವಿಸಿದೆ. ನಂತರ ಸ್ಥಳೀಯರು ಪೊಲೀಸರು ಮತ್ತು ಆಂಬ್ಯುಲೆನ್ಸ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಪಘಾತದಲ್ಲಿ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ  2 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50 ಸಾವಿರ ರೂ. ನೀಡಲಾಗುವುದು ಎಂದು ಅವರು ಹೇಳಿದ್ದಾರೆ.


Bangalore CCB : ಚೈನೀಸ್​ ಲೋನ್​ ಆ್ಯಪ್‌ಗಳಿಂದ 100 ಕೋಟಿಗೂ ಹೆಚ್ಚು ಹಣ ಫ್ರೀಜ್ ​: ಸಿಸಿಬಿಯಿಂದ 70 ಕೋಟಿ ಜಪ್ತಿ


ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಮಹಾರಾಷ್ಟ್ರ ಸರ್ಕಾರ ಭರಿಸಲಿದೆ ಎಂದು ರಾಜ್ಯ ಸಚಿವ ದಾದಾ ಭೂಸೆ ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.