Jammu and Kashmir: ಆಳವಾದ ಕಮರಿಗೆ ಬಸ್ ಬಿದ್ದು 12 ಮಂದಿ ದುರ್ಮರಣ!

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಆಳವಾದ ಕಂದರಕ್ಕೆ ಬಸ್ ಬಿದ್ದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ.

Written by - Puttaraj K Alur | Last Updated : Sep 14, 2022, 05:02 PM IST
  • ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬಸ್ಸೊಂದು ಆಳವಾದ ಕಂದರಕ್ಕೆ ಬಿದ್ದಿದೆ
  • ಘಟನೆಯಲ್ಲಿ 12 ಜನರು ಸ್ಥಳದಲ್ಲೇ ಸಾವನ್ನಪಿದ್ದು, 25 ಮಂದಿ ಗಾಯಗೊಂಡಿದ್ದಾರೆ
  • ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
Jammu and Kashmir: ಆಳವಾದ ಕಮರಿಗೆ ಬಸ್ ಬಿದ್ದು 12 ಮಂದಿ ದುರ್ಮರಣ! title=
ಜಮ್ಮು-ಕಾಶ್ಮೀರದಲ್ಲಿ ಬಸ್ ಅಪಘಾತ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬರೇರಿ ನಾಲಾ ಬಳಿ ಪ್ರಯಾಣಿಸುತ್ತಿದ್ದ ಬಸ್ಸೊಂದು ಆಳವಾದ ಕಂದರಕ್ಕೆ ಬಿದ್ದು 12 ಜನರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ.

ಸಾವ್ಜಿಯಾನ್‌ನಿಂದ ಮಂಡಿಗೆ ತೆರಳುತ್ತಿದ್ದ ವೇಳೆ ಈ ಬಸ್ ಅಪಘಾತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು, ಪೊಲೀಸರು ಮತ್ತು ಸೇನೆಯಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Viral Video :‌ ನೆಲದ ಮೇಲೆ ಬಿದ್ದು ಒದ್ದೆಯಾದ ಆಹಾರ ಸೇವಿಸಿದ ವ್ಯಕ್ತಿ, ಊಟದ ಮಹತ್ವ ತಿಳಿಸುವ ದೃಶ್ಯ

ಈ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಟ್ವೀಟ್ ಮಾಡಿದ್ದು, ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ. ‘ಪೂಂಛ್‌ನ ಸಾವ್ಜಿಯಾನ್‌ನಲ್ಲಿ ರಸ್ತೆ ಅಪಘಾತದಿಂದ ಪ್ರಾಣಹಾನಿಯಾಗಿರುವುದಕ್ಕೆ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಉತ್ತಮ ನೆರವು ನೀಡುವಂತೆ ಪೊಲೀಸ್ ಮತ್ತು ನಾಗರಿಕ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ಹೇಳಿದ್ದಾರೆ.

ಇನ್ನು ಘಟನೆ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದು, ಅಪಘಾತದಲ್ಲಿ ಸಂಭವಿಸಿರುವ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ‘ಪೂಂಚ್‌ನ ಸಾವ್ಜಿಯಾನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತ ದುರಂತದಲ್ಲಿ ಜೀವಹಾನಿ ತೀವ್ರ ದುಃಖವನ್ನುಂಟುಮಾಡಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ’ ಅಂತಾ ಹೇಳಿದ್ದಾರೆ.   

ಇದನ್ನೂ ಓದಿ: OMG Video: ಅಪಘಾತಕ್ಕೀಡಾದ ವ್ಯಕ್ತಿಯನ್ನು JCBಯಲ್ಲಿ ಆಸ್ಪತ್ರೆಗೆ ಕರೆದೊಯ್ದ ವಿಡಿಯೋ ವೈರಲ್

ಮಾಜಿ ಜೆ & ಕೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ‘ಪೂಂಚ್‌ನಲ್ಲಿ ಬಸ್ ಅಪಘಾತದಿಂದ ಅನೇಕರು ಸಾವನ್ನಪ್ಪಿರುವ ಸುದ್ದಿ ಕೇಳಿ ನನಗೆ ದುಃಖವಾಗಿದೆ. ಅಗಲಿದವರ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ’ ಅಂತಾ ಪ್ರಾರ್ಥಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News