MP Bus Accident: ಮಧ್ಯ ಪ್ರದೇಶದಲ್ಲಿ ನರ್ಮದಾ ನದಿಗೆ ಉರುಳಿದ ಬಸ್‌: 12 ಮಂದಿ ಸಾವು

ಬಸ್‌ ನಿಯಂತ್ರಣ ಕಳೆದುಕೊಂಡು ಈ ಅವಘಡ ಸಂಭವಿಸಿದೆ. ಇಲ್ಲಿನ ಖಾಲ್‌ಘಾಟ್‌ ಸೇತುವೆಯಿಂದ ಉರುಳಿದ ಬಸ್‌ ನದಿಗೆ ಬಿದ್ದಿದೆ ಎಂದು ಮಧ್ಯ ಪ್ರದೇಶದ ಸಚಿವ ನರೋತ್ತಮ್‌ ಮಿಶ್ರಾ ತಿಳಿಸಿದ್ದಾರೆ.

Written by - Bhavishya Shetty | Last Updated : Jul 18, 2022, 03:30 PM IST
  • ಮಧ್ಯಪ್ರದೇಶದ ಧಾರ್‌ ಜಿಲ್ಲೆಯಲ್ಲಿ ಬಸ್‌ ದುರಂತ
  • ನರ್ಮದಾ ನದಿಗೆ ಉರುಳಿದ ಬಸ್‌, 12 ಮಂದಿ ಸಾವು
  • 55 ಮಂದಿ ಜನರ ಪೈಕಿ 12 ಮಂದಿ ಸಾವು, 15 ಮಂದಿಗೆ ಗಾಯ
MP Bus Accident: ಮಧ್ಯ ಪ್ರದೇಶದಲ್ಲಿ ನರ್ಮದಾ ನದಿಗೆ ಉರುಳಿದ ಬಸ್‌: 12 ಮಂದಿ ಸಾವು title=
MP Bus Accident

ಮಧ್ಯಪ್ರದೇಶದ ಧಾರ್‌ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸಂಭವಿಸಿದ ಬಸ್‌ ದುರಂತದಲ್ಲಿ ಸುಮಾರು 12 ಮಂದಿ ಮೃತಪಟ್ಟಿದ್ದಾರೆ. ಪುಣೆ ಕಡೆಗೆ ಹೊರಟ್ಟಿದ್ದ ಬಸ್‌ನಲ್ಲಿ 55 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅನೇಕರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಇದನ್ನೂ ಓದಿ: Mahindra Scorpioಯಿಂದ Boleroವರೆಗೆ 1.79 ಲಕ್ಷ ರಿಯಾಯಿತಿ ದರದಲ್ಲಿ ಸಿಗುತ್ತಿವೆ ಈ ಕಾರುಗಳು

ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ ಇಂದು ಮಧ್ಯಪ್ರದೇಶದ ಇಂದೋರ್‌ನಿಂದ ಪುಣೆಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ನರ್ಮದಾ ನದಿಗೆ ಉರುಳಿ ಬಿದ್ದಿದೆ. ಪರಿಣಾಮ ಬಸ್‌ನಲ್ಲಿದ್ದ 55 ಮಂದಿ ಜನರ ಪೈಕಿ 12 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ 15 ಮಂದಿಯನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. 

 

ಬಸ್‌ ನಿಯಂತ್ರಣ ಕಳೆದುಕೊಂಡು ಈ ಅವಘಡ ಸಂಭವಿಸಿದೆ. ಇಲ್ಲಿನ ಖಾಲ್‌ಘಾಟ್‌ ಸೇತುವೆಯಿಂದ ಉರುಳಿದ ಬಸ್‌ ನದಿಗೆ ಬಿದ್ದಿದೆ ಎಂದು ಮಧ್ಯ ಪ್ರದೇಶದ ಸಚಿವ ನರೋತ್ತಮ್‌ ಮಿಶ್ರಾ ತಿಳಿಸಿದ್ದಾರೆ.

ಸದ್ಯ ಕಾರ್ಯಾಚರಣೆ ಮುಂದುವರೆಸಿರುವ ರಕ್ಷಣಾ ಸಿಬ್ಬಂದಿ, ಬೃಹತ್‌ ಯಂತ್ರಗಳ ಮೂಲಕ ಬಸ್‌ನ್ನು ನೀರಿನಿಂದ ಮೇಲಕ್ಕೆ ಎತ್ತಿದ್ದಾರೆ. ಈಗಾಗಲೇ 15 ಮಂದಿಯನ್ನು ರಕ್ಷಿಸಲಾಗಿದೆ. ಕಾರ್ಯಾಚರಣೆ ಮುಂದುವರೆಸುವುದಾಗಿ ಮಧ್ಯ ಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ತಂಡ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಇದನ್ನೂ ಓದಿ: ಎರಡು ದೇಶದ ಪೊಲೀಸರಿಗೂ ಸಿಗದ ಆರೋಪಿಯನ್ನು ಗಂಟೆಗಳಲ್ಲಿ ಪತ್ತೆ ಹಚ್ಚಿತು ನಾಯಿ!

ಪ್ರಧಾನಿ ಸಂತಾಪ: 
ಘಟನೆ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ, "ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಬಸ್ ದುರಂತ ದುಃಖ ತಂದಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬದ ಜೊತೆ ನಾವಿದ್ದೇವೆ. ರಕ್ಷಣಾ ಕಾರ್ಯ ನಡೆಯುತ್ತಿದ್ದು, ಸ್ಥಳೀಯ ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದ್ದಾರೆ" ಎಂದು ಸಂತಾಪ ಸೂಚಿಸಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News