ಅಕ್ರಮ ಬಡ್ಡಿ ವ್ಯವಹಾರ: 25 ದಂಧೆಕೋರರ ಬಂಧನ

Meter Interest Business:  ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಿಸಿ 25 ಜನರನ್ನು ಬಂಧಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

Written by - Yashaswini V | Last Updated : Aug 22, 2024, 02:22 PM IST
  • ಅಕ್ರಮ ಬಡ್ಡಿ ವ್ಯವಹಾರದ ಬಗ್ಗೆ ಸಾರ್ವಜನಿಕರಿಂದ ದೂರು
  • ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದ 25 ದಂಧೆಕೋರರ ಬಂಧನ
  • ಮೀಟರ್ ಬಡ್ಡಿ ದಂಧೆಯಲ್ಲಿ ಸಿಲುಕಿರುವವರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚನೆ
ಅಕ್ರಮ ಬಡ್ಡಿ ವ್ಯವಹಾರ: 25 ದಂಧೆಕೋರರ ಬಂಧನ title=

Meter Interest Business: ಅಕ್ರಮ ಬಡ್ಡಿ ವ್ಯವಹಾರದಲ್ಲಿ ತೊಡಗಿರುವ ಪುಡಾರಿಗಳನ್ನ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಹೆಡೆಮುರಿಕಟ್ಟಿದ್ದು ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದ 25 ದಂಧೆಕೋರರನ್ನು ಬಂಧನ ಮಾಡಲಾಗಿದೆ.

ಈ ಕುರಿತು ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಶಶಿಕುಮಾರ್, ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಿಸಿ 25 ಜನರನ್ನು ಬಂಧಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ- ಗ್ರಾಮ ಲೆಕ್ಕಾಧಿಕಾರಿಗೆ ನಿಂದಿಸಿದ್ದ ವ್ಯಕ್ತಿಗೆ 3 ವರ್ಷ ಜೈಲು

ಧಾರವಾಡದ ಉಪನಗರ ಠಾಣೆ-2, ಶಹರ ಠಾಣೆ-2, ಪ್ರಕರಣ ವಿದ್ಯಾನಗರ ಠಾಣೆ-2 ಹಾಗೂ ಹುಬ್ಬಳ್ಳಿ ಬೆಂಡಿಗೇರಿ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿವೆ. ಬಂಧಿತರಿಂದ 10 ದ್ವಿಚಕ್ರ ವಾಹನಗಳು, 10 ಮೊಬೈಲ್, ಹರಿತವಾದ ಆಯುಧ, ಮೀಟರ್ ಬಡ್ಡಿ ದಂಧೆಯ ವಿವರ ನಮೋದಿಸಿದ ದಾಖಲೆಗಳು, ಬಾಂಡ್ ಗಳನ್ನು ಜಪ್ತು ಮಾಡಲಾಗಿದೆ.

ಇದನ್ನೂ ಓದಿ- ಫೇಸ್‌ಬುಕ್‌ ಸುಂದರಿ ಹಿಂದೆ ಬಿದ್ದ ಅರ್ಚಕನಿಗೆ ಪಂಗನಾಮ: ಸೈಬರ್ ಕ್ರೈಮ್ ಪೊಲೀಸರಿಗೆ ದೂರು

ಸಾರ್ವಜನಿಕರು ಯಾವುದಾದರೂ ಮೀಟರ್ ಬಡ್ಡಿ ದಂಧೆಯಲ್ಲಿ ಸಿಲುಕಿದ್ದರೆ ಸೂಕ್ತ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಠಾಣೆಯಲ್ಲಿ ಪ್ರಕರಣ ದಾಖಲಿಸಬಹುದು ಎಂದವರು ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News