ಅಕ್ರಮ ಬಡ್ಡಿ ವ್ಯವಹಾರ: 25 ದಂಧೆಕೋರರ ಬಂಧನ
Meter Interest Business: ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಿಸಿ 25 ಜನರನ್ನು ಬಂಧಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Meter Interest Business: ಅಕ್ರಮ ಬಡ್ಡಿ ವ್ಯವಹಾರದಲ್ಲಿ ತೊಡಗಿರುವ ಪುಡಾರಿಗಳನ್ನ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಹೆಡೆಮುರಿಕಟ್ಟಿದ್ದು ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದ 25 ದಂಧೆಕೋರರನ್ನು ಬಂಧನ ಮಾಡಲಾಗಿದೆ.
ಈ ಕುರಿತು ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಶಶಿಕುಮಾರ್, ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಿಸಿ 25 ಜನರನ್ನು ಬಂಧಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ- ಗ್ರಾಮ ಲೆಕ್ಕಾಧಿಕಾರಿಗೆ ನಿಂದಿಸಿದ್ದ ವ್ಯಕ್ತಿಗೆ 3 ವರ್ಷ ಜೈಲು
ಧಾರವಾಡದ ಉಪನಗರ ಠಾಣೆ-2, ಶಹರ ಠಾಣೆ-2, ಪ್ರಕರಣ ವಿದ್ಯಾನಗರ ಠಾಣೆ-2 ಹಾಗೂ ಹುಬ್ಬಳ್ಳಿ ಬೆಂಡಿಗೇರಿ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿವೆ. ಬಂಧಿತರಿಂದ 10 ದ್ವಿಚಕ್ರ ವಾಹನಗಳು, 10 ಮೊಬೈಲ್, ಹರಿತವಾದ ಆಯುಧ, ಮೀಟರ್ ಬಡ್ಡಿ ದಂಧೆಯ ವಿವರ ನಮೋದಿಸಿದ ದಾಖಲೆಗಳು, ಬಾಂಡ್ ಗಳನ್ನು ಜಪ್ತು ಮಾಡಲಾಗಿದೆ.
ಇದನ್ನೂ ಓದಿ- ಫೇಸ್‌ಬುಕ್ ಸುಂದರಿ ಹಿಂದೆ ಬಿದ್ದ ಅರ್ಚಕನಿಗೆ ಪಂಗನಾಮ: ಸೈಬರ್ ಕ್ರೈಮ್ ಪೊಲೀಸರಿಗೆ ದೂರು
ಸಾರ್ವಜನಿಕರು ಯಾವುದಾದರೂ ಮೀಟರ್ ಬಡ್ಡಿ ದಂಧೆಯಲ್ಲಿ ಸಿಲುಕಿದ್ದರೆ ಸೂಕ್ತ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಠಾಣೆಯಲ್ಲಿ ಪ್ರಕರಣ ದಾಖಲಿಸಬಹುದು ಎಂದವರು ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.