Mysuru Crime News:  ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಯೊಂದಿಗೆ ಲವ್ವಿ ಡವ್ವಿ ನಡೆಸುತ್ತಿದ್ದ ಯುವಕನೊಬ್ಬ ಆಕೆಯನ್ನು ಗರ್ಭಿಣಿ ಮಾಡಿ ಎಸ್ಕೇಪ್‌ ಆಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸರಸ್ವತಿಪುರಂ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 


COMMERCIAL BREAK
SCROLL TO CONTINUE READING

34 ವರ್ಷದ ಸಂತ್ರಸ್ತೆ ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಆರೋಪಿ ಯುವಕನನ್ನು ಹರೀಶ್ (25) ಎಂದು ಗುರುತಿಸಲಾಗಿದೆ. ಪಿರಿಯಾಪಟ್ಟಣ ಮೂಲದ ಮಹಿಳೆ ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. 2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದುಕೊಂಡಿದ್ದ ಶಿಕ್ಷಕಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. 


ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಹಿರಿಯರನ್ನ ಪರಿಗಣಿಸುತ್ತಿಲ್ಲ : ಪರಮೇಶ್ವರ್ ಹೇಳಿದ್ದೇನು?


ಆಕೆಗೆ ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ್ ಎಂಬಾತ ಪರಿಚಯವಾಗಿದ್ದ.‌ ನಂತರ ಇಬ್ಬರ ನಡುವೆ ಸಂಬಂಧ ಬೆಳೆದಿತ್ತು ಎನ್ನಲಾಗಿದೆ. ಹರೀಶ್‌ ನನಗೆ ಬಲವಂತವಾಗಿ ಮದ್ಯ ಕುಡಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಅತ್ಯಾಚಾರ ಮಾಡಿದ್ದಾನೆ ಅಂತಾ ಮಹಿಳೆ ಆರೋಪಿಸಿದ್ದಾರೆ. 


ಇದಲ್ಲದೆ ಹರೀಶ್‌ ಬಲವಂತವಾಗಿ ನನಗೆ ಗರ್ಭಪಾತ ಮಾಡಿಸಿದ್ದಾನೆ ಅಂತಾ ಮಹಿಳೆಯು ಸರಸ್ವತಿಪುರಂ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆರೋಪಿ ಹರೀಶ್ ನನ್ನ ಮೇಲೆ ಅತ್ಯಾಚಾರ ಮಾಡಿ ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ, ಪೊಲೀಸರಿಂದ ನನಗೆ ನ್ಯಾಯ ಸಿಗುವ ಭರವಸೆಯಿದೆ. ಆತ ನನ್ನನ್ನು ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ. ನನಗೆ ನ್ಯಾಯ ಕೊಡಿಸಿ ಅಂತಾ ನೊಂದ ಮಹಿಳೆ ಕಣ್ಣೀರು ಹಾಕಿದ್ದಾಳೆ. 


ಇದನ್ನೂ ಓದಿ: ಹಿರಿಯ ರಾಜಕಾರಣಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ‘ಕೆಂಗಲ್ ಹನುಮಂತಯ್ಯ’ ಪ್ರಶಸ್ತಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.