16 ವರ್ಷದ ಪೋರನೊಂದಿಗೆ 28 ವರ್ಷದ ವಿವಾಹಿತ ಮಹಿಳೆ ಎಸ್ಕೇಪ್...! 

ಅಪ್ರಾಪ್ತ ಬಾಲಕನನ್ನು ಕರೆದುಕೊಂಡು ಎಸ್ಕೇಪ್ ಆಗಿರೋ ಮಹಿಳೆಯನ್ನು ಮಲ್ಲಮ್ಮ ಶೇಖಣ್ಣಿ ಎಂದು ಗುರುತಿಸಲಾಗಿದ್ದು, ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವಾಗ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿತ್ತು ಎಂದು ತಿಳಿದು ಬಂದಿದೆ. ಈಗ ಆ ಬಾಲಕನ ತಾಯಿ ತನ್ನ ಮಗನನ್ನು ಪುಸಲಾಯಿಸಿ ಎಸ್ಕೇಪ್ ಆಗಿದ್ದಾಳೆ ಎಂದು ಆರೋಪಿಸಿದ್ದಾಳೆ.

Written by - Manjunath N | Last Updated : Jun 18, 2024, 07:16 PM IST
  • ಅಪ್ರಾಪ್ತ ಬಾಲಕನನ್ನು ಕರೆದುಕೊಂಡು ಎಸ್ಕೇಪ್ ಆಗಿರೋ ಮಹಿಳೆಯನ್ನು ಮಲ್ಲಮ್ಮ ಶೇಖಣ್ಣಿ ಎಂದು ಗುರುತಿಸಲಾಗಿದ್ದು,
  • ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವಾಗ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿತ್ತು ಎಂದು ತಿಳಿದು ಬಂದಿದೆ.
  • ಈಗ ಆ ಬಾಲಕನ ತಾಯಿ ತನ್ನ ಮಗನನ್ನು ಪುಸಲಾಯಿಸಿ ಎಸ್ಕೇಪ್ ಆಗಿದ್ದಾಳೆ ಎಂದು ಆರೋಪಿಸಿದ್ದಾಳೆ.
16 ವರ್ಷದ ಪೋರನೊಂದಿಗೆ 28 ವರ್ಷದ ವಿವಾಹಿತ ಮಹಿಳೆ ಎಸ್ಕೇಪ್...!  title=

ವಿಜಯಪುರ: 16 ವರ್ಷದ ಪೋರನೊಂದಿಗೆ 28 ವರ್ಷದ ವಿವಾಹಿತ ಮಹಿಳೆ ಎಸ್ಕೇಪ್ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಈ ವಿವಾಹಿತ ಮಹಿಳೆಯು 4 ವರ್ಷದ ಮಗುವಿನೊಂದಿಗೆ ಅಪ್ರಾಪ್ತ ಬಾಲಕನೊಂದಿಗೆ ಎಸ್ಕೇಪ್ ಆಗಿದ್ದಾಳೆ ಎಂದು ತಿಳಿದುಬಂದಿದೆ.ಈಗ ಈ ಕುರಿತಾಗಿ ಪೊಲೀಸರಿಗೆ ದೂರು ನೀಡಿರುವ ಅಪ್ರಾಪ್ತ ಬಾಲಕನ ತಾಯಿ ಅಕ್ಕಮಹಾದೇವಿ ವಿವಾಹಿತ ಮಹಿಳೆ ನನ್ನ ಮಗನನ್ನು ಅಪರಹಿಸಿಕೊಂಡು ಹೋಗಿದ್ದಾಳೆ ಎಂದು ಆರೋಪಿಸಿದ್ದಾಳೆ.

ಅಪ್ರಾಪ್ತ ಬಾಲಕನನ್ನು ಕರೆದುಕೊಂಡು ಎಸ್ಕೇಪ್ ಆಗಿರೋ ಮಹಿಳೆಯನ್ನು ಮಲ್ಲಮ್ಮ ಶೇಖಣ್ಣಿ ಎಂದು ಗುರುತಿಸಲಾಗಿದ್ದು, ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವಾಗ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿತ್ತು ಎಂದು ತಿಳಿದು ಬಂದಿದೆ.ಈಗ ಆ ಬಾಲಕನ ತಾಯಿ ತನ್ನ ಮಗನನ್ನು ಪುಸಲಾಯಿಸಿ ಎಸ್ಕೇಪ್ ಆಗಿದ್ದಾಳೆ ಎಂದು ಆರೋಪಿಸಿದ್ದಾಳೆ.

ಈ ಹಿಂದೆ ಆ ಮಹಿಳೆಗಾಗಿಯೇ ಆ ಅಪ್ರಾಪ್ತ ಬಾಲಕನು ವಿಷ ಸೇವಿಸಿದ್ದ ಎನ್ನಲಾಗಿದೆ.ಈ ವಿಚಾರವಾಗಿ ಮೇ 13 ರಂದು ಪೋಲಿಸ್ ಠಾಣೆಯಲ್ಲಿ ಅಪಹರಣದ ಪ್ರಕರಣ ದಾಖಲಾಗಿದ್ದರೂ ಸಹ ಪೊಲೀಸರು ಬಾಲಕನನ್ನು ಪತ್ತೆ ಮಾಡಿಲ್ಲ, ಹೀಗಾಗಿ ಪೋಲೀಸರ ನಡೆಗೆ ಬಾಲಕನ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News