ನೈರೋಬಿ: ಪಶ್ಚಿಮ ಕೀನ್ಯಾದ ಲೊಂಡಿಯಾನಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 48 ಜನರು ಸಾವನ್ನಪ್ಪಿದ್ದಾರೆ ಎಂದು ಸುದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.


COMMERCIAL BREAK
SCROLL TO CONTINUE READING

ಹೆದ್ದಾರಿಯಲ್ಲಿ ಹಡಗಿಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಪಾದಚಾರಿಗಳ ಮೇಲೆ ಹರಿದ ಪರಿಣಾಮ 48 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Owaisi On PM Modi: ' ಪ್ರಧಾನಿ ಮೋದಿ ಅವರ ಚಾಯ್ ಪ್ರಭಾವ ಒಬಾಮಾ ಮೇಲಾಗಿಲ್ಲ'


ರಾಜಧಾನಿ ನೈರೋಬಿಯ ವಾಯುವ್ಯಕ್ಕೆ ಸುಮಾರು 200KM ದೂರದಲ್ಲಿರುವ ಲೊಂಡಿಯಾನಿಯ ರಿಫ್ಟ್ ವ್ಯಾಲಿ ಪಟ್ಟಣದ ಸಮೀಪ ಈ ರಸ್ತೆ ದುರಂತ ಸಂಭವಿಸಿದೆ. ಸ್ಥಳದಲ್ಲೇ 48 ಮಂದಿ ಮೃತಪಟ್ಟಿದ್ದು, ಸಾವನಿ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.


ಘಟನೆಯಲ್ಲಿ ಎಷ್ಟು ಮಂದಿಗೆ ಗಂಭೀರ ಗಾಯಗಳಾಗಿವೆ ಎಂಬುದು ನಮಗೆ ಸ್ಪಷ್ಟವಾಗಿ ತಿಳಿದಿಲ್ಲವೆಂದು ರಿಫ್ಟ್ ವ್ಯಾಲಿ ಪೊಲೀಸ್ ಕಮಾಂಡರ್ ಟಾಮ್ ಒಡೆರಾ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಟ್ರಕ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು, ಪಾದಚಾರಿಗಳು ಮತ್ತು ಮಾರುಕಟ್ಟೆ ವ್ಯಾಪಾರಿಗಳಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.


ಇದನ್ನೂ ಓದಿ: Attack On Sikh: ಸಿಖ್ಖರ ಮೇಲಿನ ದಾಳಿ, ಪಾಕ್ ಉನ್ನತ ಆಯೋಗದ ರಾಜತಾಂತ್ರಿಕರಿಗೆ ಬುಲಾವ್ ಕಳುಹಿಸಿದ ಭಾರತ


ಕೀನ್ಯಾದಲ್ಲಿ ಬಸ್ ನದಿಯ ಕಣಿವೆಗೆ ಉರುಳಿ 34 ಮಂದಿ ಸಾವನ್ನಪ್ಪಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.