ಭೀಕರ ಅಪಘಾತಕ್ಕೆ ಐವರು ವೈದ್ಯರ ದುರ್ಮರಣ; ಚಾಲಕ ನಿದ್ರೆಗೆ ಜಾರಿದ್ದರಿಂದ ಸಂಭವಿಸಿದ ದುರ್ಘಟನೆ..!
Road Accident: ಇಂದು ಮುಂಜಾನೆ 3.30ರ ವೇಳೆಗೆ ವೈದ್ಯರು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ನಿಯಂತ್ರಣ ತಪ್ಪಿ ಡಿವೈಡರ್ ಬ್ರೇಕ್ ಮಾಡಿ ಎದುರುಗಡೆಯಿಂದ ಬರುತ್ತಿದ್ದ ಟ್ರಕ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ವರದಿಗಳ ಪ್ರಕಾರ SUV ಚಾಲಕ ನಿದ್ರೆಗೆ ಜಾರಿದ್ದರಿಂದಲೇ ಈ ಭೀಕರ ಅಪಘಾತಕ್ಕೆ ಕಾರಣವೆಂದು ಹೇಳಲಾಗಿದೆ.
Horrible Road Accident: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ ವೇನಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ವೈದ್ಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ಸಾವನ್ನಪ್ಪಿದವರನ್ನು ಡಾ.ಅನಿರುದ್ಧ್ ವರ್ಮಾ, ಡಾ.ಸಂತೋಷ್ ಕುಮಾರ್ ಮೌರ್ಯ, ಡಾ.ಜೈವೀರ್ ಸಿಂಗ್, ಡಾ.ಅರುಣ್ ಕುಮಾರ್ ಮತ್ತು ಡಾ.ನಾರ್ದೇವ್ ಎಂದು ಗುರುತಿಸಲಾಗಿದೆ.
ಸೈಫೈ(Saifai) ಗ್ರಾಮಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ತರಬೇತಿ ಪಡೆದುಕೊಂಡಿದ್ದ ಈ ವೈದ್ಯರು, ಲಕ್ನೋದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಶಬರಿಮಲೆ ಪವಿತ್ರ 18 ಮೆಟ್ಟಿಲುಗಳ ಮೇಲೆ ಪೊಲೀಸ್ ಫೋಟೋ ಶೂಟ್..! ತಪ್ಪು ತಿದ್ದುವವರೇ ಹೀಗೆ ಮಾಡಿದ್ರೆ ಹೇಗೆ..?
ಮುಂಜಾನೆ 3.30ರ ವೇಳೆಗೆ ವೈದ್ಯರು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ನಿಯಂತ್ರಣ ತಪ್ಪಿ ಡಿವೈಡರ್ ಬ್ರೇಕ್ ಮಾಡಿ ಎದುರುಗಡೆಯಿಂದ ಬರುತ್ತಿದ್ದ ಟ್ರಕ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ವರದಿಗಳ ಪ್ರಕಾರ SUV ಚಾಲಕ ನಿದ್ರೆಗೆ ಜಾರಿದ್ದರಿಂದಲೇ ಈ ಭೀಕರ ಅಪಘಾತಕ್ಕೆ ಕಾರಣವೆಂದು ಹೇಳಲಾಗಿದೆ.
ಘಟನೆ ಬಗ್ಗೆ ಮಾತನಾಡಿರುವ ತಿರ್ವಾ ವಲಯದ ಅಧಿಕಾರಿ ಪ್ರಿಯಾಂಕಾ ಬಾಜಪೈ, ʼಇಂದು ಮುಂಜಾನೆ 3.30ರ ಸುಮಾರಿಗೆ ಲಕ್ನೋದಿಂದ ಆಗ್ರಾ ಕಡೆಗೆ ಹೊರಟಿದ್ದ ಸ್ಕಾರ್ಪಿಯೋ ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ ಮುರಿದು ಸಮಾನಾಂತರ ಮಾರ್ಗಕ್ಕೆ ನುಗ್ಗಿ ಎದುರಿನಿಂದ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ವೈದ್ಯರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಸೈಫೈ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಅಂತಾ ತಿಳಿಸಿದ್ದಾರೆ.
ಇದನ್ನೂ ಓದಿ: ರೈಲಿನ ಕೊನೆಯ ಬೋಗಿಯ ಹಿಂಭಾಗದಲ್ಲಿ ಬರೆದಿರುವ ಈ ʼXʼ ಚಿಹ್ನೆಯ ಅರ್ಥವೇನು...? ಹೀಗೆ ಬರೆಯೋದು ಯಾಕೆ ಎಂದು ನಿಮಗೆ ತಿಳಿದಿದೆಯೇ?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.