ಗೋವಾದಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಹತ್ಯೆ..! 20 ಜನರ ಬಂಧನ

Goa Crime news : ಐದು ವರ್ಷದ ಬಾಲಕಿ ಕಟ್ಟಡ ಕಾರ್ಮಿಕನ ಮಗಳು ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಮುಂಜಾನೆ 3 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ಲಭಿಸಿದೆ. ಐದು ವರ್ಷದ ಬಾಲಕಿಯನ್ನು ಅನುಮಾನಾಸ್ಪದ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು.

Written by - Krishna N K | Last Updated : Apr 13, 2024, 06:28 PM IST
    • 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ
    • ಗೋವಾದ ವಾಸ್ಕೋದಲ್ಲಿ ನಡೆದ ಘಟನೆ
    • 20 ಜನರನ್ನು ಬಂಧಿಸಿ ವಿಚಾರಣೆ
ಗೋವಾದಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಹತ್ಯೆ..! 20 ಜನರ ಬಂಧನ title=

ಪಣಜಿ : ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ 20 ಜನರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಶವ ಪತ್ತೆಯಾದ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಹೌದು.. ಗುರುವಾರ ರಾತ್ರಿ ವಾಸ್ಕೋಡ ಗಾಮಾದಲ್ಲಿ ನಿರ್ಮಾಣ ಹಂತದ ಕಟ್ಟಡದ ಬಳಿ ಐದು ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂಬುದು ದೃಢಪಟ್ಟಿದೆ. ಸಧ್ಯ ಬಂಧಿರ ವಿಚಾರಣೆ ನಡೆಯುತ್ತಿದೆ ಎಂದು ಎಸ್ಪಿ ಸುನೀತಾ ಸಾವಂತ್ ಅವರು ತಿಳಿಸಿದ್ದಾರೆ. 

ಇದನ್ನೂ ಓದಿ: ವಿಶ್ವದ ಅತಿ ದೊಡ್ಡ ಮತ್ತು ಆಳವಾದ ಸಾಗರ ಯಾವುದು..?

ಕೊಲೆಯಾದ ಐದು ವರ್ಷದ ಬಾಲಕಿ ಕಟ್ಟಡ ಕಾರ್ಮಿಕನ ಮಗಳು. ಶುಕ್ರವಾರ ಮುಂಜಾನೆ 3 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ಲಭಿಸಿದೆ. ಐದು ವರ್ಷದ ಬಾಲಕಿಯನ್ನು ಅನುಮಾನಾಸ್ಪದ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ವೈಧ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮಾಹಿತಿ ಮೆರೆಗೆ ಆಸ್ಪತ್ರೆಗೆ ಬಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಶವಪರೀಕ್ಷೆಯಿಂದ ಬಯಲಿಗೆ ಬಂದಿದೆ. ಪ್ರಕರಣದ ಕುರಿತು ತೀವ್ರ ತನಿಖೆ ನಡೆಯುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News