ಹುಬ್ಬಳ್ಳಿ: ಹೆಸ್ಕಾಂನ ಹುಬ್ಬಳ್ಳಿಯ ಉಗ್ರಾಣದಲ್ಲಿ ನಡೆದ 51 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸ್ಕಾಂನ ಲೆಕ್ಕಾಧಿಕಾರಿ ಸೇರಿದಂತೆ ಐವರನ್ನು ಅಮಾನತು ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಲೆಕ್ಕಾಧಿಕಾರಿ ಬೆಂಜಮಿನ್ ಮಸ್ಕನರ್ಸ್, ಸಹಾಯಕ ಲೆಕ್ಕಾಧಿಕಾರಿ ಯು.ಎಸ್.ಉಳ್ಳಾಗಡ್ಡಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ವಿಶ್ವನಾಥ ಶಿರಹಟ್ಟಿಮಠ, ವಸಂತಕುಮಾರ ರಾಠೋಡ, ಅಂಜಿನಪ್ಪ ಬಿ, ಅಮಾನತುಗೊಂಡವರು.


ಹೆಸ್ಕಾಂನಲ್ಲಿ 51 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ,  ಅವ್ಯವಹಾರದ ಕುರಿತು ತನಿಖೆ ನೆಡೆಸಲು ಐವರು ಅಧಿಕಾರಿಗಳ ತಂಡ ರಚಿಸಲಾಗಿತ್ತು. ಕಳೆದ ಮೂರು ವರ್ಷಗಳಿಂದ ತನಿಖೆ ನಡೆಸಿ ವಂಚನೆಯ ಜಾಲ ಪತ್ತೆ ಹಚ್ಚಿದ್ದ ತಂಡ  ಮಧ್ಯಂತರ ವರದಿ ಸಲ್ಲಿಸಿದ್ದು, ಅದರನ್ವಯ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಐವರನ್ನು ಅಮಾನತುಗೊಳಿಸಿ ಅದೇಶಿಸಿದ್ದಾರೆ


ಇದನ್ನೂ ಓದಿ- ಹುಡುಗಿಯರ ಹಾಸ್ಟೆಲ್ ಬಾತ್‌ರೂಮ್‌ನಲ್ಲಿ ಕ್ಯಾಮರಾ ಇಟ್ಟ ಕಾಮುಕ, ಮುಂದೆ..!


ಏನಿದು ಪ್ರಕರಣ? 
ಬಸವರಾಜ್ ಮರಳಿಮಠ ಅವರು 2007 ರಿಂದ 2023 ರ ಜುಲೈ 31 ರವರೆಗೆ ಹೆಸ್ಕಾಂ ನ ಕಾರ್ಯ ಪಾಲನೆ ವಿಭಾಗ ಮತ್ತು 2014 ರಿಂದ 2023 ಜುಲೈ 31ರವರೆಗೆ ಗ್ರಾಮೀಣ ವಿಭಾಗದ ಹುಬ್ಬಳ್ಳಿಯ ಉಗ್ರಾಣದಲ್ಲಿ ಉಗ್ರಾಣ ಪಾಲಕರಾಗಿ ನಿವೃತ್ತರಾಗಿದ್ದಾರೆ. ಈ ಅವಧಿಯಲ್ಲಿ ಅವ್ಯಹಾರ ನಡೆದಿರುವ ಬಗ್ಗೆ ಹೆಸ್ಕಾಂಗೆ ದೂರು ಸಲ್ಲಿಕೆಯಾಗಿತ್ತು.


ಬಸವರಾಜ ಮಳಿಮಠ ಅವರು ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ 51,69,49,054 ಮೌಲ್ಯದ  ಸಾಮಗ್ರಿಗಳನ್ನು ದುರುಪಯೋಗ ಪಡಿಸಿಕೊಂಡು, ಕಂಪನಿಗೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ- ವಿಜಯೇಂದ್ರ ಆಪ್ತ, ಬಿಜೆಪಿ ಮುಖಂಡ ತಮ್ಮೇಶ್ ಗೌಡ ವಿರುದ್ಧ ಕಳ್ಳತನ ಕೇಸ್


ಅಮಾನತ ಗೊಂಡಿರುವ ಆರೋಪಿಗಳು ತಮ್ಮ ಅವಧಿಯಲ್ಲಿ ಹುಬ್ಬಳ್ಳಿ ನಗರ ವಿಭಾಗದ ಉಗ್ರಾಣದಿಂದ ಗ್ರಾಮೀಣ ವಿಭಾಗದ ಉಗ್ರಾಣಕ್ಕೆ ಭೌತಿಕವಾಗಿ ಸಾಮಗ್ರಿಗಳನ್ನು ವರ್ಗಾಯಿಸದೆ ಸಾಮಗ್ರಿಗಳನ್ನು ಮತ್ತು ಅದರ ಮೊತ್ತದಷ್ಟು ಸರಕು ಪಟ್ಟಿ, ಸುಳ್ಳು ದಾಖಲೆ ಸೃಷ್ಟಿಸಿ ಅದರ ಮೊತ್ತವನ್ನು ದುರುಪಯೋಪಡಿಸಿಕೊಂಡು, ಅವ್ಯವಹಾರದಲ್ಲಿ ಭಾಗಿಯಾಗಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ತಿಳಿಸಲಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.