ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದ ಟ್ರಕ್: 6 ಮಂದಿ ಸಾವು, ಅನೇಕರ ಸ್ಥಿತಿ ಗಂಭೀರ!

Ratlam Road Accident: ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯ ಬಸ್ ನಿಲ್ದಾಣದಲ್ಲಿ ಜನರ ಮೇಲೆ ಅತಿ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದ್ದು, 6 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ.

Written by - Puttaraj K Alur | Last Updated : Dec 5, 2022, 10:40 AM IST
  • ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ
  • ರಸ್ತೆಬದಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ಹರಿದ ಟ್ರಕ್‍
  • ಸ್ಥಳದಲ್ಲಿಯೇ 6 ಮಂದಿ ಸಾವು, 12ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದ ಟ್ರಕ್: 6 ಮಂದಿ ಸಾವು, ಅನೇಕರ ಸ್ಥಿತಿ ಗಂಭೀರ! title=
ರತ್ಲಾಮ್ ಜಿಲ್ಲೆಯಲ್ಲಿ ಭೀಕರ ಅಪಘಾತ

ಮಧ್ಯಪ್ರದೇಶ: ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಭಾನುವಾರ ಸಂಜೆ ರಸ್ತೆಬದಿಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ವೇಗವಾಗಿ ಬಂದ ಟ್ರಕ್‍ ಹರಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಗಾಯಗೊಂಡವರ ಪೈಕಿ 8 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ತತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ‍್ಯತೆ ಇದೆ ಎಂದು ತಿಳಿದುಬಂದಿದೆ. ರತ್ಲಾಮ್ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿಮೀ ದೂರದಲ್ಲಿರುವ ರತ್ಲಾಮ್-ಲೆಬಾದ್ ರಸ್ತೆಯಲ್ಲಿರುವ ಸತ್ರುಂಡಾ ಗ್ರಾಮದ ಬಳಿಯ ಟ್ರಾಫಿಕ್ ಸಿಗ್ನಲ್ ಬಳಿ ಈ ಘಟನೆ ಸಂಭವಿಸಿದೆ.

ಇದನ್ನೂ ಓದಿ: Viral News: ಇಲ್ಲಿ ಗಂಡು ಮೇಕೆಗಳೂ ಕೂಡ ಹೆಣ್ಣು ಮೇಕೆಗಳಂತೆ ಹಾಲು ಕೊಡುತ್ತವಂತೆ, ರೇಟ್ ಕೇಳಿ ದಂಗಾಗುವಿರಿ

ಟ್ರಕ್ ಹರಿದ ಪರಿಣಾಮ 6 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇವರಲ್ಲಿ 8 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಿಲ್ಲಾಧಿಕಾರಿ ನರೇಂದ್ರ ಕುಮಾರ್ ಸೂರ್ಯವಂಶಿ ತಿಳಿಸಿದ್ದಾರೆ.

ಘಟನೆ ಬಳಿಕ ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಅಭಿಷೇಕ್ ತಿವಾರಿ ತಿಳಿಸಿದ್ದಾರೆ. ಅತಿ ವೇಗವಾಗಿ ಬಂದ ಟ್ರಕ್ ಕನಿಷ್ಠ 20 ಜನರ ಮೇಲೆ ಹರಿದಿದೆ ಎಂದು ಗಾಯಾಳು ವಿಶಾಲ್ ಎಂಬುವರು ತಿಳಿಸಿದ್ದಾರೆ. ನಾವು ಬಸ್‍ಗಾಗಿ ಕಾಯುತ್ತಿದ್ದೇವು. ಈ ವೇಳೆ ನೋಡ ನೋಡುತ್ತಿದ್ದಂತೆಯೇ ನಮ್ಮ ಮೇಲೆಯೇ ಟ್ರಕ್ ವೇಗವಾಗಿ ಬಂದು ಡಿಕ್ಕಿ ಹೊಡೆಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Mumbai Gang rape: ಮನೆಯೊಳಗೆ ನುಗ್ಗಿ ಮೂವರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರತ್ಯಕ್ಷದರ್ಶಿಗಳ ಪ್ರಕಾರ, ಟ್ರಕ್ ನುಗ್ಗುತ್ತಿದ್ದಂತೆ ಜನರು ದಿಗ್ಭ್ರಮೆಗೊಂಡರು. ಟ್ರಕ್ ಹರಿದ ಪರಿಣಾಮ ಒಂದೆರಡು ದೇಹಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದವು ಎಂದು ಹೇಳಿದ್ದಾರೆ. ಘಟನೆ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News