UP horror: ಚಿಪ್ಸ್ ಆಸೆ ತೋರಿಸಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ..!
Gang rape Case: 8 ವರ್ಷದ ಬಾಲಕಿಗೆ ಚಿಪ್ಸ್ ಆಸೆ ತೋರಿಸಿದ ಆರೋಪಿಗಳು ಅತ್ಯಾಚಾರ ನಡೆಸಿ ಬಳಿಕ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಈ ಭಯಾನಕ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ನಡೆದಿದೆ.
ನವದೆಹಲಿ: ಚಿಪ್ಸ್ ಆಸೆ ತೋರಿಸಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಅಮಾನುಷವಾಗಿ ಹತ್ಯೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಮೃತದೇಹ ಗೋಣಿ ಚೀಲದಲ್ಲಿ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಅಪ್ರಾಪ್ತ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಬಳಿಕ ಆಕೆಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗದೆ’ ಎಂದು ಹೇಳಿದ್ದಾರೆ.
ಆರೋಪಿಗಳು ಬಾಲಕಿಯ ಶವವನ್ನು ಗೋಣಿ ಚೀಲದಲ್ಲಿ ತುಂಬಿ ಮನೆಯೊಂದರಲ್ಲಿ ಬಚ್ಚಿಟ್ಟಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂತ್ರಸ್ತೆಯ ಶವಪರೀಕ್ಷೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮತ್ತು ನಂತರ ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: “ಬೇಬಿ ನಿನಗಾಗಿ 9 ದಿನ ನವರಾತ್ರಿ ಉಪವಾಸ ಮಾಡುತ್ತೇನೆ”: ಜೈಲಿನಿಂದಲೇ ಜಾಕ್ವೆಲಿನ್’ಗೆ ಬಂತು ಪ್ರಿಯಕರನ ಪ್ರೇಮಪತ್ರ
‘8 ವರ್ಷದ ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಿದ ಮೂವರು ವೈದ್ಯರು ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಮತ್ತು ನಂತರ ಆಕೆಯ ಕತ್ತು ಹಿಸುಕಿ ಸಾಯಿಸಲಾಗಿದೆ ಎಂದು ದೃಢಪಡಿಸಿದ್ದಾರೆ’ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕಲಾನಿಧಿ ನೈತಾನಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಇಬ್ಬರು ಆರೋಪಿಗಳಾದ ಸುಹಲೇಹೀನ್ (20) ಮತ್ತು ಅವರ ಸಹೋದರ ರಿಜ್ವಾನ್ (18) ಅವರನ್ನು ಬುಧವಾರ ಬಂಧಿಸಿ ಗುರುವಾರ ಜೈಲಿಗೆ ಕಳುಹಿಸಲಾಗಿದೆ. ಅಪ್ರಾಪ್ತ ವಯಸ್ಕನಾಗಿರುವ ಅವರ 3ನೇ ಸಹೋದರನನ್ನು ಸಹ ಬಂಧಿಸಿ, ವಿಚಾರಣೆಯ ನಂತರ ಬಿಡುಗಡೆ ಮಾಡಲಾಗಿದೆ. ಪ್ರಮುಖ ಆರೋಪಿ ಸುಹಲೇಹೀನ್ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಅಂತಾ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಸಿಎಂ ಶಿವರಾಜ್ ಸಿಂಗ್ ವಿರುದ್ಧ ರಾಮಾಯಣದ ನಟನನ್ನು ಕಣಕ್ಕೆ ಇಳಿಸಿದ ಕಾಂಗ್ರೆಸ್
ಪೊಲೀಸರ ವಿಚಾರಣೆ ವೇಳೆ, ‘ಸುಹಲೇಹೀನ್ ಬಾಲಕಿಗೆ ಪಾನ್ ಮಸಾಲಾ ಮತ್ತು ಚಿಪ್ಸ್ ಪ್ಯಾಕೆಟ್ ಖರೀದಿಸಲು 20 ರೂ. ನೀಡಿದ್ದಾಗಿ ತಿಳಿಸಿದ್ದಾನೆ. ಆರೋಪಿಗಳಿಂದ ಹಣ ಪಡೆದ ಬಾಲಕಿ ಅಂಗಡಿಗೆ ಹೋಗಿ ಪಾನ್ ಮಸಾಲಾ ಮತ್ತು ಚಿಪ್ಸ್ ಪ್ಯಾಕೆಟ್ ಖರೀದಿ ವಾಪಸ್ ಮನೆಗೆ ಹಿಂತಿರುಗಿದ್ದಳು. ಈ ವೇಳೆ ಆಕೆಯನ್ನು ಮನೆಯೊಳಗೆ ಕರೆದೊಯ್ದ ಅತ್ಯಾಚಾರವೆಸಗಿದ ಆರೋಪಿಗಳು ಬಳಿಕ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.
ನಂತರ ಪ್ರಮುಖ ಆರೋಪಿ ಸುಹಲೇಹೀನ್, ತನ್ನ ಸಹೋದರ ರಿಜ್ವಾನ್ ಸಹಾಯದಿಂದ ಶವವನ್ನು ಗೋಣಿ ಚೀಲದಲ್ಲಿ ತುಂಬಿ ತಮ್ಮ ಮನೆಯಲ್ಲಿ ಬಚ್ಚಿಟ್ಟಿದ್ದ. ಬುಧವಾರ ಇಬ್ಬರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಇದೀಗ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಜೊತೆಗೆ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.