ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ 9 ಮಂದಿಯ ದುರ್ಮರಣ

ನಿದ್ದೆಯ ಮಂಪರಿನಲ್ಲಿದ್ದ ಚಾಲಕನ ನಿರ್ಲಕ್ಷ್ಯತನವೇ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

Written by - Zee Kannada News Desk | Last Updated : Jun 26, 2022, 10:25 AM IST
  • ಕುಂದಾನಗರಿ ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ
  • 7 ಮಂದಿ ಸ್ಥಳದಲ್ಲೇ ದುರ್ಮರಣ, ಹಲವರಿಗೆ ಗಂಭೀರ ಗಾಯ
  • ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ದುರ್ಘಟನೆ
ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ 9 ಮಂದಿಯ ದುರ್ಮರಣ title=
ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ

ಬೆಳಗಾವಿ: ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 9 ಮಂದಿ ದುರ್ಮರಣ ಹೊಂದಿದ್ದಾರೆ.  ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ಈ ದುರ್ಘಟನೆ ನಡೆದಿದೆ.  

ಬೆಳಗಾವಿ ತಾಲೂಕಿನ ಕಲ್ಯಾಳ ಬ್ರಿಡ್ಜ್ ಬಳಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿಯೇ 9 ಜನರ ಪ್ರಾಣಪಕ್ಷಿ ಹಾರಿಹೋಗಿದೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮೃತರನ್ನು ಅಡಿವೆಪ್ಪ ಚಿಲಬಾಂವಿ, ಬಸವರಾಜ್ ದಳವಿ, ಬಸವರಾಜ್ ಹನಮನ್ನವರ, ಆಕಾಶ್ ಗಸ್ತಿ, ಫಕಿರಪ್ಪ ಹರಿಜನ ಮತ್ತು ಮಲ್ಲಪ್ಪ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: 50 ರೂ.ಗಾಗಿ ಬಿತ್ತು ಹೆಣ.. ಗೆಳಯನನ್ನೇ ಕೊಂದ ಪಾಪಿ ಪರಾರಿ

ಭಾನುವಾರ ನಸುಕಿನ ಜಾವ ಭೀಕರ ರಸ್ತೆ ಅಪಘಾತ ನಡೆದಿದೆ. ನಿದ್ದೆಯ ಮಂಪರಿನಲ್ಲಿದ್ದ ಚಾಲಕನ ನಿರ್ಲಕ್ಷ್ಯತನವೇ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಸ್ಥಳದಲ್ಲಿಯೇ ಏಳು ಜನರು ದುರ್ಮರಣ ಹೊಂದಿದರೆ, ಆಸ್ಪತ್ರೆಯಲ್ಲಿ ಇಬ್ಬರು ಪ್ರಾಣಬಿಟ್ಟಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಬೆಳಗಾವಿ ಪೋಲಿಸ್ ಕಮೀಶನರ್ ಡಾ. ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮಾರೀಹಾಳ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಲೈಟರ್ ವಿಚಾರಕ್ಕೆ ಲಾಂಗ್ ಬೀಸಿದ್ದವನಿಗ ಪೊಲೀಸರ ಅತಿಥಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News