ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ 30 ವರ್ಷದ ಯುವಕನ ಹತ್ಯೆ 

ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೊಟ್ಟಿಗೆರೆ ಪಾಳ್ಯದಲ್ಲಿ ಸಿಕ್ಕಿದೆ. ನೈಸ್ ರಸ್ತೆಯ ಫ್ಲ್ಯಓರ್ ಕೆಳಭಾಗದಲ್ಲಿ ಸರಿಸುಮಾರು 30 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ತಡರಾತ್ರಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

Written by - Bhavya Sunil Bangera | Edited by - Manjunath N | Last Updated : Jun 29, 2023, 05:31 PM IST
  • ಪೊಲೀಸ್ ಸಹಾಯವಾಣಿಗೆ ಬಂದ ಕರೆಯ ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ತಲಘಟ್ಟಪುರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ
  • ತಡರಾತ್ರಿ ಹತ್ಯೆ ನಡೆದಿರಬಹುದು ಎಂದು ಅಂದಾಜಿಸಲಾಗಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ
  • ವರದಿ ಬಂದ ಬಳಿಕ ಹತ್ಯೆಯ ಸಮಯ ತಿಳಿಯಲಿದೆ. ಮೃತನ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ
ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ 30 ವರ್ಷದ ಯುವಕನ ಹತ್ಯೆ  title=

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೊಟ್ಟಿಗೆರೆ ಪಾಳ್ಯದಲ್ಲಿ ಸಿಕ್ಕಿದೆ. ನೈಸ್ ರಸ್ತೆಯ ಫ್ಲ್ಯಓರ್ ಕೆಳಭಾಗದಲ್ಲಿ ಸರಿಸುಮಾರು 30 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ತಡರಾತ್ರಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಮೃತನ ಕುರಿತು ಯಾವುದೇ ವಿವರ ಲಭ್ಯವಾಗಿಲ್ಲ. ಬೆಳಗ್ಗೆ 7 ಗಂಟೆ ಸುಮಾರಿಗೆ ಪೊಲೀಸ್ ಸಹಾಯವಾಣಿಗೆ ಬಂದ ಕರೆಯ ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ತಲಘಟ್ಟಪುರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ತಡರಾತ್ರಿ ಹತ್ಯೆ ನಡೆದಿರಬಹುದು ಎಂದು ಅಂದಾಜಿಸಲಾಗಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕ ಹತ್ಯೆಯ ಸಮಯ ತಿಳಿಯಲಿದೆ. ಮೃತನ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ.

ಕೊಲೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಅಧಿಕಾರಿ ಕೃಷ್ಣಕಾಂತ್, ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಕೊಲೆ ಪ್ರಕರಣದ ಬಗ್ಗೆ ಮಾಹಿತಿ ಬಂದಿತ್ತು. 112 ಕರೆಯ ಮೂಲಕ ಈ ಕೊಲೆ ಸುದ್ದಿ ಬೆಳಗ್ಗೆ 7 ಗಂಟೆಯ ಸುಮಾರಿಗೆ ತಿಳಿದಿತ್ತು. ಗೊಟ್ಟಿಗೆರೆ ಪಾಳ್ಯದ ನೈಸ್ ರಸ್ತೆಯ ಫೈಓವರ್ ಕೆಳಭಾಗದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಯುವಕ ಮೃತದೇಹ ಕಂಡು ಬಂದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು ಎಂದು ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

ಮೃತ ದೇಹದ ಮೇಲೆ ಗಾಯಗಳ ಗುರುತುಗಳಿವೆ. ತಲೆ, ಮುಖಕ್ಕೆ ಸೇರಿದಂತೆ ಇನ್ನಿತರ ಭಾಗಗಳಿಗೆ ಯಾರೋ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆ ಮೂಲಕ ಕಂಡು ಬಂದಿದೆ. ಈ ಕೊಲೆ ಬಗ್ಗೆ ತನಿಖೆ ಕೈಗೊಳ್ಳಲಾಗುವುದು. ಸದ್ಯ ಕೊಲೆಯಾದ ವ್ಯಕ್ತಿಯ ಪತ್ತೆ ಕಾರ್ಯಾ ನಡೆಯಲಿದ್ದು, ಕುಟುಂಬಸ್ಥರಿಗೆ ಮಾಹಿತಿ ರವಾನಿಸಲಾಗುವುದು. ಆರೋಪಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವ್ಯಕ್ತಿಯ ಬಳಿ ಯಾವುದೇ ಗುರುತಿನ ಚೀಟಿಗಳು ಇಲ್ಲ. ರಾಮನಗರ ಮತ್ತು ಬೆಂಗಳೂರು ಗಡಿ ಭಾಗದಲ್ಲಿ ಈ ಕೊಲೆ ಆಗಿದೆ. ಕೊಲೆ ಬೇರೆಡೆ ಮಾಡಿ ಇಲ್ಲಿ ತಂದು ಹಾಕಿಲ್ಲ. ಕೊಲೆ ಆಗಿರುವುದು ಇಲ್ಲೇ. ಆದರೆ ಆ ವ್ಯಕ್ತಿ ರಾಮನಗರದವರೋ ಅಥವಾ ಬೆಂಗಳೂರಿನವರೋ ಎಂಬುದು ತಿಳಿದು ಬರಬೇಕಾಗಿದೆ. ವ್ಯಕ್ತಿಯನ್ನು ಮಚ್ಚಿನಿಂದ ಹಲ್ಲೆ ಮಾಡಿರಬಹುದೆಂಬುದು ನಮ್ಮ ಅನುಮಾನವಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕೆಲವೊಂದು ಮಾಹಿತಿ ತಿಳಿದು ಬರಲಿದೆ ಎಂದು ಕೃಷ್ಣಕಾಂತ್ ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News