Rajasthan: ಟ್ರಕ್​ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, 7 ಮಂದಿ ಸಜೀವ ದಹನ!

ಮೃತರನ್ನು ನೀಲಂ ಗೋಯಲ್ (55), ಅವರ ಪುತ್ರ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಪುತ್ರ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ ಬಿಂದಾಲ್ (32) ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.

Written by - Puttaraj K Alur | Last Updated : Apr 15, 2024, 06:44 PM IST
  • ಟ್ರಕ್​ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದಿದೆ
  • ಕಾರಿನಲ್ಲಿದ್ದ ಒಂದೇ ಕುಟುಂಬದ 7 ಮಂದಿ ಸಜೀವ ದಹನವಾಗಿದ್ದಾರೆ
  • ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿಯೇ ಈ ದುರ್ಘಟನೆ ಸಂಭವಿಸಿದೆ
Rajasthan: ಟ್ರಕ್​ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, 7 ಮಂದಿ ಸಜೀವ ದಹನ! title=
7 ಮಂದಿ ಸಜೀವ ದಹನ!

Rajasthan horrible strategy: ಟ್ರಕ್​ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡು 7 ಮಂದಿ ಸಜೀವ ದಹನವಾಗಿರುವ ಘಟನೆ ನಡೆದಿದೆ. ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿಯೇ ಈ ದುರ್ಘಟನೆ ಸಂಭವಿಸಿದೆ. ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಉತ್ತರ ಪ್ರದೇಶದ ಮೀರತ್ ನಿವಾಸಿಗಳು ಎಂದು ತಿಳಿದುಬಂದಿದೆ. ಇವರು ರಾಜಸ್ಥಾನದ ಸಲಾಸರ್‌ನಲ್ಲಿರುವ ಸಲಾಸರ್ ಬಾಲಾಜಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದರು. ಚುರು ಕಡೆಗೆ ಹೋಗುತ್ತಿದ್ದ ಕಾರು ಚಾಲಕನು ಟ್ರಕ್ ಹಿಂದಿಕ್ಕಲು ಯತ್ನಿಸಿದ್ದಾನೆ. ಈ ವೇಳೆ ಎದುರಿನಿಂದ ಇನ್ನೊಂದು ವಾಹನ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: Monkhood: ಸನ್ಯಾಸಿ ಜೀವನ ನಡೆಸಲು 200 ಕೋಟಿ ರೂ ಮೌಲ್ಯದ ಸಂಪತ್ತು ದಾನ ಮಾಡಿದ ದಂಪತಿಗಳು..!

ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ LPG ಕಿಟ್‌ಗೆ ಬೆಂಕಿ ಹೊತ್ತಿಕೊಂಡಿದೆ. ಟ್ರಕ್‌ನಲ್ಲಿ ತುಂಬಿದ್ದ ಹತ್ತಿಯಿಂದ ಬೆಂಕಿಯ ಕೆನ್ನಾಲಿಗೆ ಆವರಿಸಿತ್ತು. ಸ್ಥಳೀಯರು ಹರಸಾಹಸ ಮಾಡಿದರೂ ಬೆಂಕಿಯ ಜ್ವಾಲೆಯಿಂದ ಕಾರು ಪ್ರಯಾಣಿಕರನ್ನು ಬದುಕಲು ಸಾಧ್ಯವಾಗಲಿಲ್ಲ. ಕಾರಿನ ಬಾಗಿಲು ತೆರೆಯಲು ಸಾಧ್ಯವಾಗದೆ ಎಲ್ಲರೂ ಸಜೀವ ದಹನವಾಗಿದ್ದಾರೆ.

ಇನ್ನು ಮೃತರನ್ನು ನೀಲಂ ಗೋಯಲ್ (55), ಅವರ ಪುತ್ರ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಪುತ್ರ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ ಬಿಂದಾಲ್ (32) ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Ram Mandir : ರಾಮನವಮಿ ಹಿನ್ನೆಲೆ ರಾಮ ಮಂದಿರಕ್ಕೆ1,11,111 ಕೆಜಿ ಲಡ್ಡು

ಪ್ರಯಾಣಿಕರು ಸಹಾಯಕ್ಕಾಗಿ ಕಿರುಚಾಡುತ್ತಿದ್ದರು. ಆದರೆ ಬೆಂಕಿಯಿಂದ ಅವರಿಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಕಾರಿನಲ್ಲಿದ್ದವರು ಸುಟ್ಟು ಕರಕಲಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News