ಬೆಂಗಳೂರು: ಈಗಿನ ಕಾಲದಲ್ಲಿ ಸಣ್ಣ ಸಣ್ಣ ಕಾರಣಕ್ಕೂ ಗಂಡ ಹೆಂಡತಿ ನಡುವಿನ ಜಗಳ ಸಾಮಾನ್ಯವಾಗಿಬಿಟ್ಟಿದೆ. ಆದರೆ ಗಂಡ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಹೆಂಡತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ನಂದಿನಿ(24) ಎಂಬಾಕೆಯೇ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಾಕೆ. ಸೊಣ್ಣಪ್ಪ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಆರು ವರ್ಷದ ಹಿಂದೆ ಗೌತಮ್ ಜೊತೆ ನಂದಿನಿ ಲವ್ ಮ್ಯಾರೇಜ್ ಆಗಿದ್ದಳು. ಇವರಿಬ್ಬರ ಪ್ರೀತಿಗೆ ಸಾಕ್ಷಿಯಾಗಿ ಇಬ್ಬರು ಮಕ್ಕಳು ಸಹ ಇದ್ದಾರೆ. 


ಇದನ್ನೂ ಓದಿ- ರೈತ ಮುಖಂಡ ರಾಕೇಶ್ ಟಿಕಾಯತ್‌ಗೆ ಮಸಿ ಬಳಿದಿದ್ದ ಭರತ್ ಶೆಟ್ಟಿಗೆ ಬೆದರಿಕೆ ಸಂದೇಶ


ಪತಿ ಗೌತಮ್ ಸೆಲೂನ್ ನಲ್ಲಿ  ಕೆಲಸ ಮಾಡಿಕೊಂಡಿದ್ದ. ನಿನ್ನೆ ಬೆಳಗ್ಗೆ ಗೌತಮ್ ಕೆಲಸಕ್ಕೆ ಹೊರಟಿದ್ದಾಗ ನಂದಿನಿ ಚಾಕೊಲೇಟ್ ತಂದು ಕೊಡು ಎಂದು ಕೇಳಿದ್ದಾಳೆ.‌ ಆದರೆ ಕೆಲಸವಿದ್ದ ಕಾರಣ ಮಧ್ಯಾಹ್ನವಾದರು ಚಾಕೊಲೇಟ್ ತಂದು ಕೊಟ್ಟಿರಲಿಲ್ಲ. ಇದಾದ ಬಳಿಕ ಗೌತಮ್ ಮಧ್ಯಾಹ್ನ ನಂದಿನಿಗೆ ಕರೆ ಮಾಡಿದಾಗ ಸ್ವಿಕರಿಸಿಲ್ಲ. ಇದರಿಂದ ಅನುಮಾನಗೊಂಡ ಗೌತಮ್ ಮನೆಗೆ ಬಂದು ನೋಡಿದಾಗ ನಂದಿನಿ ನೇಣಿಗೆ ಶರಣಾಗಿರುವುದು ಪತ್ತೆಯಾಗಿದೆ‌. 


ಇದನ್ನೂ ಓದಿ- Crime News: ಹಾಡಿನ ಸೌಂಡ್ ಕಡಿಮೆ ಮಾಡಿ ಎಂದಿದಷ್ಟೆ, ನಡೆದೇ ಹೋಯ್ತು ಒಂದು ಕೊಲೆ !


ತಕ್ಷಣ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿದರೂ ಸಹ ಅಷ್ಟರಲ್ಲಾಗಲೇ ನಂದಿನಿ ಮೃತಪಟ್ಟಿದ್ದಾಳೆ. ಸದ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಹೆಣ್ಣೂರು ಠಾಣೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.