Job fraud case: ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್ಸ್ಪೆಕ್ಟರ್ ಹೆಸರಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


COMMERCIAL BREAK
SCROLL TO CONTINUE READING

ಪಡು ಅಲೆವೂರು ದುರ್ಗಾನಗರದ ವೀರೇಶ್(28) ಎಂಬವರಿಗೆ ಅಭಿಷೇಕ್ ಎನ್ ಎಂಬಾತ ಬೆಂಗಳೂರಿನಲ್ಲಿ ಪರಿಚಯವಾಗಿದ್ದ. ಆತ ತಾನು ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್ಸ್ಪೆಕ್ಟರ್ ಆಗಿ ಕೆಲಸವನ್ನು ಮಾಡಿಕೊಂಡಿರುವುದಾಗಿ ನಂಬಿಸಿದ್ದನಂತೆ.


ಇದನ್ನೂ ಓದಿ: CAA: ಮೋದಿ ಸರ್ಕಾರದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ‘ಲೋಕ’ ಚುನಾವಣೆಗೂ ಮುನ್ನ ಬ್ರಹ್ಮಾಸ್ತ್ರ


ವೀರೇಶ್ ಮತ್ತು ಆತನ ಸ್ನೇಹಿತ ರವೀಂದ್ರ ಎಂಬವರಿಗೆ ಕೆಲಸವನ್ನು ಕೊಡಿಸುವುದಾಗಿ ವಂಚಕ ಅಭಿಷೇಕ್ ನಂಬಿಸಿದ್ದ. ಅದರಂತೆ ವೀರೇಶ್ ಅವರಿಂದ 18 ಲಕ್ಷ ರೂ. ಹಣ ಹಾಗೂ ರವೀಂದ್ರ ಅವರಿಂದ 10 ಲಕ್ಷ ರೂ. ಹಣವನ್ನು ತನ್ನ ಬ್ಯಾಂಕ್ ಖಾತೆಗೆ 2021ರ ಮಾ.27ರಿಂದ 2023ರ ಆ.1ರ ನಡುವೆ ವರ್ಗಾವಣೆ ಮಾಡಿಸಿಕೊಂಡಿದ್ದನು ಎಂದು ದೂರಲಾಗಿದೆ.


ಆದರೆ ಅಭಿಷೇಕ್ ಇವರಿಬ್ಬರಿಗೆ ಈವರೆಗೂ ಯಾವುದೇ ಉದ್ಯೋಗವನ್ನು ಕೊಡಿಸದೇ, ಹಣವನ್ನು ವಾಪಸ್ಸು ಹಿಂದಿರುಗಿಸಿಲ್ಲ. ಕೆಲಸ ಕೊಡಿಸುವುದಾಗಿ ನಂಬಿಸಿದ ಅಭಿಷೇಕ್‌ ನಮಗೆ ವಂಚಿಸಿದ್ದಾನೆ. ನಮಗೆ ಮೋಸ ಮಾಡಿರುವ ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 


ಇದನ್ನೂ ಓದಿ: Lok Sabha Elections 2024: NDA 400 ಅಂಕ ತಲುಪುವುದು ಕಷ್ಟಸಾಧ್ಯ, ಪ್ರತಿಪಕ್ಷಗಳಿಗೆ ಎಷ್ಟು ಸ್ಥಾನ? ಇಲ್ಲಿದೆ ಶಾಕಿಂಗ್ ಸಮೀಕ್ಷೆ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ