Murder Case: ಶೀಲ ಶಂಕಿಸಿ 8 ತಿಂಗಳ ಗರ್ಭಿಣಿಯನ್ನು ಕೊಲೆಗೈದ ಪಾಪಿ ಪತಿ!!

Tumakuru Murder Case: ಆರೋಪಿ ಸೈಯದ್ ನಶೆಮುಕ್ತ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಹಣ ತೆಗೆದುಕೊಂಡು ಬಾ ಎಂದು ಪೀಡಿಸಿ ಹಲ್ಲೆ ನಡೆಸುತ್ತಿದ್ದ ಎನ್ನಲಾಗಿದೆ. 

Written by - Puttaraj K Alur | Last Updated : Mar 2, 2025, 08:37 PM IST
  • ಶೀಲ ಶಂಕಿಸಿ 8 ವರ್ಷದ ಮಗನ ಕಣ್ಣೆದುರೇ 8 ತಿಂಗಳ ಗರ್ಭಿಣಿ ಹತ್ಯೆ
  • ತುಮಕೂರಿನ ತಿಲಕ್ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆ
  • ಪತ್ನಿಯನ್ನ ಕೊಂದು ನೇರವಾಗಿ ಪೊಲೀಸ್‌ ಠಾಣೆಗೆ ಹೋಗಿ ಆರೋಪಿ ಶರಣು
Murder Case: ಶೀಲ ಶಂಕಿಸಿ 8 ತಿಂಗಳ ಗರ್ಭಿಣಿಯನ್ನು ಕೊಲೆಗೈದ ಪಾಪಿ ಪತಿ!!
8 ತಿಂಗಳ ಗರ್ಭಿಣಿ ಹತ್ಯೆ!!

Murder Case: ಶೀಲವನ್ನು ಶಂಕಿಸಿ 8 ವರ್ಷದ ಮಗನ ಕಣ್ಣೆದುರೇ 8 ತಿಂಗಳ ಗರ್ಭಿಣಿಯನ್ನು ಪಾಪಿ ಪತಿಯೊಬ್ಬ ನೇಣು ಬಿಗಿದು ಕೊಲೆ ಮಾಡಿದ್ದಾನೆ. ತುಮಕೂರಿನ ತಿಲಕ್ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಪತ್ನಿಯನ್ನ ಕೊಲೆಗೈದ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿದ್ದಾನೆ. 

Add Zee News as a Preferred Source

ನಗ್ಮಾ ಕೊಲೆಯಾದ ಗರ್ಭಿಣಿ. ಪತಿ ಸೈಯದ್ ಆರೋಪಿ ಎಂದು ತಿಳಿದುಬಂದಿದೆ. ಹೌಸಿಂಗ್ ಬೋರ್ಡ್ ನಿವಾಸಿ ನಗ್ಮಾಗೆ 8 ವರ್ಷದ ಮಗನಿದ್ದಾನೆ. ಒಂದು ವರ್ಷದ ಹಿಂದೆ ನಲ್ಮಾ ಮೊದಲ ಗಂಡನನ್ನು ಬಿಟ್ಟಿದ್ದಳು. ಬಳಿಕ ಸೈಯದ್‌ನನ್ನು ಪ್ರೀತಿಸಿ ಎರಡನೇ ಮದುವೆಯಾಗಿದ್ದಳಂತೆ. ಆದರೆ ಶೀಲ ಶಂಕಿಸಿ ಎಂಟು ತಿಂಗಳ ಗರ್ಭಿಣಿ ನಗ್ಮಾಳನ್ನ ನೇಣು ಬಿಗಿದು ಸೈಯದ್‌ ಹತ್ಯೆ ಮಾಡಿದ್ದಾನೆ.

ಇದನ್ನೂ ಓದಿ: ಕೈ ನಾಯಕರ ಐಷಾರಾಮಿ ಮನೆಯಿಂದ ಬಡವರಿಗೆ ಸಂಕಷ್ಟ

ಆರೋಪಿ ಸೈಯದ್ ನಶಮುಕ್ತ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ. ಆತನ ವಿರುದ್ಧ ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಹಣ ತೆಗೆದುಕೊಂಡು ಬಾ ಎಂದು ಪೀಡಿಸಿ ಹಲ್ಲೆ ನಡೆಸುತ್ತಿದ್ದ ಎನ್ನಲಾಗಿದೆ.

ಇದೇ ವಿಚಾರಕ್ಕೆ ಗಲಾಟೆ ನಡೆದು 8 ವರ್ಷದ ಮಗನ ಕಣ್ಣೆದುರೇ ನಗ್ಮಾಳ ಬಾಯಿಗೆ ಬಟ್ಟೆ ತುರುಕಿ ನೇಣು ಬಿಗಿದು ಕೊಲೆ ಮಾಡಿದ್ದಾನೆ. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಇದನ್ನೂ ಓದಿ: ರೈಲ್ವೆ ನಿಲ್ದಾಣದ ಕಾಮಗಾರಿ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕ ಕೊನೆಗೂ ಬಚಾವ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News