ಪ್ರೀತ್ಸೆ.. ಪ್ರೀತ್ಸೆ... ಎಂದು ಬೆನ್ನುಬಿದ್ದ ಯುವಕ; ಆತ್ಮಹತ್ಯೆ ಮಾಡಿಕೊಂಡ ಬಾಲಕಿ..!
Minor girl committed suicide: ಯುವನೊಬ್ಬ ಪ್ರೀತಿಸು, ಪ್ರೀತಿಸು ಅಂತಾ ಅಪ್ರಾಪ್ತ ಬಾಲಕಿ ಹಿಂದೆ ಬಿದ್ದು ಪೀಡಿಸುತ್ತಿದ್ದನಂತೆ. ಆತನ ಕಾಟ ತಾಳಲಾರದೆ ಬಾಲಕಿ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶಿವಮೊಗ್ಗ: ಪ್ರೀತ್ಸೆ.. ಪ್ರೀತ್ಸೆ... ಎಂದು ಯುವಕನೊಬ್ಬ ರೋಡ್ ರೋಮಿಯೋ ರೀತಿ ಹಿಂದೆ ಬಿದ್ದಿದ್ದರಿಂದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿ ಗ್ರಾಮದಲ್ಲಿಯೇ ಈ ಘಟನೆ ನಡೆದಿರುವುದು.
ವರ್ಷಿಣಿ (14) ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ. ಪ್ರೀತಿಸುವಂತೆ ಯುವಕ ತ್ಯಾಗರಾಜ್ ವರ್ಷಿಣಿಗೆ ಪ್ರತಿದಿನ ಬೆನ್ನುಬಿದ್ದು ಕಾಡುತ್ತಿದ್ದನಂತೆ. ಈ ವಿಚಾರ ತಿಳಿದ ವರ್ಷಿಣಿ ಪೋಷಕರು ಎರಡು ತಿಂಗಳ ಹಿಂದೆ ತ್ಯಾಗರಾಜ್ಗೆ ಎಚ್ಚರಿಕೆ ನೀಡಿದ್ದರು. ಆದರೂ ಇದಕ್ಕೆ ಸೊಪ್ಪು ಹಾಕದ ತ್ಯಾಗರಾಜ್ ತನ್ನನ್ನು ಪ್ರೀತಿಸುವಂತೆ ಬಾಲಕಿ ಹಿಂದೆ ರೋಡ್ ರೋಮಿಯೋ ರೀತಿ ಅಲೆಯುತ್ತಿದ್ದನಂತೆ.
ಇದನ್ನೂ ಓದಿ: ಸಿದ್ದರಾಮಯ್ಯನವರೇ, ನಿಮ್ಮನ್ನೂ ರಾಹುಲ್ ಗಾಂಧಿಯಂತೆ ತಿಳಿದುಕೊಳ್ಳಬೇಕಾಗುತ್ತದೆ: ಸಚಿವ ಪ್ರಹ್ಲಾದ್ ಜೋಶಿ
ಪ್ರೀತಿಸು, ಪ್ರೀತಿಸು ಅಂತಾ ಅಪ್ರಾಪ್ತ ಬಾಲಕಿ ಹಿಂದೆ ಬಿದ್ದು ಪೀಡಿಸುತ್ತಿದ್ದನಂತೆ. ತ್ಯಾಗರಾಜ್ನ ಕಾಟ ತಾಳಲಾರದೆ ವರ್ಷಿಣಿ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವರ್ಷಿಣಿ ಕುಟುಂಬಸ್ಥರು ತ್ಯಾಗರಾಜ್ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಕೊಂಡಿದ್ದಾರೆಂದು ತಿಳಿದುಬಂದಿದೆ.
ಇದನ್ನೂ ಓದಿ: ರಾಜ್ಯದ ಕಟ್ಟಕಡೇಯ ರೈಲು ನಿಲ್ದಾಣ ಅಭಿವೃದ್ಧಿಗೆ ನರೇಂದ್ರ ಮೋದಿ ಶಂಕುಸ್ಥಾಪನೆ!!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.