ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರ ದಾರುಣ ಸಾವು
Building Collapsed: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬಾಡರಹಳ್ಳಿ ಬಳಿ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಸೆಂಟ್ ಹಾನ್ಸ್ ಖಾಸಗಿ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಇಂದು ಬೆಳಗ್ಗೆ ಶಾಲಾ ಕಟ್ಟಡದ ಪೋರ್ಟಿಕಾದ ಮೋಲ್ಡ್ಗೆ ಸಿಮೆಂಟ್ ಕಾಂಕ್ರೀಟ್ ಹಾಕುವ ವೇಳೆ ಏಕಾಏಕಿ ಕುಸಿದು ಬಿದ್ದಿದೆ.
Building Collapsed: ಇಂದು ಬೆಳ್ಳಂಬೆಳಿಗ್ಗೆ ಖಾಸಗಿ ಶಾಲಾ ಕಟ್ಟಡದಲ್ಲಿ ಮೋಲ್ಡ್ ಸಿಮೆಂಟ್ ಕಾಂಕ್ರೀಟ್ ಹಾಕುವಾಗ ಭೀಕರ ದುರಂತ ಸಂಭವಿಸಿದೆ. ನೋಡ ನೋಡುತ್ತಿದ್ದಂತೆ ಸೆಂಟ್ರಿಂಗ್ ಸಹಿತ ಕಬ್ಬಿಣದ ಸರಳುಗಳು ಮತ್ತು ಸಿಮೆಂಟ್ ಕಾಂಕ್ರೀಟ್ ಕಾರ್ಮಿಕರ ಮೇಲೆ ಕುಸಿದು ಬಿದ್ದಿದೆ. ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಅವಶೇಷಗಳಡಿ ಸಿಲುಕಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬಾಡರಹಳ್ಳಿ ಬಳಿ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಸೆಂಟ್ ಹಾನ್ಸ್ ಖಾಸಗಿ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಇಂದು ಬೆಳಗ್ಗೆ ಶಾಲಾ ಕಟ್ಟಡದ ಪೋರ್ಟಿಕಾದ ಮೋಲ್ಡ್ಗೆ ಸಿಮೆಂಟ್ ಕಾಂಕ್ರೀಟ್ ಹಾಕುವ ವೇಳೆ ಏಕಾಏಕಿ ಕುಸಿದು ಬಿದ್ದಿದೆ. ಸೆಂಟ್ರಿಂಗ್ ಸಹಿತ ಸಿಮೆಂಟ್ ಕಾಂಕ್ರೀಟ್ ಕಾರ್ಮಿಕರ ಮೇಲೆ ಕುಸಿದು ಬಿದ್ದಿದ್ದರಿಂದ ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸುಮಾರು 17 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
ಇದನ್ನೂ ಓದಿ- ಹುಡುಗಿಯರ ಹಾಸ್ಟೆಲ್ ಬಾತ್‌ರೂಮ್‌ನಲ್ಲಿ ಕ್ಯಾಮರಾ ಇಟ್ಟ ಕಾಮುಕ, ಮುಂದೆ..!
ಕಾರ್ಮಿಕರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಸೆಂಟ್ರಿಂಗ್ ಗೆ ಕಬ್ಬಿಣದ ರಾಡ್ ಬಳಕೆ ಮಾಡಿಲ್ಲ. ಕಬ್ಬಿಣದ ಸರಳುಗಳನ್ನು ಸೂಕ್ತವಾಗಿ ಜೋಡಣೆ ಮಾಡಿಲ್ಲದಿರುವುದೇ ಈ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸಿ ಅಮಾಯಕ ಕಾರ್ಮಿಕರ ಸಾವಿಗೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ತಿಳಿಸಿದ್ದಾರೆ.
ಇನ್ನೂ ಬೆಳಗ್ಗೆ 7 ಗಂಟೆ ಸುಮಾರಿಗೆ ನಿರ್ಮಾಣ ಹಂತದ ಖಾಸಗಿ ಶಾಲಾ ಕಟ್ಟಡದ ಎರಡನೇ ಮಹಡಿ ಪೋರ್ಟಿಕಾಗೆ ಸಿಮೆಂಟ್ ಕಾಂಕ್ರೀಟ್ ಹಾಕಲಾಗುತ್ತಿತ್ತು. ಎರಡು RMC ಲಾರಿ ಲೋಡ್ ಸಿಮೆಂಟ್ ಕಾಂಕ್ರೀಟ್ ಸುರಿಯಲಾಗಿತ್ತು. ಈ ವೇಳೆ ಸೆಂಟ್ರಿಂಗ್ ಸಹಿತ ಸಿಮೆಂಟ್ ಕಾಂಕ್ರೀಟ್ ಕ್ಷಣಾರ್ಧದಲ್ಲಿ ಕುಸಿದು ಬಿತ್ತು. ಅವಶೇಷಗಳಡಿಯಲ್ಲಿ ಸಿಲುಕಿದವರ ನರಳಾಟ ಹೇಳ ತೀರದಾಗಿತ್ತು. ಪಶ್ಚಿಮ ಬಂಗಾಳ ಮೂಲದ ಸಾಯಿದ್ ಮಂಡಲ್, ಮಿನಲ್ ಬಿಸ್ಮಾಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಳಿದವರಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರು ಎಂದು ಪ್ರತ್ಯಕ್ಷದರ್ಶಿ ಶಿವು ತಿಳಿಸಿದ್ದಾರೆ. ಆದರೆ, ಕಟ್ಟಡದ ಎಂಜಿನಿಯರ್ ಮಾತ್ರ ಸಣ್ಣ ಪ್ರಮಾಣದಲ್ಲಿ ಅವಘಡ ನಡೆದಿದ್ದು, ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆಂದು ಘಟನೆಯನ್ನು ಮರೆಮಾಚುವ ಯತ್ನ ಮಾಡಿದ್ದಾರೆ. ಇದರ ನಡುವೆ ಘಟನೆಯಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರಿಗೆ ಸರ್ಕಾರ ಮತ್ತು ಶಾಲಾ ಸಂಸ್ಥೆ ವತಿಯಿಂದ ಅಗತ್ಯ ನೆರವು ಕೊಡಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ- Chikkamagaluru: ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿನಿ ಸಾವು!
ಸದ್ಯ ಅಮಾಯಕ ಕಾರ್ಮಿಕರ ಸಾವಿಗೆ ಕಾರಣರಾದ ಕಟ್ಟಡದ ವಿನ್ಯಾಸಗಾರರಾದ ಅಲ್ಮಾನ್ ಆರ್ಕಿಟೆಕ್ ಕಂಪನಿ, ಪ್ರತಾಪ್ ಬಿಲ್ಡರ್ ಮತ್ತು ಡೆವಲಪರ್ಸ್ ಕಂಪನಿ, ಕಟ್ಟಡದ ಮ್ಯಾನೇಜರ್ ಬಸವರಾಜು, ಸೈಟ್ ಇಂಜಿನಿಯರ್ ಮುಜಾಮಿಲ್, ಸೆಂಟ್ರಿಂಗ್ ಮೇಸ್ತಿ ರಾಜು, ಗಾರೆ ಮೇಸ್ತ್ರಿ ಕರಿಯಪ್ಪ ವಿರುದ್ಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರು ಆರೋಪಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.