ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ ಸ್ಟಾಫ್ ನರ್ಸ್ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಮಿತ್ರಾ (32) ಮೃತ ಮಹಿಳೆ. ಈಕೆ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.
ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಇವರಿಗೆ 32 ವರ್ಷವಾದ್ರೂ ಸಹ ಮದುವೆಯಾಗಿರಲಿಲ್ಲ. ಜೀವನದಲ್ಲಿ ತುಂಬಾ ನೊಂದಿದ್ದ ಸುಮಿತ್ರಾ ಖಿನ್ನತೆಯಿಂದ ಬಳಲುತ್ತಿದ್ದರು. ಕುಟುಂಬಸ್ಥರೊಂದಿಗೆ ವಾಸವಿದ್ದ ಸುಮಿತ್ರಾ ಮುಂಜಾನೆ ಕುಟುಂಬಸ್ಥರು ಕೋಣೆಯ ಬಾಗಿಲು ತಟ್ಟಿದರು ಸಹ ಬಾಗಿಲು ಓಪನ್ ಮಾಡಿರಲಿಲ್ಲ.
ಇದನ್ನೂ ಓದಿ- ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ
ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ಮುರಿದು ನೋಡಿದಾಗ ಸುಮಿತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಈ ಹಿನ್ನೆಲೆ ಗಿರಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ- WATCH: ಶಿರೂರು ಟೋಲ್ ಗೇಟ್ ಬಳಿ ಆಂಬ್ಯುಲೆನ್ಸ್ ಅಪಘಾತ, ಬೆಚ್ಚಿಬೀಳಿಸುತ್ತೆ ವಿಡಿಯೋ
ಈ ವೇಳೆ ಸ್ಥಳದಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ. ನನ್ನನ್ನು ಖುಷಿಯಾಗಿ ಕಳುಹಿಸಿಕೊಡಿ ಎಂದು ಸುಮಿತ್ರಾ ಬರೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.