ಬೆಂಗಳೂರು: ಬೆಂಗಳೂರಿನ ಕಾಲೇಜೊಂದರಲ್ಲಿ ಓದುತ್ತಿದ್ದ ಕೇರಳ ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜಿನ ಹಾಸ್ಟೆಲ್‌ನ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ನಿತಿನ್ ಎಂಬ ವಿದ್ಯಾರ್ಥಿ ಕಾಲೇಜು ಹಾಸ್ಟೆಲ್‌ನ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿ ಆಗಿದೆ.
ಬನ್ನೇರುಘಟ್ಟ ಪೊಲೀಸರ ಪ್ರಕಾರ, ಕೇರಳದ ಕೋಯಿಕ್ಕೋಡ್‌ನ ಹಳ್ಳಿಯೊಂದರ ನಿವಾಸಿಯಾಗಿರುವ 19 ವರ್ಷದ ನಿತಿನ್ ಕಳೆದ ಹದಿನೈದು ದಿನಗಳ ಹಿಂದಷ್ಟೇ ಅಂದರೆ ಡಿಸೆಂಬರ್ 01, 2022ರಂದು ನಿತಿನ್ ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿಗೆ ಸೇರಿದ್ದರು.
ಇದನ್ನೂ ಓದಿ- 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪಾಪಿ ಪೂಜಾರಿ..!
ಡಿಸೆಂಬರ್ 14 ರಂದು ಬೆಳಿಗ್ಗೆ 9.30 ರ ಸುಮಾರಿಗೆ ತನ್ನ ರೂಮ್‌ಮೇಟ್‌ಗಳು ಕಾಲೇಜಿಗೆ ಹೋಗುತ್ತಿದ್ದಾಗ, ನಿತಿನ್ ತನಗೆ ತಲೆನೋವು ಎಂದು ಹೇಳಿ ಅವರೊಂದಿಗೆ ಕಾಲೇಜಿಗೆ ತೆರಳಲು ನಿರಾಕರಿಸಿದ್ದನು. ಕ್ಲಾಸ್ ಮುಗಿಸಿ ಅವನ ರೂಮ್‌ಮೇಟ್‌ಗಳು ರೂಮಿಗೆ ಹಿಂದಿರುಗಿದಾಗ ಎಷ್ಟು ಕೂಗಿದರೂ ನಿತಿನ್ ರೂಂ ಬಾಗಿಲು ತೆರೆದಿರಲಿಲ್ಲ. ಈ ವೇಳೆ ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿ ಸಹಾಯದಿಂದ ಬಾಗಿಲು ಒಡೆ್ದು ಒಳಗೆ ಹೋದಾಗ ಶೌಚಾಲಯದಲ್ಲಿ ನಿತಿನ್ ಕತ್ತು ಕೊಯ್ದುಕೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಎಂದು ತಿಳಿದುಬಂದಿದೆ.
ಇದನ್ನೂ ಓದಿ- Crime News : ಟ್ರಾಲಿ ಬ್ಯಾಗ್‌ನಲ್ಲಿ ಮಹಿಳೆಯ ಶವ ಪತ್ತೆ.! ತಂದೆಯಿಂದಲೆ ಮಗಳ ಮರ್ಯಾದಾ ಹತ್ಯೆ?
ಪೊಲೀಸ್ ಮೂಲಗಳ ಪ್ರಕಾರ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತ ಯುವಕನ ಪೋಷಕರಿಬ್ಬರೂ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಈತ ತನ್ನ ಪೋಷಕರಿಗೆ ಕರೆ ಮಾಡಿ ತನ್ನನ್ನು ಭೇಟಿಯಾಗುವಂತೆ ಅವರೊಟ್ಟಿಗೆ ಪದೇ ಪದೇ ಜಗಳವಾಡುತ್ತಿದ್ದ ಎಂದು ಆತನ ಕೊಠಡಿ ಸಹಪಾಠಿಗಳು ಮತ್ತು ಕಾಲೇಜು ಸಹಪಾಠಿಗಳಿಂದ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.