Bengaluru Crime News: ಗೋವಾದ ಕ್ಯಾಸಿನೋದಲ್ಲಿ ಆಟವಾಡಿ 25 ಲಕ್ಷ ಗೆದ್ದು ಬಂದಿದ್ದ ಟೀ ಮಾರುವ ವ್ಯಕ್ತಿಯನ್ನು ಪರಿಚಯಸ್ಥರೇ ಅಪಹರಿಸಿ ಹಲ್ಲೆ ಮಾಡಿ 15 ಲಕ್ಷ ಕಸಿದಿರರುವ ಪ್ರಕರಣ ಬೆಳಕಿಗೆ ಬಂದಿದೆ. ಶ್ರೀನಗರದ ನಿವಾಸಿಯಾಗಿರುವ ತಿಲಕ್ ಮಣಿಕಂಠ (32) ಅಪಹರಣಕ್ಕೊಳಗಾಗಿದ್ದು, ಈತ ನೀಡಿದ ದೂರಿನ ಮೇರೆಗೆ ಐವರ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದಲ್ಲಿ ಅನೇಕ ವರ್ಷಗಳಿಂದ ಟೀ ಮಾರುತ್ತಿದ್ದ ತಿಲಕ್, ಗೋವಾಕ್ಕೆ ಹೋಗಿ ಕ್ಯಾಸಿನೋ ಆಟ ಆಡಬೇಕೆಂದುಕೊಂಡಿದ್ದ. ಇದಕ್ಕಾಗಿ 4 ಲಕ್ಷ ಹಣ ಹೊಂದಿಸಿ ಸ್ನೇಹಿತರೊಂದಿಗೆ ಕಳೆದ ಜುಲೈ 30ರಂದು ಬೆಂಗಳೂರಿನಿಂದ ಪಣಜಿಗೆ ತೆರಳಿದ್ದ. ನಾಲ್ಕು ದಿನ ಗೋವಾದಲ್ಲೇ ಇದ್ದು, ಫ್ರೈಡ್ ಎಂಬ ಕ್ಯಾಸಿನೋದಲ್ಲಿ ಜೂಜಾಡಿ 25 ಲಕ್ಷ ಹಣ ಗೆದ್ದಿದ್ದ. ಕೆನರಾ ಬ್ಯಾಂಕ್ ಅಕೌಂಟ್ ನಂಬರ್ ನೀಡಿ ಆ.4ರಂದು ಗೋವಾದಿಂದ ಬೆಂಗಳೂರಿಗೆ ಬಂದಿದ್ದ.
ಇದನ್ನೂ ಓದಿ- ಬೆಂಗಳೂರಿನಲ್ಲಿ ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಸೈಕೋ ಪತಿ!
ಜೂಜಿನಲ್ಲಿ 25 ಲಕ್ಷ ಹಣ ಗೆದ್ದ ವಿಚಾರ ಮನೆಯವರು ಹಾಗೂ ಸ್ನೇಹಿತರೊಂದಿಗೆ ಹಂಚಿಕೊಂಡು ಸಂಭ್ರಮಿಸಿದ್ದ. ಗೋವಾದಿಂದ ಬಂದು ಮತ್ತೆ ಟೀ ಮಾರುವ ಕೆಲಸ ಮುಂದುವರೆಸಿದ್ದಾಗ ಆಗಸ್ಟ್ 5ರಂದು ಕಾರಿನಲ್ಲಿ ಬಂದಿದ್ದ ಪರಿಚಯಸ್ಥರು ತಿಲಕ್ ನನ್ನ ಕಾರಿನಲ್ಲಿ ಬಲವಂತವಾಗಿ ಕೂರಿಸಿ ಅಪಹರಿಸಿದ್ದಾರೆ. ಜ್ಣಾನಭಾರತಿ ವಿವಿ ಬಳಿ ನಿರ್ಜನ ಪ್ರದೇಶದಲ್ಲಿ ಎಳೆದುಕೊಂಡು ಹೋಗಿ ಇಸ್ಟೀಟ್ ಆಟದ ಬಗ್ಗೆ ಕ್ಯಾತೆ ತೆಗೆದಿದ್ದಾರೆ. ನಂತರ ಗೋವಾದ ಕ್ಯಾಸಿನೋದಲ್ಲಿ 25 ಲಕ್ಷ ಗೆದ್ದಿರುವ ವಿಚಾರ ನಮಗೆ ಗೊತ್ತಿದೆ. ಹಣ ನೀಡು ಎಂದು ಹೇಳಿ ಬೆದರಿಸಿ ಹಲ್ಲೆ ಮಾಡಿ ಮೊಬೈಲ್ ಕಸಿದುಕೊಂಡು ಬ್ಯಾಂಕ್ ಖಾತೆಯಿಂದ ಸುಮಾರು 15 ಲಕ್ಷ ಹಣದವರೆಗೂ ತಮ್ಮ ತಮ್ಮ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿಕೊಂಡಿದ್ದಾರೆ. ಬಳಿಕ ನೆಲಮಂಗಲ ಗೊಲ್ಲಹಳ್ಳಿ ಬಳಿಯಿರುವ ರೆಸಾರ್ಟ್ ಗೆ ಕರೆದೊಯ್ದು ಕೊಠಡಿಯೊಂದರಲ್ಲಿ ಕೂಡಿ ಹಾಕಿದ್ದಾರೆ.
ಇದನ್ನೂ ಓದಿ- Crime News : 16000 ಕ್ಕೂ ಹೆಚ್ಚು ಜನರಿಗೆ ವಂಚಿಸಿದ ಈಕೆಗೆ ಸಿಕ್ಕಿದ್ದು 141078 ವರ್ಷಗಳ ಸೆರೆವಾಸ
ಮಾರನೇ ದಿನ ಅಪಹರಣಕಾರರು ನಮ್ಮಿಂದ ನೀನು ಇಸ್ಟೀಟ್ ಆಡಿ ಮೋಸ ಮಾಡಿ ಗೆದ್ದಿರುವ ದುಡ್ಡು. ಹೀಗಾಗಿ ಹಣ ವರ್ಗಾವಣೆ ಮಾಡಿಸಿಕೊಂಡಿದ್ದೇವೆ ಎಂದು ಹೇಳಿಸಿ ಮೊಬೈಲ್ ನಲ್ಲಿ ವಿಡಿಯೋ ಮಾಡಿಸಿಕೊಂಡಿದ್ದಾರೆ. ಪೊಲೀಸರಿಗೆ ಏನಾದರೂ ನಮ್ಮ ವಿರುದ್ಧ ದೂರು ನೀಡಿದರೆ ಸಾಯಿಸುವ ಬೆದರಿಕೆ ಹಾಕಿ ಬೆಂಗಳೂರು ಸಮೀಪ ತಿಲಕ್ ನನ್ನ ಬಿಟ್ಟು ಕಳುಹಿಸಿದ್ದಾರೆ. ಸದ್ಯ ನೊಂದ ತಿಲಕ್ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ