ಹುಬ್ಬಳ್ಳಿ: ಮುಂದೆ ಹೋಗುತ್ತಿದ್ದ ಸ್ಕೂಟರ್‍ಗೆ ಹಿಂಬದಿಯಿಂದ ಅತಿಜೋರಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರನ ತಲೆ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಗದಗ ರಸ್ತೆಯ ನಳಂದಾ ಕಾಲೇಜು ಬಳಿ ನಡೆದಿದೆ.


COMMERCIAL BREAK
SCROLL TO CONTINUE READING

ನಳಂದಾ ಕಾಲೇಜು ಬಳಿ ಹುಬ್ಬಳ್ಳಿ ಕಡೆಯಿಂದ ಗದಗ ಕಡೆಗೆ ಹೊರಟಿದ್ದ ಪಾರ್ಚುನರ್ ಕಾರು ಮುಂದೆ ಹೋಗುತ್ತಿದ್ದ ಆಕ್ಟೀವ್ ಹೋಂಡಾ ಸ್ಕೂಟರ್‍ಗೆ ಅತಿಜೋರಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಹೊಲದಲ್ಲಿ ಹೋಗಿ ಬಿದ್ದರೆ, ಬೈಕ್ ಸವಾರನ ತಲೆ ಛಿದ್ರ ಛಿದ್ರವಾಗಿ ಆತ ನಡುರಸ್ತೆಯಲ್ಲಿಯೇ ಸಾವನಪ್ಪಿದ್ದಾನೆ.


ಇದನ್ನೂ ಓದಿ: NIA Raid: ಭಯೋತ್ಪಾದಕ ಕೃತ್ಯಕ್ಕೆ ಹಣ ಬಳಕೆ ಆರೋಪ: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ


ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಮೃತಪಟ್ಟ ಸ್ಕೂಟರ್ ಸವಾರನ ಶವವನ್ನು ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.


ಸದ್ಯ ಮೃತಪಟ್ಟ ಸ್ಕೂಟರ್ ಸವಾರ ಯಾರು? ಎಲ್ಲಿಯವ? ಎಂಬ ಮಾಹಿತಿ ಇನ್ನು ಲಭ್ಯವಾಗಿಲ್ಲ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಇದನ್ನೂ ಓದಿ: ಬೆಂಗಳೂರಿನ ಆಸ್ತಿ ತೆರಿಗೆಯಿಂದ ಬರುವ ಆದಾಯದ ಮೇಲೆ ಸರ್ಕಾರದ ಕಣ್ಣು!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.