Delhi Murder Case: ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಂದ ಯುವಕ!

Palam Murder Case: ಆರೋಪಿ ಮಾದಕ ವ್ಯಸನಿಯಾಗಿದ್ದು, ತನ್ನ ಹತ್ತಿರದ ಸಂಬಂಧಿಕರನ್ನು ಕೊಂದಿದ್ದಾನೆ. ಮಾಹಿತಿ ಪ್ರಕಾರ, ಆತನ ಇಬ್ಬರು ಸಹೋದರಿಯರು, ತಂದೆ ಮತ್ತು ಅಜ್ಜಿಯ ಮೃತದೇಹಗಳು ರಕ್ತದಲ್ಲಿ ತೊಯ್ದು ಬಿದ್ದಿದ್ದವು. ಮಹಿಳೆಯ ಶವ ನೆಲದ ಮೇಲೆ ಬಿದ್ದಿತ್ತು. ಉಳಿದ ಇಬ್ಬರು ಸದಸ್ಯರ ಶವಗಳು ಸ್ನಾನಗೃಹದಲ್ಲಿ ಪತ್ತೆಯಾಗಿವೆ.

Written by - Bhavishya Shetty | Last Updated : Nov 23, 2022, 09:15 AM IST
    • ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ
    • ಘಟನೆಯು ವಾಯುವ್ಯ ದೆಹಲಿಯ ಪಾಲಂ ಪ್ರದೇಶದಲ್ಲಿ ಬುಧವಾರ ನಡೆದಿದೆ
    • ಮಾದಕ ವ್ಯಸನಿಯಾಗಿರುವ ಕುಟುಂಬದ ಯುವಕ ಕೊಲೆ ಆರೋಪಿ
Delhi Murder Case: ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಂದ ಯುವಕ!  title=
delhi murder

Palam Murder Case: ದೆಹಲಿಯ ಪಾಲಂ ಪ್ರದೇಶದಲ್ಲಿ ನಾಲ್ವರನ್ನು ಹತ್ಯೆಗೈದಿರುವ ಭೀಕರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಒಂದೇ ಕುಟುಂಬದ ನಾಲ್ವರನ್ನು ಮನೆಯೊಳಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮಾದಕ ವ್ಯಸನಿಯಾಗಿರುವ ಕುಟುಂಬದ ಯುವಕ ಕೊಲೆ ಆರೋಪಿಯಾಗಿದ್ದು ಆತನನ್ನು ಬಂಧಿಸಲಾಗಿದೆ. ಈತ ತನ್ನ ತಂದೆ, ಅಜ್ಜಿ ಹಾಗೂ ಇಬ್ಬರು ಸಹೋದರಿಯರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಕೊಲೆಗೆ ಕಾರಣವೇನು ಎಂಬುದು ಪತ್ತೆಯಾಗುತ್ತಿದೆ. ಈ ಭೀಕರ ಘಟನೆಯು ವಾಯುವ್ಯ ದೆಹಲಿಯ ಪಾಲಂ ಪ್ರದೇಶದಲ್ಲಿ ಬುಧವಾರ ನಡೆದಿದೆ.

ಇದನ್ನೂ ಓದಿ: Video Viral : ಕಾರ್ ಸ್ಟಂಟ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ!

ಆರೋಪಿ ಮಾದಕ ವ್ಯಸನಿಯಾಗಿದ್ದು, ತನ್ನ ಹತ್ತಿರದ ಸಂಬಂಧಿಕರನ್ನು ಕೊಂದಿದ್ದಾನೆ. ಮಾಹಿತಿ ಪ್ರಕಾರ, ಆತನ ಇಬ್ಬರು ಸಹೋದರಿಯರು, ತಂದೆ ಮತ್ತು ಅಜ್ಜಿಯ ಮೃತದೇಹಗಳು ರಕ್ತದಲ್ಲಿ ತೊಯ್ದು ಬಿದ್ದಿದ್ದವು. ಮಹಿಳೆಯ ಶವ ನೆಲದ ಮೇಲೆ ಬಿದ್ದಿತ್ತು. ಉಳಿದ ಇಬ್ಬರು ಸದಸ್ಯರ ಶವಗಳು ಸ್ನಾನಗೃಹದಲ್ಲಿ ಪತ್ತೆಯಾಗಿವೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಮತ್ತೊಂದೆಡೆ, ದೆಹಲಿಯ ಮೆಹ್ರೌಲಿ ಪ್ರದೇಶದಲ್ಲಿ ತನ್ನ ಲಿವ್-ಇನ್ ಪಾರ್ಟ್ ನರ್ ಶ್ರದ್ಧಾ ವಾಕರ್ ಅವರನ್ನು ಕೊಂದು ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನ ಪಾಲಿಗ್ರಾಫ್ ಪರೀಕ್ಷೆಯನ್ನು ರೋಹಿಣಿಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್‌ಎಸ್‌ಎಲ್) ಮುಂದಿನ ಎರಡು ದಿನಗಳಲ್ಲಿ ನಡೆಸುವ ಸಾಧ್ಯತೆಯಿದೆ. ಮಂಗಳವಾರ ಎಫ್‌ಎಸ್‌ಎಲ್‌ ಅಧಿಕಾರಿಗಳು ಶಿಷ್ಟಾಚಾರದ ಪ್ರಕಾರ ಪಾಲಿಗ್ರಾಫ್ ಪರೀಕ್ಷೆಯ ನಕಲು ಆದೇಶವನ್ನು ಪರಿಶೀಲಿಸಲು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದಲ್ಲಿ, ನ್ಯಾಯಾಧೀಶರು ಸತ್ಯವನ್ನು ಖಚಿತಪಡಿಸಿಕೊಳ್ಳಲು ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸಲು ಪೊಲೀಸರಿಗೆ ಅನುಮತಿ ನೀಡಿದರು, ಆದರೆ ಇನ್ನೊಂದು ನ್ಯಾಯಾಲಯವು ಅಫ್ತಾಬ್‌ನ ಪೊಲೀಸ್ ಕಸ್ಟಡಿಯನ್ನು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಿದೆ.

ಇದನ್ನೂ ಓದಿ: Shraddha Murder Case: ಅಫ್ತಾಬ್ ಮನೆ ಕಾರ್ಯಾಚರಣೆ: 8 ಮೂಳೆಗಳ ಜೊತೆ ರಕ್ತದ ಮಾದರಿ ಪೊಲೀಸ್ ವಶಕ್ಕೆ

ಶ್ರದ್ಧಾ ಅವರ ದೇಹದ ಭಾಗಗಳನ್ನು ಹುಡುಕಲು ಅಫ್ತಾಬ್ ನನ್ನು ಎರಡು ಕೊಳಗಳಿಗೆ ಕರೆದೊಯ್ಯಲಾಗಿದೆ. ಒಂದು ಮೆಹ್ರೌಲಿ ಅರಣ್ಯದಲ್ಲಿ ಮತ್ತು ಇನ್ನೊಂದು ಮೈದಂಗರಿಯಲ್ಲಿದೆ. ಭಾನುವಾರ, ಪೊಲೀಸ್ ತಂಡಗಳು ಮೆಹ್ರೌಲಿ ಅರಣ್ಯದಿಂದ ಹೆಚ್ಚಿನ ಅವಶೇಷಗಳನ್ನು ವಶಪಡಿಸಿಕೊಂಡಿವೆ. ತುಂಡರಿಸಿದ ದವಡೆ ಸೇರಿದಂತೆ ದೇಹದ 18 ಮೂಳೆಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿಲಾಗಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News