ಚಿತ್ರದುರ್ಗ: ಅಜ್ಜ ಮೊಬೈಲ್ ಕೊಡಿಸಲಿಲ್ಲವೆಂದು ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಕೊಳಾಳ್ ಗ್ರಾಮದಲ್ಲಿ ನಡೆದಿದೆ.
ಯಶವಂತ(20) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಕಳೆದ ವಾರ(ಅ.8) ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ವಿಸರ್ಜನೆ ಹಬ್ಬದ ವೇಳೆ ಮೃತ ಯಶವಂತ ಮೊಬೈಲ್ ಕಳೆದುಕೊಂಡಿದ್ದ. ಮೊಬೈಲ್ ಇಲ್ಲದೆ ಕಂಗಾಲಾಗಿದ್ದ ಯುವಕ ತನಗೆ ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನಿಗೆ ಪೀಡಿಸುತ್ತಿದ್ದ. ನನಗೆ ಮೊಬೈಲ್ ಬೇಕೇ ಬೇಕು ಅಂತಾ ಹಠ ಮಾಡುತ್ತಿದ್ದ ಯಶವಂತನಿಗೆ ಮನೆಯವರು ಬುದ್ದಿ ಹೇಳಿದ್ದರು.
ಇದನ್ನೂ ಓದಿ: ಯಾವ ಅಧಿಕಾರಿಗಳಿದ್ದರೂ ಸರ್ಕಾರದ ಪರವಾಗಿ ಕೆಲಸ ಮಾಡುತ್ತೇವೆ
ಹೊಸ ಮೊಬೈಲ್ ಈಗ ಖರೀದಿಸಲು ನಮ್ಮಲ್ಲಿ ಸಾಕಷ್ಟು ಹಣವಿಲ್ಲ. ಶೀಘ್ರವೇ ನಿನಗೆ ಹೊಸ ಮೊಬೈಲ್ ಕೊಡಿಸುವುದಾಗಿ ಕುಟುಂಬಸ್ಥರು ಯಶವಂತನಿಗೆ ಬುದ್ದಿ ಹೇಳಿದ್ದರು. ಆದರೆ ನನಗೆ ಈಗಲೇ ಮೊಬೈಲ್ ಕೊಡಿಸಬೇಕೆಂದು ಹಠ ಹಿಡಿದಿದ್ದ. ಅಜ್ಜ ಮತ್ತು ಮನೆಯವರು ನನಗೆ ಮೊಬೈಲ್ ಕೊಡಿಸಿಲ್ಲವೆಂದು ಮನನೊಂದಿದ್ದ ಯಶವಂತ ಅ.18ರಂದು ಮನೆಯಲ್ಲಿ ರಾಸಾಯನಿಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.
ಕೂಡಲೇ ಆತನನ್ನು ಚಿತ್ರದುರ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಯುವಕನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಆತ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾನೆ. ಈ ಘಟನೆ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: "ಕಮೀಷನ್ ಕಲೆಕ್ಷನ್ʼಗಾಗಿ ಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿ"-ಎಚ್ಡಿಕೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.