Murder Case: ಪ್ರೀತಿ ನಿರಾಕರಿಸಿದ SSLC ವಿದ್ಯಾರ್ಥಿನಿಯ ಕೊಲೆಗೈದು ರೈಲಿಗೆ ತಲೆಕೊಟ್ಟ ಯುವಕ!

Hasana Murder Case: ತನ್ನ ಪ್ರೀತಿಯನ್ನು ನಿರಾಕರಿಸಿದಳೆಂದು SSLC ಓದುತ್ತಿದ್ದ ಭೂಮಿಕಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಶರತ್ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  

Written by - Puttaraj K Alur | Last Updated : Mar 5, 2024, 04:14 PM IST
  • ಪ್ರೀತಿ ನಿರಾಕರಿಸಿದ ಶಾಲಾ ಬಾಲಕಿ ಕೊಂದು ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ
  • ಹಾಸನ ಜಿಲ್ಲೆಯ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
  • SSLC ಓದುತ್ತಿದ್ದ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಯುವಕ
Murder Case: ಪ್ರೀತಿ ನಿರಾಕರಿಸಿದ SSLC ವಿದ್ಯಾರ್ಥಿನಿಯ ಕೊಲೆಗೈದು ರೈಲಿಗೆ ತಲೆಕೊಟ್ಟ ಯುವಕ! title=
ಬಾಲಕಿ ಹತ್ಯೆ ಮಾಡಿ ಯುವಕ ಸೂಸೈಡ್!

Hasana Murder Case: ಪ್ರೀತಿ ನಿರಾಕರಿಸಿದ ಶಾಲಾ ಬಾಲಕಿಯನ್ನು ಕೊಂದು ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಈ ಘಟನೆ ನಡೆದಿದೆ. 

ಅರಸೀಕೆರೆ ತಾಲೂಕಿನ ಬೆಳಗುಂಬ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಕೊಲೆಯಾದ ಬಾಲಕಿಯಾಗಿದ್ದು, ಶರತ್‌ (23) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲುವಿಗೆ ಬಿಜೆಪಿ ರಣತಂತ್ರ

ತನ್ನ ಪ್ರೀತಿಯನ್ನು ನಿರಾಕರಿಸಿದಳೆಂದು SSLC ಓದುತ್ತಿದ್ದ ಭೂಮಿಕಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಶರತ್ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿದ್ಯಾರ್ಥಿನಿ ಭೂಮಿಕಾ ಶಾಲೆ ಮುಗಿಸಿ ಮನೆಗೆ ಹೋಗುವಾಗ ತೋಟದಲ್ಲಿ ಆಕೆಯನ್ನು ಅಡ್ಡಗಟ್ಟಿದ ಶರತ್‌ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಬಿಬಿಎಂಪಿ ಅಧಿಕಾರಿಗಳ ಮೇಲೆ 110 ಕೋಟಿ ಭ್ರಷ್ಟಾಚಾರ ಆರೋಪ

ಕೊಲೆ ಮಾಡಿದ ಬಳಿಕ ಅರಸೀಕೆರೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News