ಹೈದರಾಬಾದ್: ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳ (ACB)ದ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಸರ್ಕಾರಿ ಅಧಿಕಾರಿ ಬಳಿ ಇದ್ದ ʼಕುಬೇರʼನ ನಿಧಿಯನ್ನು ಪತ್ತೆ ಹಚ್ಚಿರುವ ಎಸಿಬಿ ಅಧಿಕಾರಿಗಳು, ಬರೋಬ್ಬರಿ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ. ಬುಧವಾರ ತೆಲಂಗಾಣ ರಾಜ್ಯದ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (TSRIRA ) ಕಾರ್ಯದರ್ಶಿ ಮತ್ತು ಮೆಟ್ರೋ ರೈಲು ಯೋಜನಾ ಅಧಿಕಾರಿ ಎಸ್.ಬಾಲಕೃಷ್ಣ ಅವರ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳಿಗೆ ಶಾಕ್‌ ಆಗಿದೆ. ಕೋಟ್ಯಂತರ ರೂ. ಬೆಲೆಬಾಳುವ ಆಸ್ತಿ ಪತ್ತೆಯಾಗಿದೆ.  


COMMERCIAL BREAK
SCROLL TO CONTINUE READING

ಎಸ್.ಬಾಲಕೃಷ್ಣ  ಈ ಹಿಂದೆ ಹೈದರಾಬಾದಿನ ಮೆಟ್ರೋಪಾಲಿಟನ್ ಡೆವಲಪ್‌ಮೆಂಟ್ ಅಥಾರಿಟಿಯಲ್ಲಿ (HMDA) ಟೌನ್ ಪ್ಲಾನಿಂಗ್ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಭ್ರಷ್ಟಾಚಾರ ನಿಗ್ರಹ ದಳದ 14 ತಂಡಗಳ ಅಧಿಕಾರಿಗಳು ದಿನವಿಡೀ ಶೋಧ ಕಾರ್ಯ ನಡೆಸಿದ್ದಾರೆ. ಗುರುವಾರ ಮತ್ತಷ್ಟು ಶೋಧ ಕಾರ್ಯಾಚರಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 


ಇದನ್ನೂ ಓದಿ: India's Richest Temple: ಭಾರತದ ಶ್ರೀಮಂತ ದೇವಾಲಯಗಳು ಯಾವುವು ಎಂದು ನಿಮಗೆ ತಿಳಿದಿದೆಯೇ? 


ತೆಲಂಗಾಣ ಎಸಿಬಿ ಅಧಿಕಾರಿಗಳಿಂದ ಬುಧವಾರ ಮುಂಜಾನೆ 5 ಗಂಟೆಗೆ ಶೋಧ ಕಾರ್ಯ ಆರಂಭವಾಗಿದೆ. ಒಟ್ಟು 20 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಈ ದೊಡ್ಡ ಮೊತ್ತದ ಆಸ್ತಿಯನ್ನು ಪತ್ತೆ ಹಚ್ಚಲಾಗಿದೆ. ಎಸಿಬಿ ತಂಡಗಳು ಎಚ್‌ಎಂಡಿಎ ಮತ್ತು ರೇರಾ ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ. ಬಾಲಕೃಷ್ಣ ಅವರ ಮನೆ ಮತ್ತು ತನಿಖೆಗೆ ಸಂಬಂಧಿಸಿದ ಇತರ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. 


ಬಾಲಕೃಷ್ಣ ಅವರ ಮನೆ, ಕಚೇರಿಗಳು, ಸಂಬಂಧಿಕರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಈ ವೇಳೆ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿ ಪತ್ತೆಯಾಗಿದೆ. ಈವರೆಗೆ ಸುಮಾರು 40 ಲಕ್ಷ ರೂ. ನಗದು, 2 ಕೆಜಿ ಚಿನ್ನಾಭರಣ, ದೊಡ್ಡ ಮೊತ್ತದ ಚರ ಮತ್ತು ಸ್ಥಿರ ಆಸ್ತಿ ದಾಖಲೆಗಳು, 60 ದುಬಾರಿ ಕೈಗಡಿಯಾರಗಳು, 14 ದುಬಾರಿ ಮೊಬೈಲ್ ಫೋನ್‌ಗಳು, 10 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.


ಅಧಿಕಾರಿಯ ಬ್ಯಾಂಕ್ ಲಾಕರ್‌ಗಳನ್ನು ಇನ್ನೂ ತೆರೆದಿಲ್ಲ. ಎಸಿಬಿ ಕನಿಷ್ಠ ೪ ಬ್ಯಾಂಕ್‌ಗಳಲ್ಲಿ ಲಾಕರ್‌ಗಳಿರುವುದನ್ನು ಗುರುತಿಸಿದೆ. ಅಧಿಕಾರಿಯ ನಿವಾಸದಲ್ಲಿ ನಗದು ಎಣಿಕೆ ಯಂತ್ರಗಳನ್ನು ಸಹ ಎಸಿಬಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎನ್ನಲಾಗಿದೆ. ಭ್ರಷ್ಟ ಅಧಿಕಾರಿ ಬಾಲಕೃಷ್ಣ ಎಚ್‌ಎಂಡಿಎಯಲ್ಲಿ ಸೇವೆ ಸಲ್ಲಿಸಿದ ನಂತರ ಅಪಾರ ಪ್ರಮಾಣದ ಸಂಪತ್ತನ್ನು ಗಳಿಸಿದ್ದಾರೆಂದು ವರದಿಯಾಗಿದೆ. ಗುರುವಾರವೂ ಸಹ ಎಸಿಬಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಲಿದ್ದು, ಮತ್ತಷ್ಟು ಆಸ್ತಿ ಪತ್ತೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. 


ʼಬಾಬ್ರಿ ಮಸೀದ್‌ ಜೀವಂತವಾಗಿದೆʼ ಭಾರತದಲ್ಲಿ ಕೋಮುಗಲಭೆ ಎಬ್ಬಿಸಲು ʼಪಾಕ್‌ʼ ಸಂಚು.!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.