20 ಸಾವಿರ ಲಂಚಕ್ಕೆ ಬೇಡಿಕೆ: ಟ್ರಾಫಿಕ್ ಇನ್ಸ್‌ಪೆಕ್ಟರ್ ಎಸಿಬಿ ಬಲೆಗೆ
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೇಲ್ ಗ್ಯಾಸ್ ಕಂಪನಿ ವತಿಯಿಂದ ನೈಸರ್ಗಿಕ ಅನಿಲ ಪೈಪ್ ಅಳವಡಿಕೆಗೆ ರಸ್ತೆ ಬದಿ ನೆಲ ಅಗೆಯಲು ಮುಂದಾಗಿದ್ದರು. ಈ ಬಗ್ಗೆ ಅನುಮತಿ ಪಡೆಯಲು ಸಂಚಾರಿ ಪೊಲೀಸರಿಗೆ ಪತ್ರ ಬರೆದಿದ್ದರು.
ಬೆಂಗಳೂರು: 20 ಸಾವಿರ ಲಂಚ ಪಡೆಯುತ್ತಿದ್ದ ಟ್ರಾಫಿಕ್ ಮಹಿಳಾ ಇನ್ಸ್‌ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಚಿಕ್ಕಜಾಲ ಟ್ರಾಫಿಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಂಸವೇಣಿ ಎಸಿಬಿ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನು ಓದಿ: ಎಸ್‌ಬಿಐ ಸೇರಿದಂತೆ ಈ ಬ್ಯಾಂಕ್‌ಗಳಲ್ಲಿ ಲೋನ್ ಪಡೆದಿದ್ದರೆ ಇಲ್ಲಿದೆ ಪ್ರಮುಖ ಮಾಹಿತಿ
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೇಲ್ ಗ್ಯಾಸ್ ಕಂಪನಿ ವತಿಯಿಂದ ನೈಸರ್ಗಿಕ ಅನಿಲ ಪೈಪ್ ಅಳವಡಿಕೆಗೆ ರಸ್ತೆ ಬದಿ ನೆಲ ಅಗೆಯಲು ಮುಂದಾಗಿದ್ದರು. ಈ ಬಗ್ಗೆ ಅನುಮತಿ ಪಡೆಯಲು ಸಂಚಾರಿ ಪೊಲೀಸರಿಗೆ ಪತ್ರ ಬರೆದಿದ್ದರು. ಆದರೆ ಇನ್ಸ್‌ಪೆಕ್ಟರ್ ಹಂಸವೇಣಿ ಪರ್ಮಿಷನ್ ನೀಡಲು 20 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ.
ಇದನ್ನು ಓದಿ: ವಾಣಿ ವಿಲಾಸ ಮಾದರಿಯಲ್ಲಿ ಕೆ.ಸಿ. ಜನರಲ್ ನಲ್ಲೂ ತಾಯಿ-ಶಿಶು ಆಸ್ಪತ್ರೆ - ಡಾ.ಸುಧಾಕರ್
ಲಂಚ ಕೇಳಿರುವ ಬಗ್ಗೆ ಎಸಿಬಿಗೆ ಗೇಲ್ ಕಂಪನಿಯಿಂದ ದೂರು ನೀಡಲಾಗಿತ್ತು. ಸದ್ಯ ಗೇಲ್ ಕಂಪನಿಯಿಂದ 20 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಅಗಿ ಎಸಿಬಿ ಅಧಿಕಾರಿಗಳು ಹಂಸವೇಣಿಯನ್ನು ಲಾಕ್ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.