ಅಥಣಿ (ಬೆಳಗಾವಿ) : ಬೆಳ್ಳಂ ಬೆಳಗ್ಗೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿದೆ. ವಿದ್ಯಾರ್ಥಿನಿಯರಿದ್ದ ಶಾಲಾ ಬಸ್‌ ಹಾಗೂ ಗೂಡ್ಸ್‌ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿಗೆ ಕ್ಷಮೆ ಕೇಳುವ ಸೌಜನ್ಯ ಇಲ್ಲ : ಕೆ.ಎಸ್‌.ಈಶ್ವರಪ್ಪ


ಶಾಲಾ ಬಸ್ ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಬಣಜವಾಡ ಶಾಲೆಗೆ ಸೇರಿದ ವಾಹನ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ, ತೀವ್ರತೆಗೆ ಇಬ್ಬರೂ ಚಾಲಕರು ಸ್ಥಳದಲ್ಲೇ ಅಸುನೀಗಿದ್ದಾರೆ. 


ಬಸ್‌ನಲ್ಲಿ 10 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನನಿಸಲಾಗಿದೆ. ಅಪಘಾತದ ಸ್ಥಳದಲ್ಲಿ ಜನಜಂಗುಳಿ ಕೂಡಿದ್ದು, ಮಕ್ಕಳ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸುತ್ತಿದ್ದಾರೆ. 


ಇದನ್ನೂ ಓದಿ: ಕೊಳಕ ಮಂಡಲವನ್ನು ನುಂಗಿದ ನಾಗರ ಹಾವು.. ಸ್ವಲ್ಪ ಹೊತ್ತಿನ ಬಳಿಕ ಹೊರಬಂತು ಜೀವಂತ ಸರ್ಪ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.