ನಕಲಿ ದಾಖಲಾತಿ ಸೃಷ್ಟಿಸಿ ಕೋಟ್ಯಾಂತರ ರೂಪಾಯಿ ಆಸ್ತಿ ಕಬಳಿಸಲು ಯತ್ನ ಆರೋಪ..!
ನಗರದ ಪ್ರತಿಷ್ಠಿತ ಪ್ರದೇಶವಾಗಿರುವ ಬ್ರಿಗೇಡ್ ರೋಡ್ ನಲ್ಲಿರುವ 36500 ಚದರಡಿ ಜಾಗವಿರುವ ವಾಣಿಜ್ಯ ಸಂಕೀರ್ಣ ಜಾಗವನ್ನ ತಮ್ಮದೆಂದು ಸುಳ್ಳು ದಾಖಲಾತಿ ಸೃಷ್ಟಿಸಿ ದೊಮ್ಮಲೂರಿನಲ್ಲಿರುವ ರಿಜಿಸ್ಟಾರ್ ಕಚೇರಿಯಲ್ಲಿ ಫಾರೂಕ್ ಸುಲೆಮಾನ್ ಅವರ ಕುಟುಂಬ ಒಡೆತನದಲ್ಲಿರುವ ಆಸ್ತಿ ಕಬಳಿಸಲು ಯತ್ನಿಸಿದ್ದಾರೆ.
ಬೆಂಗಳೂರು: ಮೃತ ವ್ಯಕ್ತಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಕಬಳಿಸಲು ಸಂಚು ರೂಪಿಸಿದ ಆರೋಪದಡಿ ಖಾಸಗಿ ಕಂಪನಿ ಮಾಲೀಕರು ಹಾಗೂ ಅವರ ಪುತ್ರನ ವಿರುದ್ಧ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ 85 ವರ್ಷದ ಫಾರೂಕ್ ಸುಲೆಮಾನ್ ಎಂಬುವರು ನೀಡಿದ ದೂರಿನ ಮೇರೆಗೆ ಕೆ.ಕೆ.ಮೊಟ್ವಾನಿ ಕಂಪನಿ ಹಾಗೂ ಪುತ್ರ ದೀಪಕ್ ಕೆ.ಮೊಟ್ಬಾನಿ ವಿರುದ್ಧ ವಂಚನೆ, ಒಳಸಂಚು ಅರೋಪದಡಿ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ- Karnataka Assembly Election: ಸಚಿವ ವಿ. ಸೋಮಣ್ಣ ಮುನಿಸಿಗೆ ಚಾಮರಾಜನಗರ ಸಾರಥ್ಯದ ಮುಲಾಮು ಹಚ್ಚಿದ ಹೈಕಮಾಂಡ್!
ನಗರದ ಪ್ರತಿಷ್ಠಿತ ಪ್ರದೇಶವಾಗಿರುವ ಬ್ರಿಗೇಡ್ ರೋಡ್ ನಲ್ಲಿರುವ 36500 ಚದರಡಿ ಜಾಗವಿರುವ ವಾಣಿಜ್ಯ ಸಂಕೀರ್ಣ ಜಾಗವನ್ನ ತಮ್ಮದೆಂದು ಸುಳ್ಳು ದಾಖಲಾತಿ ಸೃಷ್ಟಿಸಿ ದೊಮ್ಮಲೂರಿನಲ್ಲಿರುವ ರಿಜಿಸ್ಟಾರ್ ಕಚೇರಿಯಲ್ಲಿ ಫಾರೂಕ್ ಸುಲೆಮಾನ್ ಅವರ ಕುಟುಂಬ ಒಡೆತನದಲ್ಲಿರುವ ಆಸ್ತಿ ಕಬಳಿಸಲು ಯತ್ನಿಸಿದ್ದಾರೆ. ದೂರುದಾರ ತಂದೆ ಸುಲೇಮಾನ್ ಹಜಿ ಇಬ್ರಾಹಿಂ ಅವರ ಹೆಸರಿನಲ್ಲಿದ್ದ ಜಾಗವನ್ನ ಉತ್ತರಾಧಿಕಾರಿಯಾಗಿದ್ದ ಫಾರೂಕ್ ಸುಲೇಮಾನ್ 1987 ರಂದು ಮೊಟ್ವಾನಿ ಜೊತೆ ಕಟ್ಟಡ ನಿರ್ಮಾಣದ ಒಪ್ಪಂದ ಮಾಡಿಕೊಂಡಿದ್ದರು.
ಇದನ್ನೂ ಓದಿ- ಶಾಸಕ ಮಹೇಶ್ ವಿರುದ್ಧ ತಿರುಗಿಬಿದ್ದ ನಗರಸಭೆ ಸದಸ್ಯರು!!
2012ರಲ್ಲಿ ಜಿಪಿಎ ನೀಡಲಾಗಿದ್ದು ಮಾರಾಟಕ್ಕೆ ಅಸಲಿ ಮಾಲೀಕರು ಅನುಮತಿ ನೀಡಿರಲಿಲ್ಲ. ಮಾಲ್ ನಿರ್ಮಾಣದ ದೂರುದಾರರಿಗೆ ಪ್ರಮಾಣಪತ್ರ ಕೊಡಲಾಗಿತ್ತು. ಕೆಲ ವರ್ಷಗಳ ಬಾಡಿಗೆ ನೀಡಿ ಅನಂತರ ಮಾಲ್‌ನ ಮೂಲಸೌಕರ್ಯ ನಿರ್ವಹಣೆ ಮಾಡುವಲ್ಲಿ ವಿಫಲವಾಗಿತ್ತು. ಈ ಬಗ್ಗೆ ಮಧ್ಯೆ ಪ್ರವೇಶಿಸಿದ ದೂರುದಾರರ ಕುಟುಂಬ ಪರಿಶೀಲಿಸಿದಾಗ ಪ್ರಕರಣದ ಆರೋಪಿಯು ನಕಲಿ ದಾಖಲಾತಿ ಸೃಷ್ಟಿಸಿ ಗಿಫ್ಟ್ ಡೀಡ್ ರಚಿಸಿಕೊಂಡಿರುವುದು ಕಂಡುಬಂದಿದೆ. ಫವರ್ ಅಫ್ ಆರ್ಟಾನಿ ಅಧಿಕಾರ ನೀಡದಿದ್ದರೂ ಸುಳ್ಳು ದಾಖಲೆ ರಚಿಸಿ ದೂರುದಾರರಿಗೆ ತಿಳಿಸಿದೆ ಉದ್ದೇಶಪೂರ್ವಕವಾಗಿ ಮೋಸ ಮಾಡುವ ಉದ್ದೇಶದಿಂದ ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಆರೋಪಿತರು ಸಂಪರ್ಕಕ್ಕೆ ಸಿಕ್ಕಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.