ನವದೆಹಲಿ: ಬೇಳೆ-ಕಾಳು ಬೆಲೆ ಇಳಿಸುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಸೂಚಿಸಿದ್ದಾರೆ. ನವದೆಹಲಿಯಲ್ಲಿ ಗ್ರಾಹಕ ವ್ಯವಹಾರಗಳ ಇಲಾಖೆ ಉನ್ನತ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಸಚಿವರು ಈ ಬಗ್ಗೆ ತ್ವರಿತ ಕ್ರಮಕ್ಕೆ ಸಲಹೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ತೊಗರಿ, ಕಡಲೆ ಮತ್ತು ಉದ್ದು ಮತ್ತಿತರ ಬೇಳೆಗಳ ಬೆಲೆಯಲ್ಲಿ ಶೇ.4ರಷ್ಟು ಕುಸಿತ ಕಂಡಿದೆ. ಹಾಗಿದ್ದರೂ ವ್ಯಾಪಾರಿಗಳು ದರ ಇಳಿಸದಿರುವುದು ಗಮನಕ್ಕೆ ಬಂದಿದೆ. ಎಲ್ಲಾ ವರ್ತಕರು ಬೇಳೆ- ಕಾಳು ಬೆಲೆ ಕಡಿಮೆ ಮಾಡುವಂತೆ ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದ ಸಚಿವರು, ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಧಾನ್ಯಗಳು ಲಭಿಸುವಂತೆ ಮಾಡಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇದೇ ವೇಳೆ ಹೇಳಿದರು.


ಇದನ್ನೂ ಓದಿ: "ಮುಡಾ ಬಜಾರ್‌ ವಿದ್ಯೆಯನ್ನು ಜನಸಾಮಾನ್ಯರಿಗೂ ಹೇಳಿಕೊಟ್ಟು ಕೋಟ್ಯಾಧಿಪತಿಗಳನ್ನಾಗಿ ಮಾಡಿ"


ಸಣ್ಣ ಸಣ್ಣ ವ್ಯಾಪಾರದ ಮಳಿಗೆಗಳಲ್ಲಿ ಮಾತ್ರ ತೊಗರಿ, ಉದ್ದು, ಕಡಲೆ ಬೇಳೆ ಬೆಲೆ ಇಳಿಸಲಾಗಿದೆ. ಆದರೆ ದೊಡ್ಡ ದೊಡ್ಡ ವ್ಯಾಪಾರಿ ಮಳಿಗೆಗಳಲ್ಲಿ ಬೆಲೆ ಇಳಿಸದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ಕ್ರಮಕ್ಕೆ ಮುಂದಾಗಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಬೇಳೆಗಳ ಬೆಲೆಯನ್ನು ಈ ಕೂಡಲೇ ಇಳಿಸುವಂತೆ ದೊಡ್ಡ ವರ್ತಕರಿಗೂ ಸೂಚನೆ ನೀಡಲಾಗಿದೆ. ಈ ನಿರ್ದೇಶನ ಅನುಸರಿಸಲು ವಿಫಲವಾದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಎಚ್ಚರಿಸಿದ್ದಾರೆ.


2025ಕ್ಕೆ GDP ಶೇ.7ರಷ್ಟು ಬೆಳವಣಿಗೆ


ಐಎಂಎಫ್ ವರದಿ ಪರಿಷ್ಕರಿಸಿದ್ದು, 2025ರಲ್ಲಿ ಭಾರತದ GDP ಬೆಳವಣಿಗೆ ಶೇ.7ರಷ್ಟು ಆಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಜಾಗತಿಕ ಆರ್ಥಿಕತೆಯ ಸಾಲಿನಲ್ಲಿ ಭಾರತ ಅಗ್ರ ಸ್ಥಾನದಲ್ಲಿದೆ. ಪ್ರಧಾನಿ ಮೋದಿಯವರು ಭಾರತವನ್ನು ಉನ್ನತ ಸ್ಥರಕ್ಕೆ ಕೊಂಡೊಯ್ಯುತ್ತಿದ್ದಾರೆ ಎಂಬುದಕ್ಕೆ ಐಎಂಎಫ್‌ನ ಈ ವರದಿಯೇ ನಿದರ್ಶನವೆಂದು ಜೋಶಿ ಪ್ರತಿಪಾದಿಸಿದ್ದಾರೆ.


ಇದನ್ನೂ ಓದಿ: ಪುರಾಣದಿಂದ ಅಮೂರ್ತದವರೆಗೆ ಸ್ಪೂರ್ತಿದಾಯಕ ಭರವಸೆ ಮೂಡಿಸುವ 'ಮೊಸಾಯಿಕ್ ಆಫ್ ಮಾಡರ್ನಿಟಿ'


ಭಾರತದ ಬೆಳವಣಿಗೆಯು ಆರ್ಥಿಕ ವರ್ಷ 2025ರಲ್ಲಿ ಶೇ.7ರಷ್ಟು GDP ಬೆಳವಣಿಗೆಯ ಮುನ್ಸೂಚನೆ ನೀಡಿದ್ದು, ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವ ಅಸಾಧ್ಯವಾದುದನ್ನು ಸಾಧ್ಯವಾಗಿಸಿದೆ ಎಂದು ಪ್ರಲ್ಹಾದ ಜೋಶಿ ಬಣ್ಣಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.