ದರ್ಶನ್ ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್ !?

Hindalaga Jail: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನು ರಾಜ್ಯದ ಬೇರೆ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

Written by - Yashaswini V | Last Updated : Aug 27, 2024, 11:05 AM IST
  • ರಾಜ್ಯದಲ್ಲಿ ಗಲ್ಲಿಗೇರಿಸೋ ಏಕೈಕ ಜೈಲು ಅಂದ್ರೆ ಬೆಳಗಾವಿ ಹಿಂಡಲಗಾ ಜೈಲು.
  • ಹೀಗಾಗಿ ಬೆಳಗಾವಿ ಹಿಂಡಲಗಾ ಜೈಲಿನ ಬಂದೋಬಸ್ತ್ ವ್ಯವಸ್ಥೆ ಕುರಿತು ಹಿರಿಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ.
  • ಮರಣದಂಡನೆ ಶಿಕ್ಷೆಗೆ ಗುರಿಯಾದ ಖೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸವಾಗಿದ್ದಾರೆ.
ದರ್ಶನ್ ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್ !? title=

Darshan And Gand To Hindalga Jail: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್'ಗೆ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣ ಸದ್ಯ ರಾಜ್ಯದಲ್ಲಿ ಭಾರೀ ಸಂಚಲನ‌ ಸೃಷ್ಟಿಸಿದೆ. ಸದ್ಯ ದರ್ಶನ ಅಂಡ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ದರ್ಶನ್  ಗ್ಯಾಂಗ್ ನಠೋರಿಯಸ್ ಖೈದಿಗಳು ಇರೋ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.

ಹೌದು... ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್'ಗೆ (Actor Darshan) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತ್ಯಾಥಿ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ ಇತ್ತೀಚೆಗೆ ಕೆಲವು ಫೋಟೋಗಳು, ವೀಡಿಯೋಗಳು ವೈರಲ್ ಆಗಿದ್ದವು. ಇದರಲ್ಲಿ, ದರ್ಶನ್ ಜೈಲಿನ ಆವರಣದಲ್ಲಿ ಚೇರ್ ಮೇಲೆ ಕುಳಿತು ಸಿಗರೇಟ್ ಸೇದುತ್ತಿರುವ ಪೋಟೋ ಮತ್ತು ವಿಡಿಯೋ ಕಾಲ್'ನಲ್ಲಿ ದರ್ಶನ್ ಮಾತಾಡ್ತಿರೋ ವಿಡಿಯೋ ಸದ್ಯ ಸರ್ಕಾರವನ್ನ ಮುಜುಗರಕ್ಕೆ ಸಿಲುಕಿಸಿದೆ. ಹೀಗಾಗಿ ಬೆಂಗಳೂರು ಪರಪ್ಪನ ಅಗ್ರಹಾರ (Parappana Agrahara Jail) ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನು ರಾಜ್ಯದ ಬೇರೆ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಬೆಳಗಾವಿ ಹಿಂಡಲಗಾ ಜೈಲಿಗೆ ದರ್ಶನ್ ಅಂಡ್ ಗ್ಯಾಂಗ್ (Darshan and gang to Belgaum Hindalaga Jail): 
ಸಿಎಂ ಸೂಚನೆ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ನಟ ದರ್ಶನ್ ಅಂಡ್ ಗ್ಯಾಂಗ್ ಶಿಫ್ಟ್ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಭದ್ರತಾ ದೃಷ್ಟಿಯಿಂದ ನಟ ದರ್ಶನ್ ರನ್ನ ರಾಜ್ಯದ ಬೇರೆ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಕಡಿಮೆ ಇದ್ದು, ರಾಜ್ಯದಲ್ಲೆ ಅತ್ಯಂತ ಹೆಚ್ಚು ಹೈ ಸೆಕ್ಯೂರಿಟಿ ಇರುವ ಜೈಲು ಪರಪ್ಪನ ಅಗ್ರಹಾರ. ಇಲ್ಲಿ ಸಿಸಿಟಿವಿ, ಹೈ ಫ್ರೀಕ್ವೆನ್ಸಿ ಜಾಮರ್, ಜೈಲು ಇಲಾಖೆ ತಪಾಸಣೆ ಇದೆ. ಇಷ್ಟೆಲ್ಲ ಇದ್ರು ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ನಿರ್ಲಕ್ಷ ತನದಿಂದ ರಾಜಾತಿಥ್ಯ ಸಿಕ್ಕಿದೆ. ರೌಡಿಶೀಟರ್ಸ್ ಕಮಾನೆತ್ತಿ ದರ್ಶನ್ ರಿಗೆ ನಿಯಮಗಳನ್ನ ಮತ್ತಷ್ಟು ಬಿಗಿಗೊಳಿಸಲಿರೋ ಜೈಲಾಧಿಕಾರಿಗಳು, ಕೇವಲ ರೌಡಿಶೀಟರ್ಸ್ ಗಳನ್ನ ಬೇರೆ ಜೈಲಿಗೆ ಶಿಫ್ಟ್ ಮಾಡಬಹುದು ಎನ್ನಲಾಗುತ್ತಿದೆ. 

ಇದನ್ನೂ ಓದಿ- ನಟ ದರ್ಶನ್ ಪ್ರಕರಣ; ಸಿಎಂ- ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ

ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ, ಡಬಲ್ ಮೀಟರ್ ಮೋಹನ ರನ್ನ ಸದ್ಯ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಿಕ್ಕೆ ಸಿದ್ದತೆ ನಡೆದಿದೆ. ಬಳ್ಳಾರಿ ಅಥವಾ ಶಿವಮೊಗ್ಗ ಜೈಲಿಗೆ ನಾಗನನ್ನ ಶಿಫ್ಟ್ ಮಾಡುವ ಸಾಧ್ಯತೆ ಇದ್ದು,  ಉಳಿದವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ (Belgaum Hindalaga Jail) ಶಿಫ್ಟ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

ಈ ನಿಟ್ಟಿನಲ್ಲಿಜೈಲು ಡಿಜಿ ಮಾಲೀನಿ ಕೃಷ್ಣಮೂರ್ತಿಗೆ ಸೂಚನೆ ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚನೆ ಹಿನ್ನಲೆಯಲ್ಲಿ, ಅವರು ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲು ಸೇರಿ ರಾಜ್ಯದ ಪ್ರಮುಖ ಜೈಲುಗಳ ಸ್ಥಿತಿಗತಿ ಬಗ್ಗೆ ವರದಿ ತರೆಸಿಕೊಂಡಿದ್ದಾರೆ. ಇನ್ನೂ ಸ್ವಯಂ ಸಿಎಂ ಸಿದ್ದರಾಮಯ್ಯ ಅವರೇ ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ್ದು, ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನ ಅಮಾನತು ಮಾಡಿದ್ದೇವೆ. ಇನ್ನಷ್ಟು ಜನರನ್ನ ಅಮಾನತು ಮಾಡಬೇಕಿದೆ. ಗೃಹ ಸಚಿವರಿಗೆ ಖುದ್ದಾಗಿ ಜೈಲಿಗೆ ಹೋಗಿ ಪರಿಶೀಲನೆ ನಡೆಸಲು ಸೂಚಿಸಿರುವುದಾಗಿ ಸಿಎಂ ತಿಳಿಸಿದ್ದಾರೆ.ಇದಲ್ಲದೆ,  ದರ್ಶನ ಬೇರೆ ಜೈಲಿಗೆ ಶಿಫ್ಟ್ ಮಾಡೋ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ- ನಟ ದರ್ಶನ್‌ ಮತ್ತೊಂದು ಫೋಟೋ ವೈರಲ್‌! ದಾಸನ ಪಕ್ಕ ಕುಳಿತ ವ್ಯಕ್ತಿಯ ಕ್ರೈಂ ಹಿಸ್ಟರಿ ಭಯಾನಕ!!

ರಾಜ್ಯದಲ್ಲಿ ಗಲ್ಲಿಗೇರಿಸುವ ಏಕೈಕ ಜೈಲು ಹಿಂಡಲಗಾ ಜೈಲು: 
ಇನ್ನೂ ರಾಜ್ಯದಲ್ಲಿ ಗಲ್ಲಿಗೇರಿಸೋ ಏಕೈಕ ಜೈಲು ಅಂದ್ರೆ ಬೆಳಗಾವಿ ಹಿಂಡಲಗಾ ಜೈಲು. ಹೀಗಾಗಿ ಬೆಳಗಾವಿ ಹಿಂಡಲಗಾ ಜೈಲಿನ ಬಂದೋಬಸ್ತ್ ವ್ಯವಸ್ಥೆ ಕುರಿತು ಹಿರಿಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್,  ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗಾ,ಸದಾಶಿವ ಡಾಂಗೆ,ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವರು ಸೆರೆವಾಸ ಅನುಭವಿಸಿದ್ದಾರೆ. ಮರಣದಂಡನೆ ಶಿಕ್ಷೆಗೆ ಗುರಿಯಾದ ಖೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸವಾಗಿದ್ದಾರೆ. ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಪ್ಟ್ ಮಾಡಿದ್ರೇ ಆಗುವ ಸಾಧಕಬಾಧಕ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಈ ಮಧ್ಯೆ ಜೈಲಿನಲ್ಲಿನ ಸೆಕ್ಯುರಿಟಿ ಕುರಿತು ಕೂಡ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. 

ಒಟ್ಟಿನಲ್ಲಿ ಬೆಳಗಾವಿ ಹಿಂಡಲಗಾ ಜೈಲು ಈಗಾಗಲೇ ಅನೇಕ ಅಪಖ್ಯಾತಿಯಿಂದ ಸುದ್ದಿಯಲ್ಲಿತ್ತು. ಈಗ ಕೊಲೆ ಆರೋಪಿ ದರ್ಶನ್ ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುತ್ತಾರಾ ಅನ್ನೋ ಚರ್ಚೆ ಜೋರಾಗಿದೆ.‌ ಸದ್ಯ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕುಖ್ಯಾತ ಖೈದಿಗಳಿದ್ದಾರೆ. ಹೀಗಿರೋವಾಗ ದರ್ಶನ್ ಅಂಡ್ ಗ್ಯಾಂಗ್ ಈ ಜೈಲಿಗೆ ಶಿಫ್ಟ್ ಆದ್ರೆ ಹೆಂಗೆ ಅಂತಾ ಜೈಲು ಅಧಿಕಾರಿಗಳು ತಲೆ ಕೆಡೆಸಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News