Jacqueline Fernandez: 200 ಕೋಟಿ ವಂಚನೆ ಕೇಸ್: ಜಾಕ್ವೆಲಿನ್ ಫೆರ್ನಾಂಡಿಸ್ ಹೆಸರಿನಲ್ಲಿ 7 ಕೋಟಿ ರೂ. ಡೆಪಾಸಿಟ್!
ಉದ್ಯಮಿಗಳಿಗೆ 200 ಕೋಟಿ ರೂ ವಂಚನೆ ಮಾಡಿರುವ ಅರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ಜೊತೆ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಡೇಟಿಂಗ್ ಮಾಡುತ್ತಿದ್ದರು ಎಂದು ಹೇಳಲಾಗಿತ್ತು.
ನವದೆಹಲಿ: 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿ ಸುಕೇಶ್ ಚಂದ್ರಶೇಖರ್‌ನನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ ಇಡಿ ಅಧಿಕಾರಿಗಳಿಗೆ ಮಹತ್ವದ ಮಾಹಿತಿ ಲಭಿಸಿದೆ. ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರ ಹೆಸರಿನಲ್ಲಿ ಸುಮಾರು 7 ಕೋಟಿ ರೂ. ಡೆಪಾಸಿಟ್ ಇಡಲಾಗಿದೆ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭಿಸಿದೆ ಎಂದು ಮೂಲಗಳು ತಿಳಿಸಿದೆ.
ಇದನ್ನು ಓದಿ: ಪಿಂಚಣಿದಾರರ ಗಮನಕ್ಕೆ: ಕರೆ ಮಾಡಿ... 72 ಗಂಟೆಯಲ್ಲಿ ಪೆನ್ಶನ್ ಪಡೆಯಿರಿ
ಉದ್ಯಮಿಗಳಿಗೆ 200 ಕೋಟಿ ರೂ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ಜೊತೆ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಡೇಟಿಂಗ್ ಮಾಡುತ್ತಿದ್ದರು ಎಂದು ಹೇಳಲಾಗಿತ್ತು. ಅದಕ್ಕೆ ಪುರಾವೆ ಎಂಬಂತೆ ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದೀಗ ಇಡಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಡೆಪಾಸಿಟ್ ಹಣ ಇಟ್ಟಿರುವ ಬಗ್ಗೆ ಮಾಹಿತಿ ಲಭಿಸಿದೆ.
ಶಿವಿಂದರ್ ಸಿಂಗ್ ಎಂಬವರಿಗೆ ಸುಕೇಶ್ ವಂಚನೆ ಮಾಡಿದ್ದರು ಎನ್ನಲಾಗಿತ್ತು. ಈ ಸಂಬಂಧ ಶಿವಿಂದರ್ ಪತ್ನಿ ಅದಿತಿ ಸಿಂಗ್ ನೀಡಿದ ದೂರಿನ ಮೇರೆಗೆ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇನ್ನು ಶಿವಿಂದರ್ ಈಗಾಗಲೇ ಪ್ರಕರಣವೊಂದರಲ್ಲಿ ಜೈಲು ಸೇರಿದ್ದಾರೆ. ಅವರ ಬಿಡುಗಡೆಗೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿ ಚಂದ್ರಶೇಖರ್ ಹಣ ಪಡೆದಿದ್ದರು ಎಂದು ಆರೋಪಿಸಲಾಗಿದೆ.
ಇದನ್ನು ಓದಿ: ಸೂರ್ಯಗ್ರಹಣದ ವೇಳೆ ರಾಹು-ಶನಿ-ಚಂದ್ರರ ಈ ವಿಶೇಷ ಯೋಗ ನಿರ್ಮಾಣಗೊಳ್ಳಲಿದೆ, ಎಚ್ಚರ!
ಈ ಹಿಂದೆಯೇ ಅನೇಕ ಬಾರಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ ತನಿಖೆ ಎದುರಿಸಿದ್ದರು. 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಜತೆ ಜಾಕ್ವೆಲಿನ್ ಫೋಟೋ ವೈರಲ್ ಆದ ಬಳಿಕ ಅವರಿಗೆ ಸಮನ್ಸ್ ಕೂಡ ಜಾರಿ ಮಾಡಲಾಗಿತ್ತು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.