Agnipath Scheme Protest : 'ಅಗ್ನಿಪಥ ಯೋಜನೆ' ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಇಂದು ಉಗ್ರ ಸ್ವರೂಪ ಪಡೆದುಕೊಳ್ಳುತ್ತಿವೆ. ಬಿಹಾರದಿಂದ ತೆಲಂಗಾಣದವರೆಗೆ ಜನ ಈ ಯೋಜನೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ತೆಲಂಗಾಣದ ಸಿಕಂದರಾಬಾದ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಯುವಕನೊಬ್ಬ ಬಲಿಯಾಗಿದ್ದಾನೆ. 


COMMERCIAL BREAK
SCROLL TO CONTINUE READING

ಅಗ್ನಿಪಥ್ ಯೋಜನೆಯ ವಿರೋಧಿಸಿ ಇಂದು ಸಿಕಂದರಾಬಾದ್ ನಲ್ಲಿ ನೂರಾರು ಯುವಕರು ರೈಲಿಗೆ ಬೆಂಕಿ ಹಚ್ಚಿ ನಿಲ್ದಾಣವನ್ನು ಧ್ವಂಸಗೊಳಿಸಿದ್ದಾರೆ. ಈಸ್ಟ್ ಕೋಸ್ಟ್ ಎಕ್ಸ್‌ಪ್ರೆಸ್, ಸ್ಟಾಲ್‌ಗಳು ಮತ್ತು ಇತರ ರೈಲ್ವೆ ಇಲಾಖೆಯ ಆಸ್ತಿಗಳಿಗೆ ಬೆಂಕಿ ಹಚ್ಚಿ, ನಿಲ್ದಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. 


ಇದನ್ನೂ ಓದಿ : ಅಗ್ನಿಪಥ್ ವಿರೋಧಿ ಪ್ರತಿಭಟನೆ: ಗುವಾಹಟಿ ಎಕ್ಸ್‌ಪ್ರೆಸ್‌ಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು


ಬಿಹಾರದಲ್ಲಿ ಸತತ ಎರಡನೇ ದಿನವೂ ಪ್ರತಿಭಟನೆ ಮುಂದುವರಿದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈಲು ಸಂಚಾರಕ್ಕೆ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದಾರೆ. ಆಂದೋಲನದ ಪ್ರತಿಭಟನಾಕಾರರು ರೈಲ್ವೆ ಹಳಿಗಳ ಮೇಲೆ ಕುಳಿತು ಆಕ್ರೋಶ ವ್ಯಕ್ತಪಡಿಸಲು ನಿರ್ಧರಿಸಿದ್ದರಿಂದ ರೈಲುಗಳ ಸಂಚಾರದ ಪರಿಣಾಮ ಬೀರಿತು. ಹಲವೆಡೆ ರಸ್ತೆ ಸಂಚಾರವನ್ನೂ ಬಂದ್ ಮಾಡಲಾಗಿದೆ. ಪ್ರತಿಭಟನೆ ವೇಳೆ ಕಿಡಗೇಡಿಗಳು ರೈಲ್ವೆ ಹಳಿ ಮೇಲೆ ಟೈರ್ ಸುಟ್ಟು ಹಾಕಿದ್ದಾರೆ. 


ನಡೆಯುತ್ತಿರುವ  ಪ್ರತಿಭಟನೆಯಿಂದಾಗಿ ಒಟ್ಟು 200 ರೈಲು ಸೇವೆಗಳು ಮೇಲೆ ಪರಿಣಾಮ ಬೀರಿದೆ; ದೇಶಾದ್ಯಂತ 35 ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ ಮತ್ತು 13 ಅನ್ನು ಅಲ್ಪಾವಧಿಗೆ ಸೇವೆ ಸ್ಥಗಿತಗೊಳಿಸಲಾಗಿದೆ.


ಫರಿದಾಬಾದ್‌ನ ಬಲ್ಲಬ್‌ಗಢದಲ್ಲಿ ಮೊಬೈಲ್ ಇಂಟರ್ನೆಟ್, ಎಸ್‌ಎಂಎಸ್ ಸ್ಥಗಿತ


ಅಗ್ನಿಪಥ್ ಯೋಜನೆ ವಿರುದ್ಧ ಪಲ್ವಾಲ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನಂತರ, ಹರಿಯಾಣ ಸರ್ಕಾರವು ಮುಂಜಾಗ್ರತಾ ಕ್ರಮವಾಗಿ ಫರಿದಾಬಾದ್ ಜಿಲ್ಲೆಯ ಬಲ್ಲಭಗಢ ಪ್ರದೇಶದಲ್ಲಿ 24 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಗೃಹ ಇಲಾಖೆ ಹೊರಡಿಸಿದ ಆದೇಶದ ಪ್ರಕಾರ ಶುಕ್ರವಾರ ಮಧ್ಯರಾತ್ರಿ 12 ಗಂಟೆಯ ನಂತರ ಜಾರಿಗೆ ತರಲಾಗಿದೆ, ಮೊಬೈಲ್ ಇಂಟರ್‌ನೆಟ್ ಸೇವೆಗಳು, ಬಲ್ಕ್ ಎಸ್‌ಎಂಎಸ್ (ಬ್ಯಾಂಕಿಂಗ್ ಮತ್ತು ಮೊಬೈಲ್ ರೀಚಾರ್ಜ್ ಹೊರತುಪಡಿಸಿ) ಸೇರಿದಂತೆ ಎಲ್ಲಾ ಎಸ್‌ಎಂಎಸ್ ಸೇವೆಗಳು ಮತ್ತು ಎಲ್ಲಾ ಡಾಂಗಲ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ವದಂತಿ ಹರಡುವಿಕೆಯನ್ನು ತಡೆಯಲು ಮೊಬೈಲ್ ನೆಟ್‌ವರ್ಕ್‌ಗಳನ್ನೂ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ : Viral Video: ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಹಿಡಿದ ಕಾಂಗ್ರೆಸ್ ನಾಯಕಿ..!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.