ಮೈಸೂರು: ವರದಕ್ಷಿಣೆ ಕಿರುಕುಳ ಆರೋಪಕ್ಕೆ ಎಂಟು ತಿಂಗಳ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಚೈತ್ರಾ ಅಲಿಯಾಸ್​ ಚಿಕ್ಕದೇವಿ(23) ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ. ಗಂಡ ಶರತ್‌ರಾಜ್, ಮಾವ ಮುತ್ತುರಾಜ್, ಅತ್ತೆ ಪದ್ಮ ಮತ್ತು ಚಿಕ್ಕತ್ತೆ ಮಂಜುಳಾ ವಿರುದ್ಧ ಆರೋಪ ಕೇಳಿಬಂದಿದೆ.  


ಇದನ್ನೂ ಓದಿ: ಹಾಸನದಲ್ಲಿ ಏಳು ಪತ್ರಕರ್ತ ರಿಗೆ ಸಣ್ಣಪುಟ್ಟ ಗಾಯ


ಪ್ರಕರಣ ಸಂಬಂಧ ಚೈತ್ರಾ ಪತಿ ಶರತ್‌ರಾಜ್​ರನ್ನು ವಿದ್ಯಾರಣ್ಯಪುರಂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 


2 ವರ್ಷಗಳ ಹಿಂದೆ ಕನಕಗಿರಿಯ ಶರತ್‌ರಾಜ್‌ ಜೊತೆಗೆ ಚೈತ್ರಾಳ ವಿವಾಹವಾಗಿತ್ತು. ಆದರೆ ಗಂಡನ ಮನೆಯವರ ಕಿರುಕುಳ ತಾಳಲಾರದೆ ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಾಲ್ವರ ವಿರುದ್ಧ ಆಕೆಯ ಪೋಷಕರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. 


ಇದನ್ನೂ ಓದಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಚಾಲನೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.