ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಮೃತದೇಹಗಳು ಪತ್ತೆಯಾಗಿವೆ. ಗಂಡನ ಕಿರುಕುಳ ಆರೋಪದಿಂದ ಮನನೊಂದು ತನ್ನಿಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಅತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.  


COMMERCIAL BREAK
SCROLL TO CONTINUE READING

ಕೆರೆಯಲ್ಲಿ ಶವಗಳು ತೇಲಾಡುತ್ತಿದ್ದನ್ನು ಕಂಡ ಸ್ಥಳೀಯರು ಪೊಲೀಸರು ಹಾಗೂ ಆಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸದ್ಯ ತಾಯಿ ಹಾಗೂ ಇಬ್ಬರ ಮಕ್ಕಳ ಮೃತದೇಹ ಮೇಲೆತ್ತಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ವಾಯುಕರಾರ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರ ಹೆಸರಲ್ಲಿ ವಂಚನೆ


ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ನಿವಾಸಿ ರಾಧಾ ತನ್ನಿಬ್ಬರು ಮಕ್ಕಳಾದ 4 ವರ್ಷದ ಪುತ್ರಿ ಪೂರ್ವಿತಾ ಮತ್ತು  ಒಂದೂವರೆ ವರ್ಷದ ಮತ್ತೊಬ್ಬ ಪುತ್ರಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಮೃತ ಮಹಿಳೆಯ ಗಂಡ ಮಲ್ಲಿಕಾರ್ಜುನ್ ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ರಾಧಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದಿಲ್ಲ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗ ಹೊತ್ತಿ ಉರಿದ ಮನೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.