ಬೆಂಗಳೂರು:  ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತನಿಗೆ 18 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ.ಎಲೆಕ್ಟ್ರಾನಿಕ್ ಸಿಟಿಯ ಎನ್.ಟಿ.ಟಿ.ಎಪ್ ಕಾಲೇಜಿನಲ್ಲಿ ಮೆಕೋಟ್ರೋನಿಕ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯನ್ನು ರುಷ್ಯಂತ್ ಎಂದು ಗುರುತಿಸಲಾಗಿದೆ.ನೆನ್ನೆ ತಡರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಕೂಡಲೇ ಪೋಷಕರಿಂದ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.


ಇದನ್ನೂ ಓದಿ: 2 ಎಕರೆಯಲ್ಲಿ ಪೇರು ಹಣ್ಣು ಬೆಳೆದು 30 ಲಕ್ಷ ರೂ ಆದಾಯ: ನಿಡೋಣಿ ರೈತನ ಯಶೋಗಾಥೆ..!  


ಮೊಬೈಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು ಸ್ನೇಹಿತರರಿಗೆ ಸೆಟ್ ಮಾಡಿ ವಿದ್ಯಾರ್ಥಿ ಆತ್ಮಹತ್ಯೆಮಾಡಿಕೊಂಡಿದ್ದಾನೆ ಎನ್ನಲಾಗಿದೆ.ವಿದ್ಯಾರ್ಥಿಯನ್ನು ಬಾಗಲಗುಂಟೆಯ ಹಾವನೂರು ಬಡಾವಣೆ ನಿವಾಸಿ ಎನ್ನಲಾಗಿದ್ದು ಕಾಲೇಜು ಆಡಳಿತ ಮಂಡಳಿಯ ಹಿಂಸೆಯಿಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.


ಕಾಲೇಜು ಅಡಳಿತ ಮಂಡಳಿಯವರು ಸ್ಥಳಕ್ಕೆ ಬರಬೇಕು ಅಲ್ಲಿಯವರೆಗೂ ಶವವನ್ನು ಎತ್ತುವುದಿಲ್ಲ ಎಂದು ಪೋಷಕರು ಪ್ರತಿಭಟನೆ ಮಾಡಿದ್ದಾರೆ. ಈಗ ಈ ಕುರಿತಾಗಿ ಬಾಗಲಗುಂಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ