ಚಾಮರಾಜನಗರ:  ಚಾಮರಾಜನಗರ ಪೊಲೀಸರು ತಮಿಳುನಾಡಿನ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಆರೋಪಿಯೋರ್ವ ಪರಾರಿಯಾಗಿರುವ ಘಟನೆ ಇಂದು ತಮಿಳುನಾಡಿನ ಅಸನೂರು ಸಮೀಪ ನಡೆದಿದೆ. ಚಾಮರಾಜನಗರದ 27 ವರ್ಷದ ಯುವಕ ಪರಾರಿಯಾಗಿರುವ ಆರೋಪಿ. 


COMMERCIAL BREAK
SCROLL TO CONTINUE READING

ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈರೋಡ್ ನ್ಯಾಯಾಲಯಕ್ಕೆ ಇಂದು ವಿಚಾರಣೆಗೆ ಕರೆದೊಯ್ಯುವಾಗ  ಆಸನೂರು ಬಳಿ ಹೋಟೆಲ್ ಬಳಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ- Kolkata: 21 ದಿನದ ನವಜಾತ ಶಿಶುವನ್ನು 4 ಲಕ್ಷಕ್ಕೆ ಮಾರಿದ ತಾಯಿ..!


ದೇವಾಲಯ ಹುಂಡಿ ಕಳವು, ರಾಬರಿ ಸೇರಿದಂತೆ  ಚಾಮರಾಜನಗರ ಗ್ರಾಮಾಂತರ ಠಾಣೆ, ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಈತನ ವಿರುದ್ಧ ಹಲವು ಪ್ರಕರಣ ದಾಖಲಾಗಿತ್ತು. ಅದೇ ರೀತಿ, ತಮಿಳುನಾಡಿನ ಈರೋಡ್ ಜಿಲ್ಲಾ ವ್ಯಾಪ್ತಿಯಲ್ಲೂ ಈತನ ವಿರುದ್ಧ ಕಳವು ಪ್ರಕರಣಗಳು ದಾಖಲಾಗಿತ್ತು.


ಇದನ್ನೂ ಓದಿ- ಬೆಂಗಳೂರಿನಲ್ಲಿ ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಸೈಕೋ ಪತಿ!


ಸದ್ಯ, ಚಾಮರಾಜನಗರ ಪೊಲೀಸರು ಆಸನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಹುಡುಕಾಟಕ್ಕೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ