ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿ ಎನ್.ವಿ.ಸುನೀಲ್ ಕುಮಾರ್ ಎಂಬಾತನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಜ್ಞಾನ ಜ್ಯೋತಿ ಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಮೂಲಕ ಪರೀಕ್ಷೆ ಬರೆದಿದ್ದಾನೆ ಎಂದು ತಿಳಿದುಬಂದಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: ಪಿಎಸ್‌ಐ ಅಕ್ರಮ ಪ್ರಕರಣ : ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಸಿಐಡಿ ವಶಕ್ಕೆ


ಈ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಮೂಲಕ ಬಂದಿದ್ದ ಅಭ್ಯರ್ಥಿ ಈತ ಎಂದು ತಿಳಿದುಬಂದಿದೆ. ಸುನೀಲ್​ನನ್ನು ಬೆಂಗಳೂರಿನಿಂದ ಕಲಬುರಗಿಗೆ ಕರೆತಂದಿರುವ ತನಿಖಾಧಿಕಾರಿಗಳ ತಂಡ ಸದ್ಯ ವಿಚಾರಣೆ ನಡೆಸುತ್ತಿದೆ. ಈತ ಸುಮಾರು ರೂ.40 ಲಕ್ಷ ನೀಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ  ಪ್ರಮುಖ ಆರೋಪಿಗಳಾದ ಆರ್‌.ಡಿ.ಪಾಟೀಲ್ ಹಾಗೂ  ಮಂಜುನಾಥ ಅಲಿಯಾಸ್‌ ಮಲ್ಲುಗೌಡ ಎಂಬಾತನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿವರೆಗೆ ಈ ಪ್ರಕರಣ ಸಂಬಂಧ 16 ಜನರನ್ನು ಪೊಲೀಸರು ಬಂಧಿಸಿದ್ದಾರೆ. 


ಬ್ಲೂಟೂತ್ ಬಳಸಿ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಹೊತ್ತಿರುವ ಆರ್‌.ಡಿ ಪಾಟೀಲ್‌ ಒಂದು ವಾರದಿಂದ ತಲೆಮರೆಸಿಕೊಂಡಿದ್ದ. ಆರ್‌.ಡಿ ಪಾಟೀಲ್‌ ಅವರ ಅಣ್ಣ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಪಾಟೀಲ್‌ರನ್ನು ಪೊಲೀಸರು ಈ ಹಿಂದೆಯೇ ಬಂಧಿಸಿದ್ದರು. ಆ ಬಳಿಕ ಆರ್‌.ಡಿ ಪಾಟೀಲ್‌ರ ಪತ್ತೆಗೆ ಬಲೆ ಬೀಸಿದ ಪೊಲೀಸರು, ಮೊಬೈಲ್ ಲೊಕೇಶನ್ ಪತ್ತೆ ಮಾಡಿ ತನಿಖೆ ಕೈಗೊಂಡಿದ್ದರು. ಬಳಿಕ ಆರೋಪಿ ಮಹಾರಾಷ್ಟ್ರದ ಸೋಲಾಪುರದಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. 


ಇದನ್ನು ಓದಿ: PSI Recruitment Scam: ಇನ್ನೂ ಪತ್ತೆಯಾಗದೆ ತಲೆಮರೆಸಿಕೊಂಡಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ!


ಪ್ರಕರಣದ ಹಿನ್ನೆಲೆ: 
ಪಿಎಸ್ಐ ನೇಮಕಾತಿ ಪರೀಕ್ಷೆ ವೇಳೆ ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಬ್ಲ್ಯೂಟೂತ್ ಮೂಲಕ ಸಹಾಯ ಮಾಡಿದ್ದಾರೆ ಎಂಬ ಆರೋಪ ಇವರ ಮೇಲೆ ಇದೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.