ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ: ಮದುವೆಗೆ ನಿರಾಕರಿಸಿದ ಮಹಿಳೆ ಮೇಲೆ ಆ್ಯಸಿಡ್ ದಾಳಿ

Acid Attack: ಆರೋಪಿ ಮತ್ತು ನೊಂದ ಮಹಿಳೆ ಇಬ್ಬರೂ ಅಗರಬತ್ತಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಸಂತ್ರಸ್ತ ಮಹಿಳೆಗೆ ಮದುವೆ ಆಗಿ 3 ಮಕ್ಕಳಿದ್ದಾರೆ. ಹೀಗಿದ್ದರೂ ಆರೋಪಿ ಮಹಿಳೆಯನ್ನು ಪ್ರೀತಿಸುತ್ತಿದ್ದ. ಜೊತೆಗೆ ಮದುವೆ ಆಗುವಂತೆ ಪೀಡಿಸುತ್ತಿದ್ದ ಎಂದು ತಿಳಿದುಬಂದಿದೆ.

Written by - VISHWANATH HARIHARA | Edited by - Yashaswini V | Last Updated : Jun 10, 2022, 01:11 PM IST
  • ಅಹ್ಮದ್​ ಎಂಬಾತ ಆ್ಯಸಿಡ್ ದಾಳಿ ನಡೆಸಿರುವ ಆರೋಪಿ.
  • ಈತ ವಿವಾಹಿತ ಮಹಿಳೆಯನ್ನ ಪ್ರೀತಿಸುತ್ತಿದ್ದ.
  • ತನ್ನನ್ನು ಮದುವೆಯಾಗುವಂತೆ ದುಂಬಾಲು ಬಿದ್ದಿದ್ದ.
ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ: ಮದುವೆಗೆ ನಿರಾಕರಿಸಿದ ಮಹಿಳೆ ಮೇಲೆ ಆ್ಯಸಿಡ್ ದಾಳಿ title=
Acid attack in benglauru

ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ  ಮತ್ತೊಬ್ಬ ಮಹಿಳೆಮೇಲೆ ಆ್ಯಸಿಡ್ ದಾಳಿ ನಡೆದಿದೆ. ಬೆಂಗಳೂರಿನ ಸಾರಕ್ಕಿ ಬಳಿ ಘಟನೆ ನಡೆದಿದ್ದು, ಮಹಿಳೆಯ ಪರಿಚಯಸ್ಥನಿಂದಲೇ ಈ ಕೃತ್ಯ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಅಹ್ಮದ್​ ಎಂಬಾತ ಆ್ಯಸಿಡ್ ದಾಳಿ ನಡೆಸಿರುವ ಆರೋಪಿ. ಈತ ವಿವಾಹಿತ ಮಹಿಳೆಯನ್ನ ಪ್ರೀತಿಸುತ್ತಿದ್ದ. ತನ್ನನ್ನು ಮದುವೆಯಾಗುವಂತೆ ದುಂಬಾಲು ಬಿದ್ದಿದ್ದ. ಈ ವೇಳೆ ಮದುವೆಯಾಗಲು ಒಪ್ಪದಿದ್ದಾಗ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಆ್ಯಸಿಡ್ ದಾಳಿಯಿಂದ ಮಹಿಳೆ ಬಲಗಣ್ಣಿಗೆ ಗಂಭೀರ ಗಾಯವಾಗಿದ್ದು, ಗಾಯಾಳು ಮಹಿಳೆಯನ್ನ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ- ಲವ್ ಮಾಡಲ್ಲ ಎಂದ ಯುವತಿ ಮೇಲೆ ಆಸಿಡ್ ಎರಚಿದ ಪಾಗಲ್ ಪ್ರೇಮಿ

ಆರೋಪಿ ಮತ್ತು ನೊಂದ ಮಹಿಳೆ ಇಬ್ಬರೂ ಅಗರಬತ್ತಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಸಂತ್ರಸ್ತ ಮಹಿಳೆಗೆ ಮದುವೆ ಆಗಿ 3 ಮಕ್ಕಳಿದ್ದಾರೆ. ಹೀಗಿದ್ದರೂ ಆರೋಪಿ ಮಹಿಳೆಯನ್ನು ಪ್ರೀತಿಸುತ್ತಿದ್ದ. ಜೊತೆಗೆ ಮದುವೆ ಆಗುವಂತೆ ಪೀಡಿಸುತ್ತಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ-  ಹುಡುಗಿ ಮನೆಯವರು ಒಪ್ಪಿದ್ರೆ ಮದುವೆ ಆಗ್ತಿನಿ: ಆ್ಯಸಿಡ್ ನಾಗ

ಗೋರಿಪಾಳ್ಯದ ನಿವಾಸಿಯಾಗಿರುವ ಆರೋಪಿ ಅಹ್ಮದ್, ಮಹಿಳೆ ಕೆಎಸ್ ಲೇಔಟ್​ನಿಂದ ಜೆಪಿ ನಗರ ಕಡೆಗೆ ತೆರಳುತಿದ್ದಾಗ ಈ ಕೃತ್ಯ ಎಸಗಿದ್ದಾನೆ. ಸದ್ಯ ಆರೋಪಿಯನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News