ರಾಜಧಾನಿಯಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ: ವೈದ್ಯರೇ ಪ್ರಕರಣದಲ್ಲಿ ಶಾಮೀಲು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿರುಮಲಶೆಟ್ಟಿ ಹಳ್ಳಿಯ ಖಾಸಗಿ ಆಸ್ಪತ್ರೆಯ ಆರವರಣದಲ್ಲಿರುವ ಕಸದ ತೊಟ್ಟಿಯಲ್ಲಿ ಹೆಣ್ಣು ಭ್ರೂಣ ಪತ್ತೆಯಾಗಿದ್ದು, ಅಲ್ಲಿನ ವೈದ್ಯರು ಮತ್ತು ಸಿಬ್ಬಂಧಿಗಳನ್ನು ಬಂಧಿಸಲಾಗಿದೆ.
Crime News: ರಾಜ್ಯದಲ್ಲಿ ದಿನೇ ದಿನೇ ಹೆಣ್ಣು ಮಕ್ಕಳ ಲಿಂಗಾನುಪಾತ ಕಡಿಮೆಯಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣವೇ ಹೆಚ್ಚುತ್ತಿರುವ ಹೆಣ್ಣು ಭ್ರೂಣ ಹತ್ಯೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ಪಾಪಿ ಕೃತ್ಯಕ್ಕೆ ಕಡಿವಾಣವೇ ಇಲ್ಲದಂತಾಗಿದೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಖಾಸಗಿ ಆಸ್ಪತ್ರೆಯ ಆವರಣದ ಕಸದ ಬುಟ್ಟಿಯಲ್ಲಿ ಕಂಡು ಬಂದಿರುವ ಹೆಣ್ಣು ಭ್ರೂಣ ಪತ್ತೆ ಇದಕ್ಕೆ ಕನ್ನಡಿ ಹಿಡಿದಂತಿದೆ.
ಹೌದು, ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದೆ. ಏತನ್ಮಧ್ಯೆ, ಬೆಂಗಳೂರಿನ ಹೊಸಪೇಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಖಾಸಗಿ ಆಸ್ಪತ್ರೆಯೊಂದರ ಆರವರಣದಲ್ಲಿರುವ ಕಸದ ತೊಟ್ಟಿಯಲ್ಲಿ ಹೆಣ್ಣು ಭ್ರೂಣ ಪತ್ತೆಯಾಗಿದೆ.
ಇದನ್ನೂ ಓದಿ- 150 ಗ್ರಾಂ ಚಿನ್ನ, 15 ಎಕರೆ ಭೂಮಿ & BMW ಬೇಡಿಕೆಯಿಂದ ಮದುವೆ ರದ್ದು: ವೈದ್ಯೆ ಆತ್ಮಹತ್ಯೆ!
ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತಿರುವ ಪೊಲೀಸರು ಎಫ್‌ಐಆರ್ ದಾಖಲಿಸಿ ಅಲ್ಲಿನ ವೈದ್ಯರು ಮತ್ತು ಸಿಬ್ಬಂದಿಗಳನ್ನು ಬಂಧಿಸಿ, ಆರೋಗ್ಯಾಧಿಕಾರಿಗಳ ಸಲಹೆ ಮೇರೆಗೆ ಆಸ್ಪತ್ರೆಯನ್ನು ಸೀಲ್ ಮಾಡಿದ್ದಾರೆ. ಇನ್ನೊಂದೆಡೆ ಈ ಖಾಸಗಿ ಆಸ್ಪತ್ರೆಯ ಮಾಲೀಕ ತಲೆಮರೆಸಿಕೊಂಡಿದ್ದು ಆತನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.
ರಾಜ್ಯದಲ್ಲಿ ಅಕ್ರಮ ಗರ್ಭಪಾತದ ಮೂಲಕ ಪತ್ತೆಯಾದ ಮೊದಲ ಭ್ರೂಣ ಹತ್ಯೆ ಇದಾಗಿದೆ ಎಂದು ರಾಜ್ಯ ಆರೋಗ್ಯ ಆಯುಕ್ತ ಡಿ. ರಂದೀಪ್ ಮಾಹಿತಿ ನೀಡಿದ್ದಾರೆ. ಈ ಭ್ರೂಣ ಹತ್ಯೆಯಲ್ಲಿ ಆಸ್ಪತ್ರೆ ಸಿಬ್ಬಂಧಿಯ ಕೈವಾಡ ಇರುವುದು ಮೇಲ್ನೋಟಕ್ಕೆ ಕಂಡುಬಂದರೂ ಯಾವುದೇ ಸೂಕ್ತ ದಾಖಲೆಗಳು ದೊರೆತಿಲ್ಲ.
ಇದನ್ನೂ ಓದಿ- ಕೊಲೆಯಲ್ಲಿ ಅಂತ್ಯವಾದ ಸಿಪಿವೈ ಬಾವ ನಾಪತ್ತೆ ಕೇಸ್: ಹರಸಾಹಸ ಪಟ್ಟು 50 ಅಡಿ ಕಂದಕದಿಂದ ಶವ ಹೊರಕ್ಕೆ
ಈ ಪ್ರಕರಣದ ವಿರುದ್ಧ ಲೈಂಗಿಕ ಆಯ್ಕೆ ನಿಷೇಧ ಕಾಯ್ದೆಯ ಅಡಿಯಲ್ಲಿ, ಸಸೆಕ್ಷನ್ 312 (ಗರ್ಭಪಾತಕ್ಕೆ ಕಾರಣ), 314 (ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯದಿಂದ ಉಂಟಾಗುವ ಸಾವು) ಐಸಿಪಿ ಸೆಕ್ಷನ್ 315 (ಮಗು ಜೀವಂತವಾಗಿ ಜನಿಸುವುದನ್ನು ತಡೆಯುವ ಅಥವಾ ಹುಟ್ಟಿದ ನಂತರ ಸಾಯುವಂತೆ ಮಾಡುವ ಉದ್ದೇಶ)ಅಡಿಯಲ್ಲಿ ಈ ಖಾಸಗಿ ಆಸ್ಪತ್ರೆಯ ಮಾಲೀಕರು, ವೈದ್ಯರು ಹಾಗೂ ನರ್ಸ್‌ಗಳ ವಿರುದ್ಧ ಕೇಸ್‌ಗಳನ್ನು ಹಾಕಿ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.