ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  


COMMERCIAL BREAK
SCROLL TO CONTINUE READING

ಬೆಂಗಳೂರಿನ ಜಯನಗರದ 7ನೇ ಬಡಾವಣೆಯಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು ಮಲಗಿದ್ದ ಓರ್ವ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.


ಇದನ್ನೂ ಓದಿ: ಡಿ.ಕೆ.ಶಿವಕುಮಾರ್‌ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ!


ಕುಡಿದು ಮಲಗಿದ್ದ ವ್ಯಕ್ತಿಯ ಮೇಲೆ ಮತ್ತೊಬ್ಬ ಬಂದು ಬಿದ್ದಿದ್ದ. ಪರಿಣಾಮ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ತಿರುಗಿದ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.


ಹತ್ಯೆಯಾದ ವ್ಯಕ್ತಿ ಮತ್ತು ಆರೋಪಿಯ ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಬನಶಂಕರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


ಇದನ್ನೂ ಓದಿ: ಜೈಲಿನಿಂದ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿದ ಎಚ್.ಡಿ.ರೇವಣ್ಣ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.