ಉಡುಪಿ: ಕೊಲ್ಲೂರು ಸಮೀಪದ ಅರಿಶಿನಗುಂಡಿ ಜಲಪಾತದಲ್ಲಿ  ಕಾಲು ಜಾರಿ ಬಿದ್ದು ಕೊಚ್ಚಿ ಹೋಗಿದ್ದ ಶರತ್ ಕುಮಾರ್(23) ಮೃತದೇಹ ಪತ್ತೆಯಾಗಿದೆ. ಸತತ 1 ವಾರಗಳ ನಿರಂತರ ಶೋಧ ಕಾರ್ಯದ ಬಳಿಕ ಭಾನುವಾರ ಯುವಕನ  ಮೃತದೇಹ ಪತ್ತೆಯಾಗಿದೆ.


COMMERCIAL BREAK
SCROLL TO CONTINUE READING

ಭದ್ರಾವತಿ ಮೂಲದ ಯುವಕ ಶರತ್ ಕುಮಾರ್ ತನ್ನ ಸ್ನೇಹಿತನೊಂದಿಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಅರಿಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ. ಈ ವೇಳೆ ತುಂಬಿ ಹರಿಯುತ್ತಿದ್ದ ನದಿ ಬಳಿ ನಿಂತು ರೀಲ್ಸ್ ಮಾಡಲು ಹೋಗಿದ್ದ ಆತ ಕಾಲು ಜಾರಿ ಬಿದ್ದು ಕೊಚ್ಚಿಕೊಂಡು ಹೋಗಿದ್ದ.


ಇದನ್ನೂ ಓದಿ: KPSC Recruitment 2023: ಕೆಪಿಎಸ್‍ಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ


ಶರತ್ ಕುಮಾರ್ ಕಾಲು ಜಾರಿ ನದಿಯಲ್ಲಿ ಬೀಳುತ್ತಿರುವ ದೃಶ್ಯವು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ತಮ್ತು ಪೊಲೀಸ್ ಸಿಬ್ಬಂದಿ ಶರತ್‍ ಕುಮಾರ್‍ಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದರು.


ಮೃತದೇಹ ಪತ್ತೆಹಚ್ಚಲು ಮುಳುಗು ತಜ್ಞರು, ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಹಗಲು ರಾತ್ರಿ ಎನ್ನದೇ ಶೋಧ ಕಾರ್ಯಾಚರಣೆ ನಡೆಸಿದ್ದರು. ನಿರಂತರ ಶೋಧ ಕಾರ್ಯದ ಬಳಿಕ ಮೃತದೇಹ ಪತ್ತೆಯಾಗಿದೆ. ಶರತ್ ಕುಮಾರ್ ಮೃತದೇಹವು 200 ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗೆ ಸಿಲುಕಿತ್ತು ಎಂದು ತಿಳಿದುಬಂದಿದೆ.


ಇದನ್ನೂ ಓದಿ: Kalaburgi: ಸಚಿವರು ತಮ್ಮ ವರ್ತನೆ ಸರಿಪಡಿಸಿಕೊಳ್ಳದಿದ್ದರೆ ನಮ್ಮ ಹೋರಾಟ ಮುಂದುವರೆಯಲಿದೆ - ಶಾಸಕ ಬಿ.ಆರ್.ಪಾಟೀಲ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.