ಬೆಂಗಳೂರು: ಹೊಟ್ಟೆಪಾಡಿಗಾಗಿ ಡೆಲಿವರಿ ಬಾಯ್ಸ್ ಆಗಿ ರಸ್ತೆಯಲ್ಲಿ ಹೊಟ್ಟೆಪಾಡಿಗಾಗಿ ಹಗಲು ರಾತ್ರಿ ದುಡಿಯುತ್ತಾರೆ. ಇವರ ಕೆಲಸಕ್ಕೆ ಮೊಬೈಲ್ ಬೇಕೇಬೇಕು. ಸದ್ಯ ಡೆಲಿವರಿ ಬಾಯ್ಸ್ ಗಳನ್ನು ಟಾರ್ಗೆಟ್ ಮಾಡಿ ಅವರ ಮೊಬೈಲ್ ಫೋನ್ ಗಳನ್ನೆ ಎಗರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ರಾತ್ರಿ ವೇಳೆ ಎಲೆಕ್ಟ್ರಿಕ್ ಬೈಕ್ನಲ್ಲಿ ಡೆಲಿವರಿ ಮಾಡುವ  ಹುಡುಗರೇ ಟಾರ್ಗೇಟ್ ಇವರು ಹುಡುಗರು ಯುಲು(yulu) ನಂತಹ ಸಣ್ಣ ಎಲೆಕ್ಟ್ರಿಕ್ ಬೈಕ್ ಗಳ ಮುಂದೆ  ಕ್ಲಿಪ್ ಹಾಕಿ ಮೊಬೈಲ್ ಸಿಕ್ಕಿಸುತ್ತಾರೆ. ರೂಟ್ ಮ್ಯಾಪ್ ನೋಡಲು ಹೀಗೆ ಕ್ಲಿಪ್ ಹಾಕಿ ಸಿಕ್ಕಿಸಿಕೊಳ್ಳುವ ಡೆಲಿವರಿ ಬಾಯ್ ಗಳನ್ನ ಟಾರ್ಗೆಟ್ ಮಾಡಿ ಡೆಲಿವರಿ ಬಾಯ್ಸ್ ಗಳನ್ನ ಫಾಲೋ ಮಾಡಿ
ಕ್ಷಣಾರ್ಧದಲ್ಲಿ ಹಿಂಬದಿಯಿಂದ ಬೈಕ್ನಲ್ಲಿ ಬಂದು ಮೊಬೈಲ್ ಕಸಿದು ಪರಾರಿಯಾಗುತ್ತಿದ್ರು. ಹಿಂದೆ ಸೆಕ್ಯೂರಿಟಿ ಕೆಲಸ‌ ಮಾಡುತ್ತಿದ್ದ ಅಸ್ಸಾಂ ಮೂಲದ ರಾಕೇಶ್ ಹಾಗೂ ಮಲ್ಲಿಕ್ ಈ ಪ್ರಕರಣದ ಬಂಧಿತ ಆರೋಪಿಗಳಾಗಿದ್ದಾರೆ.


ಇದನ್ನೂ ಓದಿ: Crime: ವಾಟ್ಸಾಪ್‌, ಫೇಸ್‌ಬುಕ್‌ನಲ್ಲಿ ಹುಡುಗಿಯರಿಗೆ ಹಾರ್ಟ್‌ ಎಮೋಜಿ ಕಳಿಸಿದ್ರೆ ಜೈಲ್‌ ಗ್ಯಾರಂಟಿ..!


ಕಳೆದ ಕೆಲ ದಿನಗಳ ಹಿಂದೆ ಸುದ್ದುಗುಂಟೆ ಪಾಳ್ಯದಲ್ಲಿ ಮೊಬೈಲ್ ಸುಲಿಗೆ ವೇಳೆ ಡೆಲಿವರಿ ತನ್ನ ಮೊಬೈಲ್ ಕಳ್ಳತನವಾಗುವುದನ್ನು ತಡೆಯಲು ಹೋಗಿ ಬೈಕ್ ನಿಂದ ಸ್ಕಿಡ್ ಆಗಿ ಬಿದ್ದು ಕೈ ಮುರಿದುಕೊಂಡಿದ್ದ.


ನಂತರ ಈ ಸಂಬಂಧ ಸುದ್ದು ಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಪ್ರಕರಣವನ್ನ ಗಂಭೀರವಾಗಿ ಪೊಲೀಸರು  ವಿಶೇಷ ತಂಡ ರಚಿಸಿ ಆರೋಪಿಗಳ ಬಂಧಿಸವಲ್ಲಿ  ಯಶಸ್ವಿಯಾಗಿದ್ದಾರೆ. ಆರೋಪಿಗಳ ವಿಚಾರಣೆ  ವೇಳೆ ಬೇರೊಬ್ಬರಿ 32 ಮೊಬೈಲ್ ಸುಲಿಗೆ ಪ್ರಕರಣಗಳು ಬೆಳಕಿಗೆ ಬಂದಿದ್ದು ಸದ್ಯ 25 ಮೊಬೈಲ್ ರಿಕವರಿ ಮಾಡಿ ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.